ಮದ್ಯ ಅಂಗಡಿ ತೆರವಿಗೆ ಒತ್ತಾಯ
Team Udayavani, Oct 28, 2021, 9:40 AM IST
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣ ಸಮೀಪ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯದ ಅಂಗಡಿ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವ ರಾಮೇಗೌಡ ಬಣ) ಆಗ್ರಹಿಸಿದೆ.
ವಿಶ್ವವಿದ್ಯಾಲಯ ಆವರಣದ ಸಮೀಪವೇ ಮದ್ಯದ ಅಂಗಡಿ ತೆರೆಯಲಾಗಿದೆ. ಇದರಿಂದ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಮದ್ಯದ ಅಂಗಡಿ ರದ್ದುಗೊಳಿಸಬೇಕೆಂದು ಸಂಘಟನೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ನೇತೃತ್ವದಲ್ಲಿ ಕಾರ್ಯಕರ್ತರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.
ಶಾಲೆ-ಕಾಲೇಜುಗಳು, ಸರ್ಕಾರಿ ಕಚೇರಿಗಳ ಹತ್ತಿರ ಮದ್ಯದ ಅಂಗಡಿ, ಬಾರ್ ಇರಬಾರದು ಎಂದು ಸರ್ಕಾರದ ನಿಯಮಗಳೇ ಹೇಳುತ್ತವೆ. ಆದರೆ, ಇಲ್ಲಿ ವಿಶ್ವವಿದ್ಯಾಲಯ ಸಮೀಪವೇ ಎಂಎಸ್ ಐಎಲ್ ಮದ್ಯದ ಅಂಗಡಿ ತೆರೆದಿರುವುದು ಖಂಡನೀಯವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಅಂಗಡಿ ಸ್ಥಳಾಂತರ ಮಾಡಬೇಕು ಅಥವಾ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ವಿಳಂಬ ನೀತಿ ಅನುಸರಿಸದೇ ನ.1ರ ಒಳಗಾಗಿ ಮದ್ಯದ ಅಂಗಡಿ ತೆರವು ಗೊಳಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಪ್ರಹ್ಲಾದ ಹಡಗೀಲಕರ್, ನಗರಾಧ್ಯಕ್ಷ ಚರಣರಾಜ್ ರಾಠೊಡ, ಯಲ್ಲಯ್ಯ ಗುತ್ತೇದಾರ ಈ ಸಂದರ್ಭದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.