ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಸುಶೀಲಾಬಾಯಿ
Team Udayavani, Apr 21, 2018, 3:04 PM IST
ಚಿಂಚೋಳಿ: ಪರಿಶಿಷ್ಟ ಜಾತಿ(ಮೀಸಲು) ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಸುಶೀಲಾಬಾಯಿ ಬಸವರಾಜ ಕೊರವಿ ಶುಕ್ರವಾರ ತಮ್ಮ ನಾಮಪತ್ರವನ್ನು ತಾಲೂಕು ಚುನಾವಣೆ ಅಧಿ ಕಾರಿ ಸಂತೋಷ ಸಪ್ಪಂಡಿ ಅವರಿಗೆ ಸಲ್ಲಿಸಿದರು.
ಮೀಸಲು ವಿಧಾನಸಭೆ ಮತಕ್ಷೇತ್ರಕ್ಕೆ ಜೆಡಿಎಸ್ ಅಧಿಕೃತ ಅಭ್ಯರ್ಥಿ ಸುಶೀಲಾಬಾಯಿ ಬಸವರಾಜ ಕೊರವಿ ಅವರು ತಾಲೂಕು ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ನ್ಯಾಯವಾದಿ ಆರ್.ಆರ್. ಪಾಟೀಲ ಮೋಘಾ, ಪುರಸಭೆ ಸದಸ್ಯ ಶಾಮರಾವ ಕೊರವಿ, ವಿಶ್ವನಾಥ ಬೀರನಳ್ಳಿ, ರಾಮಣ್ಣ ಸುಂಕಾ, ಮಹೆಬೂಬ ಶಾ, ಸಿದ್ದಯ್ಯ ಸ್ವಾಮಿ, ಎಸ್.ಕೆ. ಮುಕ್ತಾರ ಅವರೊಂದಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ಪರಿಶಿಷ್ಟ ಜಾತಿ (ಮೀಸಲು)ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಚುನಾವಣಾ ವೇಳಾಪಟ್ಟಿಯನ್ನು ಏ. 17ರಂದು ಪ್ರಕಟಿಸಲಾಗಿದೆ. ಆದರೆ ಗುರುವಾರದ ವರೆಗೆ ಯಾವುದೇ ನಾಮಪತ್ರಗಳು ಸಲ್ಲಿಕೆ ಆಗಿಲ್ಲ. ಶುಕ್ರವಾರ ಜೆಡಿಎಸ್ ಅಭ್ಯರ್ಥಿ ಸುಶೀಲಾಬಾಯಿ ಬಸವರಾಜ ಕೊರವಿ ನಾಮಪತ್ರ ಸಲ್ಲಿಸಿದ ಮೊದಲ ಮಹಿಳೆ ಆಗಿದ್ದಾರೆ. ಚುನಾವಣೆ ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಪಾಲಾಮೂರ, ರೇವಣಸಿದ್ದಪ್ಪ ದಂಡಿನ್, ವೆಂಕಟೇಶ ದುಗ್ಗನ, ನಾಗೇಶ ಭದ್ರಶೆಟ್ಟಿ ಇದ್ದರು.
ಆಸ್ತಿ ಮೌಲ್ಯ 78.40ಲಕ್ಷ ರೂ.: ಜೆಡಿಎಸ್ ಅಭ್ಯರ್ಥಿ ಸುಶೀಲಾಬಾಯಿ ಬಸವರಾಜ ಕೊರವಿ ಅವರ ಬಳಿ 77.50ಲಕ್ಷ ರೂ. ಬೆಲೆ ಬಾಳುವ 250 ತೊಲೆ ಬಂಗಾರ ಆಭರಣ, ನಗದು 90 ಸಾವಿರ ರೂ. ಸೇರಿದಂತೆ ಒಟ್ಟು ಮೌಲ್ಯ 78.40 ಲಕ್ಷ ರೂ. ಆಗಿದೆ ಎಂದು ತಾಲೂಕು ಚುನಾವಣಾ ಧಿಕಾರಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.