13 ಜನ ಗುಣಮುಖ-ಬಿಡುಗಡೆ
Team Udayavani, Jun 7, 2020, 2:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೇವರ್ಗಿ: ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ 13 ಜನರನ್ನು ಶನಿವಾರ ತಾಲೂಕಾಡಳಿತ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ತಾಲೂಕಿನ ವಿವಿಧ ಗ್ರಾಮಗಳ 13 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಕಲಬುರಗಿ ನಗರದ ಕೋವಿಡ್ ನಿಗದಿತ ಆಸ್ಪತ್ರೆಗೆ ಕಳೆದ 15 ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಶನಿವಾರ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖ ಹೊಂದಿದ್ದರಿಂದ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಹಶೀಲ್ದಾರ್ ಸಿದರಾಯ ಭೋಸಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಸಿದ್ದು ಪಾಟೀಲ ತಿಳಿಸಿದ್ದಾರೆ.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ತಾಲೂಕು ಆಡಳಿತದಿಂದ ಗುಣಮುಖರಾದ 13 ಜನರಿಗೆ ಶಾಲು ಹೊದಿಸಿ, ಹಣ್ಣು-ಹಂಪಲು ನೀಡಿ ಸನ್ಮಾನಿಸಿ ಅವರನ್ನು ಬೀಳ್ಕೊಡಲಾಯಿತು. ಮಹಾರಾಷ್ಟ್ರದಿಂದ ಮರಳಿ ಜೇವರ್ಗಿ ತಾಲೂಕಿಗೆ ಬಂದಿರುವ ವಲಸೆ ಕಾರ್ಮಿಕರೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ರೇವನೂರ ಗ್ರಾಮದ 8 ಜನ, ಕೂಟನೂರ ಗ್ರಾಮದ 2, ಗುಡೂರ (ಎಸ್.ಎ) ಗ್ರಾಮದ 2 ಹಾಗೂ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಒಬ್ಬ ವ್ಯಕ್ತಿ ಕೋವಿಡ್ 19 ಸೋಂಕಿನಿಂದ ಹೊರ ಬಂದಿದ್ದಾರೆ. ತಹಶೀಲ್ದಾರ್ ಸಿದರಾಯ ಭೋಸಗಿ, ಸಿಪಿಐ ರಮೇಶ ರೊಟ್ಟಿ, ಸಬ್ ಇನ್ಸಪೆಕ್ಟರ್ ಮಂಜುನಾಥ ಹೂಗಾರ, ಅಪರಾಧ ವಿಭಾಗದ ಸಬ್ ಇನ್ಸಪೆಕ್ಟರ್ ಸಂಗಮೇಶ ಅಂಗಡಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಶಹನಾಜ್, ಡಾ. ರಾಘವೇಂದ್ರ ಕುಲಕರ್ಣಿ, ಡಾ.ಶ್ರೀದೇವಿ, ಡಾ.ಸಂಗೀತಾ, ಡಾ.ವೀರೇಶ, ಡಾ.ಶಿವಲಿಂಗ ಸೇರಿದಂತೆ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.