ಕಾಂಗ್ರೆಸ್‌ನಿಂದ ಜೆಡಿಎಸ್ ಸೇರ್ಪಡೆ
Team Udayavani, Oct 13, 2021, 12:09 PM IST
ಅಫಜಲಪುರ: ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸತ್ತು ಅಲ್ಲಿನ ಕೆಲವು ಮುಖಂಡರು ಜೆಡಿಎಸ್ ಸೇರ್ಪಡೆ ಆಗಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ ತಿಳಿಸಿದರು.
ಪಟ್ಟಣದ ವಾರ್ಡ್ ನಂ. 4ರ ಮುಸ್ಲಿಂ ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಆಡಳಿತ ಯಂತ್ರ ಕುಸಿದಿದೆ. ಯಾರೊಬ್ಬರಿಗೂ ಜನಪ್ರತಿನಿಧಿಗಳ ಮೇಲೆ ನಂಬಿಕೆ ಇಲ್ಲದಂತಾಗಿದೆ. ಅಲ್ಲದೇ ತಾಲೂಕಿನ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು ಮಾತ್ರ ನಿತ್ಯ ಬೆಳಕಿಗೆ ಬರುತ್ತಿದ್ದಾರೆ. ಹೀಗಾಗಿ ಅನೇಕ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಮುಖಂಡ ಶಿವಕುಮಾರ ನಾಟಿಕಾರ ಮಾತನಾಡಿ, ಶಾಸಕ ಎಂ.ವೈ. ಪಾಟೀಲಗೆ ವಯಸ್ಸಾಗಿದೆ. ಅವರಿಂದ ಕ್ಷೇತ್ರದಲ್ಲಿ ಸಂಚಾರ ಮಾಡಲಾಗುತ್ತಿಲ್ಲ, ಅಧಿಕಾರಿಗಳು ಅವರ ಅಧೀನದಲ್ಲಿ ಇಲ್ಲ ಎಂದರು.
ಮುಖಂಡರಾದ ಮನ್ಸೂರ ಪಟೇಲ್, ಅಮರಸಿಂಗ್ ರಜಪೂತ, ಶ್ರೀಶೈಲಗೌಡ ಮಾಲಿಪಾಟೀಲ, ಯೂಸೂಫ ಭಾಗವಾನ, ಗೌಸ್ ಹಳ್ಯಾಲ, ಮೈಬೂಬ್ ಜೋಗೂರ, ಶಬ್ಬೀರ ದಿಕ್ಸಂಗಿ, ಸಾದೀಕ್ ಚೌಧರಿ, ಅಶೋಕ ದೊಡ್ಮನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.