ಸೌಹಾರ್ದಯುತವಾಗಿ ಭಾರತ ಕಟ್ಟಿ

Team Udayavani, Jan 26, 2018, 12:45 PM IST

gul-6.jpg

ಕಲಬುರಗಿ: ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸೌಹಾರ್ದ ಭಾರತವನ್ನು ಕಟ್ಟುವ ಅಗತ್ಯವಿದೆ ಎಂದು ಉಪನ್ಯಾಸಕ ಹಾಗೂ ಹೈದ್ರಾಬಾದ ಕರ್ನಾಟಕ ಸರಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ ಪ್ರತಿಪಾದಿಸಿದರು.

ಇಲ್ಲಿನ ಕನ್ನಡ ಸಾಹಿತ್ಯ ಸಂಘದಲ್ಲಿ ಗುರುವಾರ ಎಸ್‌ಎಫ್‌ಐ ಹಮ್ಮಿಕೊಂಡಿದ್ದ ಜಿಲ್ಲಾ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಣದ ಹಕ್ಕನ್ನು ತಳ ಸಮುದಾಯದಿಂದ ಕಸಿಯುವ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ನಡೆಯಬೇಕು.
ಏಕಂದರೆ ಎರಡೂ ಅಪಾಯದಲ್ಲಿವೆ. ಸಂವಿಧಾನವನ್ನು ಬದಲಿಸುವ ಮತ್ತು ಮೀಸಲಾತಿಯನ್ನು ತೆಗೆಯುವ ನಿಟ್ಟಿನಲ್ಲಿ
ಸಂಚುಗಳು ನಡೆದಿವೆ. ಇದನ್ನು ನಾವು ಈಗಲೇ ಹತ್ತಿಕ್ಕದಿದ್ದರೆ ಅಥವಾ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಂವಿಧಾನ ಉಳಿಸಿ ಭಾರತವನ್ನು ವೈಜ್ಞಾನಿಕವಾಗಿ ಕಟ್ಟಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎರಡು ಇಂದಿನ ವಿದ್ಯಾರ್ಥಿ ಸಮುದಾಯದ ಮುಂದೆ ಇದೆ
ಎಂದರು. 

ಶಿಕ್ಷಕ ಎಚ್‌.ಎಂ. ತಳವಾರ ಮಾತನಾಡಿ, ಇಂದು ದೇಶದಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಹಿಡಿತ ಸಾಧಿಸುವ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕಾಗಿ ವಿದ್ಯಾರ್ಥಿ ಸಮುದಾಯವನ್ನು ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಇಲ್ಲದ ಆಲೋಚನೆಗಳನ್ನು ಹುಟ್ಟಿಸಲಾಗುತ್ತಿದೆ. ಕೋಮುವಾದಿ ಭಾವನೆಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬೇಡಿ. ಇದರಿಂದ ನಿಮ್ಮ ಭವಿಷ್ಯ ಹಾಳು ಮಾಡಲಾಗುತ್ತಿದೆ. ಈಗ ಏನಿದ್ದರೂ ಶಿಕ್ಷಣಕ್ಕೆ, ಕಲಿಕೆಗೆ ಒತ್ತು ನೀಡಿ. ಇದರಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದೆ ಹೋದರೆ ನೀವು ಮುಂದೆ ಸಮಾಜದ ಹಾಗೂ ದೇಶದ ಮುಂದೆ ಪ್ರಶ್ನೆಯಾಗಿ ನಿಲ್ಲುತ್ತಿರಿ ಎಂದರು.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಶಿಕ್ಷಣದ ಮಹತ್ವ ಹಾಳಾಗುತ್ತಿದೆ. ವಿದೇಶಿಗರಿಗೆ ಹಾಗೂ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಕರೆಯಲಾಗುತ್ತಿದೆ. ಶಿಕ್ಷಣ ಹೆಸರಿನಲ್ಲಿ ವ್ಯಾಪಾರೀಕರಣ ನಡೆದಿದೆ. ನಮ್ಮ ಶಿಕ್ಷಣ ಅಭಿವೃದ್ಧಿ ಆಗಬೇಕಾದರೆ ಗುಲಾಮಗಿರಿ ತೊಲಗಬೇಕಾದರೆ ಕೋಠಾರಿ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಸುನೀಲ ಮಾನ್ಪಡೆ ಮಾತನಾಡಿ, ಹೈಕ ಭಾಗಕ್ಕೆ 371 (ಜೆ)ನೇ ಕಲಂ ಜಾರಿ ಏನೋ ಮಾಡಲಾಗಿದೆ. ಇದು ಸರಿಯಾಗಿ ಜಾರಿಗೆ ಬರಬೇಕಾದರೆ ಸರಕಾರದ ಇಚ್ಛಾಶಕ್ತಿ ಕೊರತೆ ಇದೆ. ಅದನ್ನು ಮಾಡುವಲ್ಲಿ ಸರಕಾರ ಸೋತಿದೆ. ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಧ್ವನಿ ಎತ್ತುವ ಯಾರೇ ಆಗಿರಲಿ ಅವರನ್ನು ಶಿಕ್ಷೆಗೆ ಗುರಿ ಮಾಡುವಂತಹ ಕಾನೂನಿನ ಅವಶ್ಯತೆ ಇದೆ. ಇಲ್ಲದೆ ಹೋದರೆಯುವ ಜನತೆ ಇದಕ್ಕೂ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.

ಎಸ್‌ಎಫ್‌ಐ ಸಂಘಟಕರಾದ ಅಪೂರ್ವಲಾಲ್‌ ನದಾಫ್‌, ಶಂಕರ ಕವಲಗಿ ಸ್ವಾಗತಿಸಿದರು. ರಾಮಲಿಂಗ ಬಿರಾದಾರ
ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.  

ಟಾಪ್ ನ್ಯೂಸ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.