ಜೆಡಿಎಸ್ ಪಕ್ಷದ ಬಗೆಗಿನ ಟೀಕೆಗೆ ಚುನಾವಣೆ ನಂತರ ಉತ್ತರ: ಎಚ್.ಡಿ. ದೇವೇಗೌಡ
Team Udayavani, Oct 8, 2020, 4:09 PM IST
ಕಲಬುರಗಿ: ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಟೀಕೆ ಮಾಡುವವರಿಗೆ ಚುನಾವಣೆ ನಂತರ ಉತ್ತರ ನೀಡುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದರು.
ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಇನ್ನೊಬ್ಬರ ಆಧಾರದ ಮೇಲೆಯೇ ಸವಾರಿ ಮಾಡುತ್ತದೆ ಎಂಬಿತ್ಯಾದಿ ಟೀಕೆಗಳಿಗೆ ಚುನಾವಣೆ ನಂತರ ಉತ್ತರ ನೀಡಲಾಗುವುದು ಎಂದರು.
ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಎರಡೆರಡು ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ. ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪುನರುಚ್ಚರಸಿದರು.
ಇದನ್ನೂ ಓದಿ:ನಾನು ಆರ್ ಆರ್ ನಗರ ಕ್ಷೇತ್ರದ ಹೆಣ್ಣು ಮಗಳು, ನನಗೆ ರಾಜಕೀಯ ಹೊಸದಲ್ಲ: ಕುಸುಮಾ
ಯಾರು ಮಾತಾಡಿದರೂ ಕಿವಿಗೊಡುವುದಿಲ್ಲ. ಪಕ್ಷ ಸಂಘಟನೆ ಕಡೆ ಒತ್ತು ಕೊಡುತ್ತೇನೆ. ಮೋದಿ ತಪ್ಪು ಹುಡುಕುವುದೇ ಕೆಲಸವಲ್ಲ. ಆರ್ಥಿಕವಾಗಿ ದೇಶ ಸಂಕಷ್ಟಕ್ಕೆ ಗುರಿಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆದೋರಿದ ಸಮಸ್ಯೆಗಳೂ ಕಾರಣವಾಗಿದೆ. ಕೋವಿಡ್ ಸೋಂಕೂ ಕಾರಣವಾಗಿದೆ. ಬರೀ ಮೋದಿಯ ಬಗ್ಗೆ ತಪ್ಪು ಹುಡುಕೋದೇ ನನ್ನ ಕೆಲಸವಲ್ಲ. ಎಲ್ಲವನ್ನೂ ಗಮನಿಸುತ್ತಿದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕಾಳಗ ನಡೆದಿದೆ. ಕೋವಿಡ್ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿವೆ. ಪಕ್ಷ ಸಂಘಟನೆ ಮಾಡುವುದೇ ನನ್ನ ಕೆಲಸ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದೇವೇಗೌಡರು ಅಳುತ್ತಿದ್ದರು, ಈಗ ಕುಮಾರಸ್ವಾಮಿ ತಂದೆಯನ್ನು ಅನುಕರಿಸಿ ಅಳುತ್ತಿದ್ದಾರೆ ಎಂಬ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರ ಹೇಳಿಕೆ ಬಗ್ಗೆಯೂ ಮಾತಾಡೋಕೆ ಹೋಗುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನಮ್ಮ ಪಕ್ಷ ಯಾರು ಯಾರನ್ನು ಬೆಳೆಸಿದೆ ಎಲ್ಲರಿಗೂ ಗೊತ್ತಿದೆ. ಯಾರ್ಯಾರು ಯಾವ ಪಕ್ಷ ಸೇರಿದರೂ ಅನ್ನುವುದೂ ಗೊತ್ತಿದೆ. ಚುನಾವಣಾ ಸಂದರ್ಭದಲ್ಲಿ ಏನೇನು ಮಾತನಾಡುತ್ತಿದ್ದಾರೆ ಅನ್ನೋದನ್ನೂ ಗಮನಿಸಿದ್ದೇನೆ. ನಾನು ನಿನ್ನೆ ರಾಜಕಾರಣಕ್ಕೆ ಬಂದಿಲ್ಲ. 1970ರಿಂದಲೂ ಈ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ನನಗೆ ಪಕ್ಷ ಬೆಳೆಸುವುದಷ್ಟೇ ಮುಖ್ಯ ಎಂದು ವಿವರಿಸಿದರು.
ಜೆಡಿಎಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿದೆ. ಇವರೆಲ್ಲಾ ಹೊರಗೆ ಬಂದ್ರು. ಆದರೆ ನಾನು ಏಕಾಂಗಿಯಾಗಿ ಪಕ್ಷ ಮುನ್ನಡೆಸಿದ್ದೇನೆ. ನಾನು ಯಾರ ಹೆಗಲ ಮೇಲೂ ಕೈಯಿಟ್ಟು ಪಕ್ಷ ಮುನ್ನಡೆಸುತ್ತಿಲ್ಲ. ಇವತ್ತು ಜೆಡಿಎಸ್ ಶಕ್ತಿ ಕಡಿಮೆಯಾಗಿದೆ. ಆದರೆ ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ. ಪಕ್ಷ ಮುನ್ನಡೆಸೋದೇ ನಮ್ಮ ಗುರಿ ಎಂದು ಹೇಳಿದರು.
ಮತ್ತೊಂದು ನ್ಯಾಯಮಂಡಳಿ ಅಗತ್ಯವಿಲ್ಲ: ಕೃಷ್ಣಾ ನದಿ ನೀರಿನ ಹಂಚಿಕೆ ಸಂಬಂಧ ಮತ್ತೊಂದು ನ್ಯಾಯಮಂಡಳಿ ರಚಿಸುವ ಅಗತ್ಯವಿಲ್ಲ. ರಾಜ್ಯದ ಪಾಲಿನ ನೀರನ್ನು ಉಳಿಸಿಕೊಳ್ಳಲು ಕೊನೆಯವರೆಗೂ ಹೋರಾಟ ಮುಂದುವರೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದಲ್ಲಿನ ಅಸಮಾಧಾನ ಶಮನವಾಗಲಿದೆ ಎಂದು ದೇವೇಗೌಡ ದೃಢ ವಿಶ್ವಾಸ ವ್ಯಕ್ತಪಡಿಸಿಸದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಬಂಡೆಪ್ಪ ಕಾಶೆಂಪೂರ, ನಾಗನಗೌಡ ಕಂದಕೂರ, ಮುಖಂಡರಾದ ಬೋಜೇಗೌಡ, ಶ್ರೀಕಂಠೇಗೌಡ, ಜಿಲ್ಲಾ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ. ಎಸ್. ಎಸ್ ಸಲಗರ, ಶಾಮರಾವ್ ಸೀರನ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.