ಆಂತರಿಕ ಭಯೋತ್ಪಾದಕರನ್ನು ಶಿಕ್ಷಿಸಿ
ಟ್ರಂಪ್ ಬಂದಿದ್ದು ಮೋದಿ ಹೊಗಳಲು ಅಲ್ಲಮಠಾಧೀಶರು ಧರ್ಮ ಜಾಗೃತಿ ಮೂಡಿಸಲಿ
Team Udayavani, Feb 27, 2020, 10:51 AM IST
ಜೇವರ್ಗಿ: ದೇಶದ ಗಾಳಿ, ನೀರು, ಅನ್ನ ತಿಂದು ನೆರೆಯ ಶತ್ರು ರಾಷ್ಟ್ರ ಪಾಕಿಸ್ತಾನದ ಬಗ್ಗೆ ಹೊಗಳುವ ಆಂತರಿಕ ಭಯೋತ್ಪಾಕರನ್ನು ಶಿಕ್ಷಿಸುವ ಕೆಲಸವಾಗಬೇಕು ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಗುಡುಗಿದರು.
ತಾಲೂಕಿನ ಹರವಾಳ ಗ್ರಾಮದ ಆರಾಧ್ಯ ದೈವ ಮೂಕಸಿದ್ಧೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ, ಕಳಸಾರೋಹಣ, 25 ಜೋಡಿಗಳ ಸಾಮೂಹಿಕ ಮದುವೆ ಸಮಾರಂಭ ನಿಮಿತ್ಯ ಆಯೋಜಿಸಲಾಗಿರುವ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶಕ್ಕೆ ಬಂದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಅವರನ್ನು ಹೊಗಳಲಿಕ್ಕೆ ಅಲ್ಲ. ಈ ದೇಶದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಹಾಗೂ ದೇಶದಲ್ಲಿರುವ ಅತ್ಯದ್ಭುತವಾದ ಶಕ್ತಿ ನೋಡಿ ಎನ್ನುವುದನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು ಎಂದರು.
ಕಳೆದ ವರ್ಷ ನಡೆದ ಘಟನೆಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯಲ್ಲಿ ಕಾಶ್ಮೀರದ ಯುವಕರು ನೆರೆಯ ಪಾಕಿಸ್ತಾನ ಪರ ಜಯಘೋಷ ಹಾಕಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊದಲು ಕಾವಿ, ಖಾದಿ, ಖಾಕಿ ಒಂದಾಗಬೇಕು, ಮಠಾಧೀಶರು ಧರ್ಮ ಒಡೆಯುವ ಕೆಲಸ ಮಾಡದೆ ದೇಶ, ಧರ್ಮದ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಸೊನ್ನ ಸಿದ್ಧಲಿಂಗೇಶ್ವರ ವಿರಕ್ತ ಮಠದ ಪೀಠಾಧಿ ಪತಿ ಡಾ| ಶಿವಾನಂದ ಸ್ವಾಮೀಜಿ, ಪ್ರವಚನಕಾರ ಹರಿದ್ವಾರದ ನಿರಂಜನ ಸ್ವಾಮೀಜಿ, ಬಸವಪಟ್ಟಣದ ಮರೆಪ್ಪ ಮುತ್ಯಾ, ಜಿ.ಪಂ ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮುಖಂಡರಾದ ರಮೇಶಬಾಬು ವಕೀಲ, ಮಲ್ಲಿನಾಥಗೌಡ ಯಲಗೋಡ, ಉದ್ಯಮಿಗಳಾದ ದಯಾನಂದ ದೇವರಮನಿ, ಬಸವರಾಜ ಮದರಿ, ಉಮಾಕಾಂತ ಗೋಲಗೇರಿ, ಸೋಮಶೇಖರ ಗುಡೂರ, ವಿಶ್ವನಾಥ ಸಾಹು ಸಜ್ಜನಶೆಟ್ಟಿ, ನೆಲೋಗಿ ಪಿಎಸ್‌ಐ ಮಲ್ಲಣ್ಣ ಯಲಗೋಡ, ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಎಂ.ಬಿ. ಪಾಟೀಲ, ತಾ.ಪಂ ಸದಸ್ಯ ಪ್ರಭಾಕರ ರಬಶೆಟ್ಟಿ, ಹರನೂರ ಗ್ರಾ.ಪಂ ಅಧ್ಯಕ್ಷ ರಮೇಶ ರಾಠೊಡ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.