ಜಗಜೀವನರಾಂ-ಅಂಬೇಡ್ಕರ್‌ ಜಯಂತಿ ಸರಳ ಆಚರಣೆ

Team Udayavani, Mar 30, 2019, 1:55 PM IST

gul-2

ಕಲಬುರಗಿ: ಜಿಲ್ಲೆಯಾದ್ಯಂತ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂಬರುವ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಜಯಂತ್ಯುತ್ಸವಗಳನ್ನು ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಏಪ್ರಿಲ್‌ 5ರಂದು ಜಗಜೀವನರಾಂ ಮತ್ತು ಏ. 14ರಂದು ಡಾ| ಅಂಬೇಡ್ಕರ್‌ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಯಂತ್ಯುತ್ಸವ ಪೂರ್ವಭಾವಿ ಸಿದ್ಧತಾ ಸಭೆಯು ಸರ್ವಾನುಮತದ ನಿರ್ಣಯ
ಕೈಗೊಂಡಿತು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಚುನಾವಣಾ ಆಯೋಗವು ನೀತಿ ಸಂಹಿತೆ ಸಮಯದಲ್ಲಿ ಸರ್ಕಾರಿ ಸಭೆ-ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ನಡೆಸಲಾಗುವುದು. ಜಯಂತಿ ಆಚರಣಾ ಸಮಿತಿಗಳು ಯಾವುದೇ ಖಾಸಗಿ ಕಾರ್ಯಕ್ರಮ ನಡೆಸುವವರಿದ್ದರೆ ಮುಂಚಿತವಾಗಿಯೇ ಚುನಾವಣಾ ಅಧಿಕಾರಿಗಳಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದರು.

ಡಾ| ಬಾಬು ಜಗಜೀವನರಾಂ ಅವರ 112ನೇ ಜಯಂತ್ಯುತ್ಸವ ಅಂಗವಾಗಿ ಏಪ್ರಿಲ್‌ 5 ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಡಾ| ಎಸ್‌.ಎಂ.ಪಂಡಿತ ರಂಗಮಂದಿರ ವರೆಗೆ ಬಾಬು ಜಗಜೀವನರಾಂ ಭಾವಚಿತ್ರದ ಮೆರವಣಿಗೆಯನ್ನು ಆಯೋಜಿಸಲಾಗುವುದು.

ಮೆರವಣಿಗೆ ನಡೆಯುವ ಮಾರ್ಗದಲ್ಲಿ ನೀರು ಸಿಂಪಡಿಸುವ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಮತ್ತು ಪೂರ್ಣ ಕುಂಭ ಕಲಶದ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಯಿತು. ನಂತರ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಜಯಂತ್ಯುತ್ಸವ ಮುಖ್ಯ ಸಮಾರಂಭ ಆಯೋಜಿಸಲಾಗುವುದು ಎಂದು ಹೇಳಿದರು.

ಏಪ್ರಿಲ್‌ 14 ರಂದು ಬೆಳಗ್ಗೆ ಜಗತ್‌ ವೃತ್ತದ ಬಳಿಯ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಪುತ್ಥಳಿ ಬಳಿ 128ನೇ ಜಯಂತ್ಯುತ್ಸವ ಅಂಗವಾಗಿ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಅಂದು ಬೆಳಗ್ಗೆ 8:30 ಗಂಟೆಗೆ ಮಾಲಾರ್ಪಣೆ ಬಳಿಕ ಸಮಾರಂಭ ಜರುಗುವುದು. ಈ ಎರಡೂ ಜಯಂತಿಗಳ ಆಚರಣೆಗೆ ಸಂಬಂಸಿದಂತೆ ರಚಿಸಲಾದ ಎಲ್ಲ ಉಪಸಮಿತಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜಯಂತಿ ಆಚರಣೆಯ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್‌ ಅಲಂಕಾರ, ಧ್ವನಿವರ್ಧಕ, ಸ್ವತ್ಛತೆ ಮತ್ತು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅದೇ ರೀತಿ ಮದ್ಯ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕುಎಂದರು.

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್‌ 5 ರಂದು ಬಾಬು ಜಗಜೀವನರಾಂ ಮತ್ತು ಏಪ್ರಿಲ್‌ 14ರಂದು ಡಾ| ಬಾಬಾಸಾಹೇಬ ಅಂಬೇಡ್ಕರ್‌ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿ ಆಚರಣೆ ಮುಖ್ಯ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು. ಎಸ್ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್‌, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಯಂತ್ಯೋತ್ಸವ ಆಚರಣೆ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.