ಸಾಲ ಮನ್ನಾಕ್ಕೆ ಒತ್ತಾಯಿಸಿ ಜಾಥಾ
Team Udayavani, Aug 21, 2017, 10:53 AM IST
ಜೇವರ್ಗಿ: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ತಾಲೂಕಿನಾಧ್ಯಂತ ಕರ್ನಾಟಕ ಪ್ರಾಂತ ರೈತ
ಸಂಘ ತಾಲೂಕು ಸಮಿತಿ ವತಿಯಿಂದ ಜೀಪ್ ಜಾಥಾ ಆಯೋಜಿಸಲಾಗಿದೆ. ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಜೀಪ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ ಹೊಸಮನಿ, ಕಳೆದ ಮೂರ್‍ನಾಲ್ಕು ವರ್ಷಗಳಿಂದ ರಾಜ್ಯದ ರೈತರು, ಕೃಷಿ ಕೂಲಿಕಾರ್ಮಿಕರು ಭೀಕರ ಬರಗಾಲದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬ್ಯಾಂಕ್, ಖಾಗಿಯವರಿಂದ ತಂದಿರುವ ಸಾಲಲಗಳಲ್ಲದೇ ತಮ್ಮ ಬಳಿಯಿರುವ ಬಂಡವಾಳ ಕಳೆದುಕೊಂಡು ಅಸಹಾಯಕತೆಯಿಂದ ರೈತರು ನರಳುವಂತಾಗಿದೆ. ಅಲ್ಲದೇ ಬರಗಾಲದಿಂದ ಕ್ರ‚ಇ ಬಿಕ್ಕಟ್ಟು ಎದುರಾಗಿ ರೈತರು ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ವರ್ಷದಲ್ಲಿ ಬಂಡವಾಳಶಾಹಿಗಳಿಗೆ ಹಾಗೂ ಕಾರ್ಪೋರೇಟ್ ಕಂಪನಿಗಳ ಸುಮಾರು 12 ಲಕ್ಷ ಕೋಟಿ ರೂ. ತೆರಿಗೆ ವಿನಾಯಿತಿ ಹಾಗೂ ಸಾಲಮನ್ನಾ ಮಾಡಿರುವುದು ಖಂಡನೀಯ. ಆದ್ದರಿಂದ ಕೂಡಲೇ ಕೇಂದ್ರ ಸರಕಾರ ರೈತರ, ದಲಿತರ, ಕೃಷಿ ಕೂಲಿಕಾರ್ಮಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಡಾ| ಎಂ.ಎಸ್. ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಕೃಷಿಕರ ಪರವಾದ ಬೆಳೆವಿಮೆ ನೀತಿ ಜಾರಿಯಾಗಬೇಕು. ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ 5,000 ರೂ. ಮಾಸಿಕ ವೇತನ ನೀಡಬೇಕು. ಭೂಮಿಗೆ ನ್ಯಾಯವಾದ ಬೆಲೆ ನಿಗದಿ ಮಾಡಬೇಕು. ಸರಕಾರಿ ಹಾಗೂ ಭೂಮಿ ಉಳುಮೆದಾರರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು. ಭೂರಹಿತ ಬಡವರಿಗೆ
ಹಾಗೂ ದಲಿತರಿಗೆ ಭೂ ಮಂಜೂರಾತಿ ನೀಡಬೇಕು. ಎಲ್ಲ ಬಡವರಿಗೂ ರೇಷನ್ ಕಾರ್ಡ್ ಮಂಜೂರಾತಿಗಾಗಿ ಹಾಗೂ
ಆನ್‌ಲೈನ್ ತೊಂದರೆ ನಿವಾರಣೆ ಮಾಡಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು. ಎಲ್ಲ ಬೇಡಿಕೆಗಳ ಈಡೇರಿಕೆಗೆ
ಆಗ್ರಹಿಸಿ ಆ. 22ರಂದು ಮಂಗಳವಾರ ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ರೈತ ಬಾಂಧವರು, ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ನಂತರ ತಾಲೂಕಿನ ಮಾರಡಗಿ, ಆಂದೋಲಾ, ಯಡ್ರಾಮಿ, ವಸ್ತಾರಿ, ಕುಮ್ಮನಸಿರಸಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೀಪ್ ಜಾಥಾ ನಡೆಸಲಾಯಿತು. ಜಾಥಾ ಸಂದರ್ಭಧಲ್ಲಿ ರೈತ ಸಂಘ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಹರವಾಳ, ದಲಿತ ಹಕ್ಕುಗಳ ಸಮಿತಿ ತಾಲೂಕು ಸಂಚಾಲಕ ಪರಶುರಾಮ ಬಡಿಗೇರ, ಬಸಪ್ಪ ಕೋಳಕೂರ, ಅಂಬಣ್ಣ ಕೋಳಕೂರ, ಬಸವರಾಜ ಬಡಿಗೇರ ಸೇರಿದಂತೆ ಹಲವಾರು ಜನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.