ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯ
Team Udayavani, Sep 2, 2022, 3:33 PM IST
ವಾಡಿ: ಪ್ರತಿದಿನ ಬೆಳಗ್ಗೆ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡಿದ ನಂತರ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆ ಹಾಡಿಸುವುದು ಕಡ್ಡಾಯವಾಗಿದ್ದು, ದೈಹಿಕ ಶಿಕ್ಷಕರು ಇದನ್ನು ಶಿಸ್ತುಬದ್ಧವಾಗಿ ಪಾಲಿಸಬೇಕು ಎಂದು ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ ಹೇಳಿದರು.
ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ನಾಲವಾರ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರಗೀತೆ ಮತ್ತು ನಾಡಗೀತೆ ಹೇಳಿದ ಬಳಿಕ ಸರ್ವಜನಾಂಗದ ಹಿತವನ್ನೇ ಬಯಸುವ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತ ಸಂವಿಧಾನದ ಪೀಠಿಕೆಯನ್ನು ಮಕ್ಕಳು ನಿರರ್ಗಳವಾಗಿ ಹಾಡುವಂತೆ ಅಥವಾ ಓದುವಂತೆ ಪ್ರೇರೇಪಿಸಬೇಕು. ಇದು ಆಯಾ ಶಾಲೆಗಳ ಮುಖ್ಯಶಿಕ್ಷಕರು ಮತ್ತು ದೈಹಿಕ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಂಘಟನಾ ಕಾರ್ಯದರ್ಶಿ ಶರಣಪ್ಪ ಐಕೂರ ಮಾತನಾಡಿ. ಗ್ರಾಮೀಣ ಭಾಗದ ಬಹುತೇಕ ಸರಕಾರಿ ಶಾಲೆಗಳಿಗೆ ಕ್ರೀಡಾ ಪರಿಕರಗಳು ಪೂರೈಕೆಯಾಗಿಲ್ಲ. ಈ ಸಮಸ್ಯೆಯನ್ನು ದೈಹಿಕ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆಟದ ಸಾಮಗ್ರಿ ಒದಗಿಸಬೇಕು ಎಂದು ಆಗ್ರಹಿಸಿದರು.
ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ, ಕಾರ್ಯದರ್ಶಿ ಅಬ್ದುಲ್ ಸಲೀಂ ಪ್ಯಾರೆ, ದೈಹಿಕ ಶಿಕ್ಷಣಾ ಧಿಕಾರಿ ದೇವಿಂದ್ರರೆಡ್ಡಿ ದುಗನೂರ, ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ಗಂಗಾಧರ, ಕೊಲ್ಲೂರ ಸಿಆರ್‌ಸಿ ಸಂಜೀವಕುಮಾರ, ಶಿವಾನಂದ ಹಿರೇಮಠ, ದೇವಿಂದ್ರಪ್ಪ ದೊರೆ, ಶ್ರೀಧರ ರಾಠೊಡ, ವಿಜಯಕುಮಾರ ಕುಲಕರ್ಣಿ, ಸುರೇಶ ರಾಂಪೂರೆ, ಮೇರಿ ವರ್ಜಿನ್, ಹುಸೇನ ಪಾಶಾ, ವೆಂಕಟರೆಡ್ಡಿ ಪಾಲ್ಗೊಂಡಿದ್ದರು. ಶಿಕ್ಷಕ ಸಿಂಗ್ರಯ್ಯ ನಿರೂಪಿಸಿ, ವಂದಿಸಿದರು. ನಾಲವಾರ ವಲಯದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಥಸಂಚಲನ ನಡೆಸಿಕೊಟ್ಟರು. ಇದೇ ವೇಳೆ ಅಥಿತಿಗಳು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.