ವಚನ ಅರಿವು ಮೂಡಿಸಿದ್ದು ಹಳಕಟ್ಟಿ
Team Udayavani, Jul 3, 2022, 9:56 AM IST
ಕಲಬುರಗಿ: ಡಾ| ಫ.ಗು. ಹಳಕಟ್ಟಿ ಹರಿದು- ಹಂಚಿಹೋಗಿದ್ದ ವಚನಗಳನ್ನು ಮೂಲ ಸೌಕರ್ಯ ಇಲ್ಲದೇ ಮನೆ, ಮಠಗಳಿಗೆ ಹೋಗಿ ವಚನಗಳನ್ನು ಸಂಗ್ರಹಣೆ ಮಾಡಿದವರು. ಅವರ ಶ್ರಮದ ಫಲವಾಗಿಯೇ ವಚನಗಳನ್ನು ತಿಳಿದುಕೊಳ್ಳಲು ಸಹಾಯವಾಗಿದೆ ಎಂದು ಮಾಜಿ ಮಹಾಪೌರ ಶರಣ ಕುಮಾರ ಮೋದಿ ಹೇಳಿದರು.
ಶನಿವಾರ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಸಮಿತಿ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ದ ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಡಾ| ಫ.ಗು. ಹಳಕಟ್ಟಿ ಬಸವಣ್ಣನವರ ವಚನಗಳನ್ನು ಒಂದುಗೂಡಿಸಿ ನಮ್ಮೆಲ್ಲರಿಗೂ ವಚನ ಸಾಹಿತ್ಯದ ಅರಿವು ಮೂಡಿಸಿದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ| ಫ.ಗು. ಹಳಕಟ್ಟಿ ಜಯಂತ್ಯುತ್ಸವ ಸಮಿತಿ ಜಿಲ್ಲಾಧ್ಯಕ್ಷ ಶಿವಲಿಂಗಪ್ಪ ಈರಣಪ್ಪಾ ಅಷ್ಟಗಿ ಮಾತನಾಡಿ, ಡಾ| ಫ.ಗು. ಹಳಕಟ್ಟಿ ಶರಣರ ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆಲ್ಲ ಅದರ ಮಹತ್ವ ತಿಳಿಯುವಂತೆ ಪ್ರಚಾರಗೊಳಿಸಿದ ಫಲವಾಗಿ ವಚನ ಸಾಹಿತ್ಯ ಜನರಿಗೆ ತಲುಪಲು ಸಾಧ್ಯವಾಯಿತು ಎಂದು ಹೇಳಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಸಂಘ ಸಂಸ್ಥೆಗಳು ಹಾಗೂ ಶಾಲೆ- ಕಾಲೇಜುಗಳನ್ನು ನಿರ್ಮಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ಜಾಗತಿಕ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವ ಮಾತನಾಡಿದರು.
ಗುಲಬರ್ಗಾ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ನಿವೃತ್ತ ಪ್ರಾಧ್ಯಾಪಕಿ ಜಯಶ್ರೀ ದಂಡೆ ಡಾ| ಫ.ಗು. ಹಳಕಟ್ಟಿ ಜೀವನದ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾಡಳಿತ ಚುನಾವಣೆಯ ಶಾಖೆ ತಹಶೀಲ್ದಾರ್ ಮಹಾಂತೇಶ ಮುಡಬಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಗಣ್ಯ ವ್ಯಕ್ತಿಗಳು ಡಾ| ಫ.ಗು.ಹಳಕಟ್ಟಿ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಹಟಗಾರ ಸಮಾಜದ ಗೌರವಾಧ್ಯಕ್ಷ ಸೂರ್ಯಕಾಂತ ಸೊನ್ನದ, ಉಪಾಧ್ಯಕ್ಷ ಸಂಗಮನಾಥ ರೇವತಗಾಂವ, ಪ್ರಧಾನ ಕಾರ್ಯದರ್ಶಿ, ವಿನೋದಕುಮಾರ ಶ. ಜೆನವೇರಿ, ಖಜಾಂಚಿ ರಾಜು ಕೋಷ್ಠಿ ಹಾಗೂ ಸಮಾಜದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.