ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಕರ್ತವ್ಯ
Team Udayavani, Sep 22, 2022, 2:40 PM IST
ಚಿತ್ತಾಪುರ: ಅಂಗವಿಕಲರ ಸಬಲೀಕರಣಕ್ಕಾಗಿ ಜಾರಿಗೊಳಿಸಲಾದ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಮಂತ ಗುತ್ತೇದಾರ ಹೇಳಿದರು.
ತಾಲೂಕಿನ ದಿಗ್ಗಾಂವ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿಎಂಎಫ್ ಯೋಜನೆಯಡಿಯಲ್ಲಿ ಅಂಗವಿಕಲರ ಮೌಲ್ಯಮಾಪನ ಹಾಗೂ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ವಿಶಿಷ್ಟ ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ತಾಲೂಕಿನಲ್ಲಿ ಕಳೆದ 15 ವರ್ಷಗಳಿಂದ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಪರವಾಗಿ ಅವಿರತವಾಗಿ ಶ್ರಮಿಸುತ್ತಿರುವ ಅಂಗವಿಕಲರ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಮಹ್ಮದ ಇಬ್ರಾಹಿಂ ಮಾತನಾಡಿ, ಅಂಗವಿಕಲರು ಸರಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಯುಡಿಐಡಿ ಯೋಜನೆ ಜಾರಿಗೊಳಿಸಿದೆ. ಆದ್ದರಿಂದ ಅಂಗವಿಕಲರು ಯಡಿಐಡಿ ಕಾರ್ಡ್ ಮಾಡಿಕೊಳ್ಳಬೇಕು ಅಂದಾಗ ಮಾತ್ರ ಸರ್ಕಾರದ ಎಲ್ಲ ಯೋಜನೆಗಳ ಲಾಭ ದೊರೆಯಲಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಹರಳಯ್ಯ ಬಡಿಗೇರ್, ಗುರುಶಾಂತ ಭಾಗೋಡಿ, ಚನ್ನವೀರ ಕಣಗಿ, ಪತ್ರಕರ್ತ ಕಾಶಿನಾಥ ಗುತ್ತೇದಾರ, ಅಂಗನವಾಡಿ ಮೇಲ್ವಿಚಾರಕಿ ಕವಿತಾ ಪಾಟೀಲ ಮಾತನಾಡಿದರು. ಗ್ರಾಮದ ಹಿರಿಯ ಮುಖಂಡ ಸಿದ್ಧಣ್ಣಗೌಡ ಮಾಲಿ ಪಾಟೀಲ ಉದ್ಘಾಟಿಸಿದರು. ಗ್ರಾಪಂ ಕಾರ್ಯದರ್ಶಿ ದೇವಿಂದ್ರ ಯರಗಲ್, ಮುಖಂಡರಾದ ಸುರೇಶ ಅಚ್ಚೇಲಿ, ಪರಮಾತ್ಮ ದೊಡ್ಡಮನಿ, ಅಬ್ದುಲ್ ಖಾದರ, ಮಲ್ಲಿಕಾರ್ಜುನ ತಳವಾರ, ಮಲ್ಲಿನಾಥ ಪಾಟೀಲ, ಕಾಶಪ್ಪ ಪೂಜಾರಿ, ಹುಸೇನ್ ದಿಗ್ಗಾಂವ, ಅಮೂಲ್ಯ, ತ್ರೀಶಾ, ಹಂಪಯ್ಯ ಅಲ್ಲೂರ ಇತರರು ಇದ್ದರು. ಸದಸ್ಯ ಹರಳಯ್ಯ ಬಡಿಗೇರನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.