ಮನಸ್ಸು ಕಟ್ಟುವ ಕೆಲಸವಾಗಲಿ: ಬಿಆರ್‌

"ಉದಯವಾಣಿ' ಕನ್ನಡ ಕಂಪು ಸಂಚಿಕೆ ಬಿಡುಗಡೆ ಶರಣರ ತತ್ವಾದರ್ಶ ಎಲ್ಲರೂ ಪಾಲಿಸಿ

Team Udayavani, Feb 7, 2020, 10:51 AM IST

7-February-2

ಜೇವರ್ಗಿ: ದೇಶದಲ್ಲಿ ಸಾಕಷ್ಟು ಮಸೀದಿ, ಮಂದಿರ, ಚರ್ಚ್‌ಗಳನ್ನು ಕಟ್ಟಲಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕಿದೆ. ಅದು ಬಸವಧರ್ಮ, ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಆಳಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್‌. ಪಾಟೀಲ ಹೇಳಿದರು.

ಪಟ್ಟಣದ ಸರಕಾರಿ ಕನ್ಯಾ ಪ್ರೌಢಶಾಲೆ ಆವರಣದಲ್ಲಿ ಪ್ರವಚನ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ವಚನ ದರ್ಶನ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಧರ್ಮ, ಸಂಸ್ಕೃತಿ, ಸಭ್ಯತೆ, ಆಚಾರ, ವಿಚಾರ ಉಳಿದಿರುವುದು ಮಹಿಳೆಯರಿಂದ. ಮಹಿಳೆಯರು ಮೂಢನಂಬಿಕೆಗೆ ಒಳಗಾಗಬಾರದು. ಮಾಟ, ಮಂತ್ರದಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಾದರೆ ಆಸ್ಪತ್ರೆಗಳು ಯಾಕೆ ಬೇಕು ಎಂದು ಪ್ರಶ್ನಿಸಿದ ಪಾಟೀಲ, ಸಮಾಜದಲ್ಲಿ ದೇವರು, ಧರ್ಮದ ಹೆಸರಿನ ಮೇಲೆ ಶೋಷಣೆ, ಮೋಸ, ವಂಚನೆ ಮಾಡಲಾಗುತ್ತಿದೆ. ಸತ್ಯ, ಶುದ್ಧ, ಕಾಯಕದ ತತ್ವ ಕೊಟ್ಟ ಮಹಾಮಾನವತಾವಾದಿ ಅಣ್ಣ ಬಸವಣ್ಣನವರ ತತ್ವಾದರ್ಶ ಪಾಲಿಸಿದರೆ ಯಾವ ದೇವರುಗಳ ಅವಶ್ಯಕತೆ ನಮಗಿರುವುದಿಲ್ಲ ಎಂದರು.

ಕಾಣದ ದೇವರು ನಮ್ಮ ರಕ್ಷಣೆ ಮಾಡುವುದಿಲ್ಲ. ನಿಜಗುಣ ಶ್ರೀಗಳಿಗೆ ಬೆದರಿಕೆ ಹಾಕುವ ಮೂಲಕ ಈ ಸಮಾಜವನ್ನು ಯತಾಸ್ಥಿತಿಗೆ ತರುವ ಪ್ರಯತ್ನ ನಡೆದಿದೆ. ಆದರೆ ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರ, ಅಸ್ಪ್ರಶ್ಯತೆ ನಿವಾರಣೆಗೆ ಹೋರಾಡಿದ ಬಸವಾದಿ ಶರಣರ ತತ್ವಾದರ್ಶವನ್ನು ಪ್ರತಿಯೊಬ್ಬರೂ ಪಾಲಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಶಾಸಕ ಡಾ| ಅಜಯಸಿಂಗ್‌, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಜೆಡಿಎಸ್‌ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿದರು. ನಂತರ ನಿಜಗುಣ ಪ್ರಭು ಸ್ವಾಮೀಜಿ ಪ್ರವಚನ ಮಾಡಿದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಬಸವಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಅವ್ವಣಗೌಡ ಪಾಟೀಲ ಯಲಗೋಡ, ಶಿವಣಗೌಡ ಹಂಗರಗಿ, ಷಣ್ಮುಖಪ್ಪಗೌಡ ಹಿರೇಗೌಡ, ಬಾಪುಗೌಡ ಬಿರಾಳ, ಮಹಾಂತಸಾಹು ಹರವಾಳ, ಮಹಾಂತಗೌಡ ಚನ್ನೂರ, ಸಂಗನಗೌಡ ಗುಳ್ಯಾಳ, ನೀಲಕಂಠ ಅವುಂಟಿ, ಗುರುಗೌಡ ಮಾಲಿಪಾಟೀಲ, ಬಸವರಾಜ ಲಾಡಿ, ಸಿದ್ದು ಯಂಕಂಚಿ, ವಿಜಯಕುಮಾರ ಪಾಟೀಲ ಸೇಡಂ, ಮಲ್ಲಿಕಾರ್ಜುನ ಬಿರಾದಾರ ಸೊನ್ನ, ಸದಾನಂದ ಪಾಟೀಲ, ಚಂದ್ರಶೇಖರ ತುಂಬಗಿ, ಅಖಂಡು ಕಲ್ಲಾ, ಸುರೇಶ ಹಳ್ಳಿ, ರಾಮಣ್ಣ ತೊನ್ಸಳ್ಳಿಕರ್‌ ಇದ್ದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.