ಜನಪದಕ್ಕಿದೆ ಸಮಾಜ ಒಗ್ಗೂಡಿಸುವ ಶಕ್ತಿ

ಯುವ ಜನತೆಯಲ್ಲಿ ಸಾಹಿತ್ಯ ಅಭಿರುಚಿ ಮೂಡಿಸಿಕಲಾವಿದರಿಗೆ ವೇದಿಕೆ-ಪ್ರೋತ್ಸಾಹ ಅಗತ್ಯ

Team Udayavani, Mar 9, 2020, 10:38 AM IST

9-March-1

ಜೇವರ್ಗಿ: ಭಾರತ ಸಂಸ್ಕೃತಿಯ ಮೂಲ ತಳಹದಿ ಜಾನಪದ ಸಾಹಿತ್ಯವನ್ನು ಉಳಿಸುವ ಹೊಣೆ ಪ್ರತಿಯೊಬ್ಬರ ಮೇಲಿದ್ದು, ಯುವ ಜನರಲ್ಲಿ ಜಾನಪದ ಸಾಹಿತ್ಯದ ಅಭಿರುಚಿ ಮೂಡಿಸುವ ಕೆಲಸವಾಗಬೇಕು ಎಂದು ಶಾಸಕ ಡಾ| ಅಜಯಸಿಂಗ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಕಲಬುರಗಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2019-20ನೇ ಸಾಲಿನ ಜಾನಪದ ಜಾತ್ರೆ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜನಪದಕ್ಕೆ ಸಮಾಜ ಒಗ್ಗೂಡಿಸುವ ಶಕ್ತಿ ಇದೆ. ಜಾನಪದದಲ್ಲಿ ಜೀವನದ ಮೌಲ್ಯಗಳಿವೆ. ಹೀಗಾಗಿ ಜಾನಪದ ಕಲೆ ಸಾಹಿತ್ಯಕ್ಕೆ, ಸಮಾಜಕ್ಕೆ ಎಂದಿಗೂ ಪೂರಕವಾಗಿರುತ್ತದೆ ಎಂದರು.

ಬೀಸುವ, ಕುಟ್ಟುವ, ಹಂತಿ, ಸೋಬಾನ ಪದ ಇವು ನಶಿಸಿ ಹೋಗದಂತೆ ಇಂದಿನ ಯುವಕ, ಯುವತಿಯರಿಗೆ ಹೇಳಿಕೊಡುವ ಅನಿವಾರ್ಯತೆ ಇದೆ. ಜಾನಪದ ಕಲಾವಿದರಿಗೆ ವೇದಿಕೆ ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಣಗೌಡ ಪಾಟೀಲ ಹಂಗರಗಿ ಮಾತನಾಡಿ, ಆಧುನಿಕ ಸಂಸ್ಕೃತಿ ಹಾಗೂ ಪಾಶ್ಚಿಮಾತ್ಯ ಪ್ರೀತಿಯಿಂದಾಗಿ ಮೂಲ ಸಂಸ್ಕೃತಿಗೆ ಪೆಟ್ಟು ಬೀಳುತ್ತಿದೆ. ಬದುಕಿನ ಅರ್ಥ ತಿಳಿ ಹೇಳಿದ ಜನಪದರು ತಮ್ಮ ಜೀವನದಲ್ಲಿ ಕಂಡುಂಡ ಅನುಭವಗಳನ್ನು ಮಾರ್ಗದರ್ಶನದ ರೂಪದಲ್ಲಿ ಬಿಟ್ಟು ಹೋಗಿದ್ದಾರೆ. ಸುಂದರ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಜಿ.ಪಂ ಸದಸ್ಯ ದೇವಕ್ಕೆಮ್ಮ ಚನ್ನಮಲ್ಲಯ್ಯ ಹಿರೇಮಠ, ತಹಶೀಲ್ದಾರ್‌ ಸಿದರಾಯ ಭೋಸಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಕನ್ನಡ ಜನಪದ ಪರಿಷತ್‌ ಅಧ್ಯಕ್ಷ ಎಸ್‌.ಎಸ್‌. ಮಾಲಿಬಿರಾದಾರ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌.ಕೆ. ಬಿರಾದಾರ, ರುಕುಂ ಪಟೇಲ ಇಜೇರಿ, ಕಾಶಿರಾಯಗೌಡ ಯಲಗೋಡ, ರಾಜಶೇಖರ ಖಣದಾಳ, ಮಲ್ಲಿಕಾರ್ಜುನ ಬಿರಾದಾರ, ಶಿವಲಿಂಗ ಕಲ್ಲಹಂಗರಗಿ, ಇಮ್ರಾನ್‌, ನಿಂಗು ಹಳಿಮನಿ, ಹಂಪಣ್ಣಗೌಡ ಹಾಲಗಡ್ಲಾ, ಮರೆಪ್ಪ ಸರಡಗಿ ಮುಖ್ಯ ಅತಿಥಿಗಳಾಗಿ ಇದ್ದರು.

ಇದಕ್ಕೂ ಮುನ್ನ ಮಿನಿ ವಿಧಾನಸೌಧ ಕಚೇರಿಯಿಂದ ಕನ್ನಡ ಭವನದ ವರೆಗೆ ವಿವಿಧ ಕಲಾತಂಡಗಳ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಚಿತ್ರದುರ್ಗದ ಕೀಲು ಕುದುರೆ, ದಾವಣಗೆರೆಯ ನಗಾರಿ ವಾದ್ಯ, ಮಹಿಳಾ ಡೊಳ್ಳು ಕುಣಿತ, ತುಮಕೂರಿನ ಸೋಮನ ಕುಣಿತ, ಗಾರುಡಿ ಗೊಂಬೆ, ನಾಶೀಕ ಡೋಲ್‌, ಕಲಬುರಗಿಯ ಪುರವಂತಿಕೆ, ಕರಡಿ ಮಜಲು, ಲಂಬಾಣಿ ನೃತ್ಯ, ಹಲಗೆ ವಾದನ, ಡೊಳ್ಳು ಕುಣಿತ ಸೇರಿದಂತೆ ಹತ್ತಾರು ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.