ಅತಿವೃಷ್ಟಿ-ಅನಾವೃಷ್ಟಿ ನೆರವಿಗೆಕೇಂದ್ರಕ್ಕೆ ಪ್ರಸ್ತಾವನೆ: ದೇಶಪಾಂಡೆ

Team Udayavani, Aug 25, 2018, 10:22 AM IST

gul-4.jpg

ಕಲಬುರಗಿ: ರಾಜ್ಯದಲ್ಲಿನ ಅತಿವೃಷ್ಟಿ-ಅನಾವೃಷ್ಟಿ ಹಾನಿ ಕುರಿತು ಸಮೀಕ್ಷೆ ನಡೆದಿದ್ದು, ವರದಿ ಬಂದ ನಂತರ ಕೇಂದ್ರಕ್ಕೆ ನೆರವು ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಶುಕ್ರವಾರ ಜಿಲ್ಲೆಯ ಕಮಲಾಪುರ ಬಳಿ ಅನಾವೃಷ್ಟಿಯಿಂದ ಹಾನಿಗೀಡಾದ ಬೆಳೆ ವೀಕ್ಷಿಸಿದ ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿನ ಒಟ್ಟಾರೆ ಹಾನಿ ಕುರಿತು ಸರ್ವ ನಿಟ್ಟಿನಿಂದಲೂ ಸಮೀಕ್ಷೆ ನಡೆದಿದೆ. ಅದೇ ರೀತಿ ಮಳೆ ಕೊರತೆಯಿಂದ ರಾಜ್ಯದ ಇತರೆ ಭಾಗದಲ್ಲಿ ಆಗಿರುವ ಬೆಳೆ ಹಾನಿ ಕುರಿತು ವರದಿ ತರಿಸಲಾಗುತ್ತಿದೆ.

ಎಲ್ಲವನ್ನು ಕ್ರೋಢೀಕರಿಸಿ ನೆರವು ಕೋರಿ ಕೇಂದ್ರದ ಮೊರೆ ಹೋಗಲಾಗುವುದು. ಕೇರಳದಂತೆ ನಮಗೂ ಹೆಚ್ಚಿನ ಪರಿಹಾರ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ಈಗಾಗಲೇ ಕೇಂದ್ರ ಸಚಿವ ಅನಂತಕುಮಾರ ಭರವಸೆ ನೀಡಿದ್ದಾರೆ. ಅಲ್ಲದೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗಿಗೆ ಆಗಮಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಸೂಕ್ತ ನೆರವು ನೀಡಲಿದೆ ಎನ್ನುವ
ವಿಶ್ವಾಸವಿದೆ. ಕೊಡಗಿನಲ್ಲಿನ ಪ್ರವಾಹ ಕುರಿತಾಗಿ ಪ್ರಧಾನಮಂತ್ರಿಗಳು ಹಾಗೂ ರಾಷ್ಟ್ರಪತಿ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಕೇಂದ್ರದ ಪಡೆಗಳು ಪರಿಹಾರೋಪಾಯದಲ್ಲಿ ಕಾರ್ಯನಿರತವಾಗಿವೆ. ಈ ವಿಷಯದಲ್ಲಿ ರಾಜಕೀಯ ಮಾತನಾಡೋದು ಬೇಡ ಎಂದರು.

ಹಣಕಾಸು ಇಲಾಖೆಗೆ ಪ್ರಸ್ತಾವನೆ: ರಾಜ್ಯದಲ್ಲಿನ 50 ಹೊಸ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯವಾಗಿ ನೂತನ ತಾಲೂಕಿನಲ್ಲಿ 14 ಕಚೇರಿಗಳನ್ನು ಕಾರ್ಯಾರಂಭ ಮಾಡಬೇಕಾಗಿವೆ.

ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಖರೀದಿಸುವ ನಿರ್ಣಯ ಕೈಗೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರಕ್ಕೆ ಉದ್ದು, ಹೆಸರು ಖರೀದಿಗೆ ಸಂಬಂಧಪಟ್ಟಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಸಹಾಯಕ ಆಯುಕ್ತ ರಾಚಪ್ಪ, ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರ, ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಹಿರಿಯ ಮುಖಂಡ ಕೃಷ್ಣಾಜಿ ಕುಲಕರ್ಣಿ ಮುಂತಾದವರಿದ್ದರು.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧ ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧ ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.