ಕಾರ್ಮಿಕರ ಹಿತಕ್ಕಾಗಿ ಜೆಡಿಎಸ್ ಪ್ರತಿಭಟನೆ
Team Udayavani, Oct 28, 2021, 10:15 AM IST
ಚಿಂಚೋಳಿ: ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಸ್ಥಾಪಿತವಾಗಿರುವ ಚೆಟ್ಟಿನಾಡ ಸಿಮೆಂಟ್ ಕಂಪನಿಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸರೋಜಿನಿ ಮಹಿಷಿ ವರದಿ ಪ್ರಕಾರ ವೇತನ ಕೊಡುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಕಂಪನಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಕಲ್ಲೂರ ರೋಡ್ ಗ್ರಾಮದಲ್ಲಿ ಕಳೆದ 14 ವರ್ಷಗಳ ಹಿಂದೆ ಚೆಟ್ಟಿನಾಡ ಸಿಮೆಂಟ್ ಕಂಪನಿ ಪ್ರಾರಂಭಿಸಲಾಗಿದೆ. ಕಂಪನಿಯಲ್ಲಿ ವಿವಿಧ ಹಂತದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕೈಗಾರಿಕೆ ನಿಯಮಗಳ ಪ್ರಕಾರ ಕಾರ್ಮಿಕ ಇಲಾಖೆ ನಿಯಮಗಳು ಹಾಗೂ ಸರೋಜನಿ ಮಹಿಷಿ ವರದಿ ಪ್ರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಪ್ರಧಾನ ಕಾರ್ಯದರ್ಶಿ ಹಣಮಂತರಾವ ಪೂಜಾರಿ, ಫಕ್ರುದ್ದಿನ್ ಸುಲೇಪೇಟ ಮತ್ತು ಕಂಪನಿ ಕಾರ್ಮಿಕರು ಭಾಗವಹಿಸಿದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕಂಪನಿ ಮುಖ್ಯಸ್ಥರಿಗೆ ಮತ್ತು ತಹಶೀಲ್ದಾರ್‌ಗೆ ಸಲ್ಲಿಸಲಾಯಿತು. ಸಿಪಿಐ ಮಹಾಂತೇಶ ಪಾಟೀಲ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಮುಖಂಡರಾದ ಅಂಜಪ್ಪ ಕಲ್ಲೂರ, ಸನ್ನಿ ಜಾಬಶೆಟ್ಟಿ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.