ಜೆಡಿಎಸ್ ನಾಮಾವಶೇಷ ಅಸಾಧ್ಯ: ದೇವೇಗೌಡ
Team Udayavani, Jan 6, 2022, 6:45 AM IST
ಕಾಂಗ್ರೆಸ್ ಮಹಾನುಭಾವನ ಭವಿಷ್ಯ ಯಾವತ್ತೂ ನಿಜವಾಗದು ; ಬಿಜೆಪಿ ಈಗ ಮೋದಿ ಪಕ್ಷ ತೃತೀಯ ರಂಗ ರಚನೆ ಕಷ್ಟ ಸಾಧ್ಯ
ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಜೆಡಿಎಸ್ ಶಕ್ತಿ ಕಡಿಮೆಯಾಗಿದ್ದರೂ ಅದನ್ನು ನಾಶಮಾಡಲು ಕಾಂಗ್ರೆಸ್ ಅಥವಾ ಬಿಜೆಪಿಗೆ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಸಂಪೂರ್ಣ ನಾಶ ಮಾಡುತ್ತೇವೆ ಅಂತಾ ಕಾಂಗ್ರೆಸ್ ಮತ್ತು ಬಿಜೆಪಿಯವರು ಹೇಳಿದ್ದಾರೆ. ನಮ್ಮದೇ ಪಕ್ಷದಲ್ಲಿದ್ದು, ಈಗ ಕಾಂಗ್ರೆಸ್‌ನಲ್ಲಿರುವ ಮಹಾನುಭಾವರೊಬ್ಬರು ಕೂಡ ಮುಂಬರುವ ಚುನಾವಣೆಗೆ ಜೆಡಿಎಸ್ ಇರದು ಎಂದು ಹೇಳಿದ್ದಾರೆ. ಆದರೆ, ನಮ್ಮ ನಾಮಾವಶೇಷ ಮಾಡಲು ಯಾರಿಂದಲೂ ಸಾಧ್ಯವಾಗದು ಎಂದು ತಿರುಗೇಟು ನೀಡಿದರು.
ಇತ್ತೀಚೆಗೆ ನಡೆದ ನಗರ-ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮುಂಬಯಿ ಕರ್ನಾಟಕದಲ್ಲಿ ಜೆಡಿಎಸ್ 50 ಸ್ಥಾನಗಳನ್ನು ಪಡೆದಿದೆ. ಮಂಗಳೂರು, ಉಡುಪಿ ಜಿಲ್ಲೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾ ಧಿಸಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಿದೆ. ಕಲಬುರಗಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಜಿಲ್ಲೆಯಲ್ಲಿ ಹೆಚ್ಚು ಜೆಡಿಎಸ್ ಶಾಸಕರು ಆಯ್ಕೆಯಾಗಿ ಸಚಿವರಾಗಿದ್ದರು. ರಾಜ್ಯದಲ್ಲಿ ಮತ್ತೆ ಸ್ವಂತ ಬಲದ ಮೇಲೆ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ನಾನು ತಿಂಗಳಲ್ಲಿ ಎರಡು ಬಾರಿ ಪ್ರವಾಸ ಮಾಡಲಿದ್ದೇನೆ. ಕುಮಾರಸ್ವಾಮಿ ಕೂಡ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಪೈಲಟ್ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ
ಮೋದಿ ಪಕ್ಷ ಎನ್ನಬೇಕೋ?
ಇವತ್ತು ಬಿಜೆಪಿಯನ್ನು ಬಿಜೆಪಿ ಎನ್ನಬೇಕೋ ಅಥವಾ ಮೋದಿ ಪಕ್ಷ ಎನ್ನಬೇಕೋ ಗೊತ್ತಿಲ್ಲ. ಬಿಜೆಪಿಗೆ ಪ್ರಧಾನಿ ಮೋದಿ ಹೆಸರನ್ನು ಬಿಟ್ಟರೆ ಬೇರೆ ಅಸ್ತಿತ್ವವೇ ಇಲ್ಲ. ಮುಂದೇನು ಆಗುತ್ತದೋ ನನಗೆ ಗೊತ್ತಿಲ್ಲ. ಇತ್ತ ಕಾಂಗ್ರೆಸ್ ಶಕ್ತಿಯೂ ರಾಷ್ಟ್ರ ಮಟ್ಟದಲ್ಲಿ ಕುಂದಿದೆ. ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಮಾತ್ರ ಕಾಂಗ್ರೆಸ್ಸಿನ ಸ್ಥಿರ ಸರಕಾರವಿದೆ. ಪಂಜಾಬ್‌ನಲ್ಲಿ ಸರಕಾರ ಅಸ್ಥಿರವಾಗಿದೆ ಎಂದರು.
ತೃತೀಯ ರಂಗವನ್ನು ಅಧಿಕಾರಕ್ಕೆ ತರಲು ಕೈಲಾದ ಸಹಾಯ ಮಾಡುತ್ತೇನೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿಯೂ ವಿವಿಧ ರಾಜ್ಯಗಳನ್ನು ಸುತ್ತುತ್ತಿದ್ದಾರೆ. ಆದರೂ, ತೃತೀಯ ರಂಗ ರಚನೆ ಕಷ್ಟ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.