ಶ್ರೀಸಿಮೆಂಟ್ ಅಧಿಕಾರಿಗಳನ್ನು ಬಂಧಿಸಲು ಕರವೇ ಒತ್ತಾಯ
Team Udayavani, Dec 16, 2018, 11:16 AM IST
ಸೇಡಂ: ಶ್ರೀಸಿಮೆಂಟ್ ಕಾರ್ಖಾನೆಯಲ್ಲಿ ಶುಕ್ರವಾರ ನಡೆದ ಬೆಲ್ಟ್ ದುರಂತಕ್ಕೆ ಕಾರಣರಾದ ಕಾರ್ಖಾನೆ ಅಧಿಕಾರಿಗಳನ್ನು ಬಂಧಿಸಬೇಕು ಮತ್ತು ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರವೇ (ನಾರಾಯಣಗೌಡ) ಕಾರ್ಯಕರ್ತರು ಕಾರ್ಖಾನೆ ಗೇಟ್ ಬಂದ್ ಮಾಡಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಮಹೇಶ ಕಾಶಿ ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದ್ದು, ಪ್ರತಿ ಬಾರಿಯೂ ಕಾರ್ಮಿಕರೇ ಬಲಿಯಾಗುತ್ತಿದ್ದಾರೆ. ಅವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕಾರ್ಮಿಕರು ಮೃತಪಟ್ಟರೂ ಕಿಂಚಿತ್ತೂ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿಕೊಳ್ಳದೇ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆಪಾದಿಸಿದರು.
ಕೂಡಲೇ ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಎಂಟು ದಿನಗಳ ಒಳಗಾಗಿ ಕಾರ್ಖಾನೆ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು. ನಂತರ ಸ್ಥಳದಲ್ಲೇ ಇದ್ದ ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ಸುಶೀಲಕುಮಾರ ಹಾಗೂ ಕಾರ್ಖಾನೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ತಾಲೂಕು ಅಧ್ಯಕ್ಷ ಅಂಬರೀಶ ಊಡಗಿ, ವಿಜಯಕುಮಾರ ಕುಲಕರ್ಣಿ, ಇಲಿಯಾಸ್ ಪಟೇಲ, ಅನೀಲಕುಮಾರ ಹಳಿಮನಿ, ಸತೀಶ ದುದನಿ, ಶಿವಪ್ಪ ಜುಲ್ಪಿ, ಜನಾರ್ಧನರೆಡ್ಡಿ ತುಳೇರ್, ರವಿ ರಾಠೊಡ, ಆನಂದಕುಮಾರ, ಮಲ್ಲಿಕಾರ್ಜುನ, ಶಿವಾಜಿ, ಹಣಮಂತ, ಸಂತೋಷ ನಾಮವಾರ, ರಾಹುಲ ಪಾಟೀಲ ದುದನಿ, ಸಂತೋಷ ಕುರಕುಂಟಾ, ಮಹ್ಮದ ತೈಬರ್, ಮಹಾಂತೇಶ ಊಡಗಿ, ರಾಘವೇಂದ್ರ ಕುರಕುಂಟಾ, ಕೈಲಾಸಲಿಂಗ ಪಾಟೀಲ, ಶರಣು ಚಂದಾಪುರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.