2023ರ ಚುನಾವಣೆಯಲ್ಲಿ ಪುಟಿದೇಳಲಿದೆ ಜೆಡಿಎಸ್


Team Udayavani, Jul 25, 2022, 10:05 AM IST

2JDS

ಕಲಬುರಗಿ: ರಾಜ್ಯದಲ್ಲಿ ತಮ್ಮ ದೂರದೃಷ್ಟಿತ್ವದಿಂದ ಅತ್ಯುತ್ತಮ ಆಡಳಿತ ಮತ್ತು ಜನಮುಖೀ ಕೆಲಸಗಳಿಂದ ಹೆಸರಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್‌ ಪುನಃ ಪುಟಿದೇಳಲಿದೆ. 2023ರಲ್ಲಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಪಕ್ಷದ ರಾಜ್ಯ ಕೋರ್‌ ಕಮೀಟಿ ಸದಸ್ಯ ನಾಸೀರ ಹುಸೇನ್‌ ಉಸ್ತಾದ್‌ ಹೇಳಿದರು.

ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಜು.30ಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬರುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಭಾನುವಾರ ಪಕ್ಷದ ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಮತ್ತು ಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

20 ತಿಂಗಳಲ್ಲೇ ಜನಪರ ಆಡಳಿತ ನೀಡಿದ ಕುಮಾರಣ್ಣ ಅವರನ್ನು ಈಗಲೂ ಜನ ಇಷ್ಟ ಪಡುತ್ತಾರೆ. ಅವರು ಅಧಿಕಾರಕ್ಕೆ ಬರಬೇಕು ಎಂದು ಬಯಸುತ್ತಾರೆ. ಇಂತಹ ಸಂದರ್ಭದಲ್ಲಿ ಪಕ್ಷದ ಎಲ್ಲ ಸ್ತರದ ನಾಯಕರು, ಕಾರ್ಯಕರ್ತರು ಮತ್ತೂಮ್ಮೆ ಜೆಡಿಎಸ್‌ ಅಧಿಕಾರಕ್ಕೆ ತರಲು ನಾವು ಪ್ರಯತ್ನಿಸಬೇಕು ಎಂದರು.

ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಶ್ಯಾಮರಾವ್‌ ಸೂರನ್‌ ಮಾತನಾಡಿ, ರಾಜ್ಯದಲ್ಲಿರುವ ಎಲ್ಲ ಪಕ್ಷಗಳು ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಜನರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ಕಮಿಷನ್‌ ಮತ್ತು ಜಾತಿ ರಾಜಕಾರಣ ನೋಡಿ ರೋಸಿ ಹೋಗಿದ್ದಾರೆ. ಆದ್ದರಿಂದ ನಾವು ನಮ್ಮ ಪಕ್ಷದ ಉದ್ದೇಶ ಮತ್ತು ಕುಮಾರಸ್ವಾಮಿ ಅವರ ದೃಷ್ಟಿಕೋನ ಜನರಿಗೆ ತಿಳಿಸಿದರೆ ನಾವು ಖಂಡಿತವಾಗಿ ಜನರ ಮತಗಳಿಸಲು ಸಾಧ್ಯವಾಗುತ್ತದೆ ಎಂದರು.

ಅಲಿಂ ಇನಾಂದಾರ್‌, ಬಸವರಾಜ್‌ ಬಿರಬಿಟ್ಟೆ ಮಾತನಾಡಿದರು. ಸಂದರ್ಭದಲ್ಲಿ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಕೃಷ್ಣ ರೆಡ್ಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಲಿಂ ಇನಾಮದಾರ, ಮನೋಹರ ಪೋದ್ದಾರ, ಅಬ್ದುಲ್‌ ಮೆಹಿಮೂದ್‌, ಮಲಿಕ ನಾಗನಹಳ್ಳಿ, ಮಹಾಂತಪ್ಪ ಮದರಿ, ಬಸವರಾಜ ಬಿರಬಿಟ್ಟಿ, ಅಲಿಂ ಪಟೇಲ್‌, ವಲಸಲ್‌ಕುಮಾರ ಮಾಣಿಕ ಶಾಪೂರಕರ್‌, ಮಹಮ್ಮದ ದಸ್ತಗೀರಸಾಬ್‌ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಈ ಬಾರಿ ಜಿಲ್ಲೆಯಲ್ಲಿ ಜೆಡಿಎಸ್‌ ಅತ್ಯಂತ ಉತ್ಸಾಹದಿಂದ ಕಣಕ್ಕೆ ಇಳಿಯಲಿದೆ. ಅಫಜಲಪುರದಲ್ಲಿ ಶಿವಕುಮಾರ ನಾಟೀಕಾರ, ಚಿಂಚೋಳಿಯಲ್ಲಿ ಸಂಜೀವನ ಯಾಕಾಪುರ ಮತ್ತು ಸೇಡಂನಲ್ಲಿ ಬಾಲರಾಜ್‌ ಗುತ್ತೇದಾರ್‌ನಂತಹ ಯುವಕರು ಕಣಕ್ಕಿಳಿಯಲಿದ್ದಾರೆ. ಅವರನ್ನು ನಾವು ಖಂಡಿತ ಗೆಲ್ಲಿಸಬೇಕು. ಆ ನಿಟ್ಟಿನಲ್ಲಿ ಜನರಲ್ಲಿ ನಮ್ಮ ಪಕ್ಷ ಮತ್ತು ಕುಮಾರಸ್ವಾಮಿ ಅವರ ಆಡಳಿತದ ಕುರಿತು ಜಾಗೃತಿ ಮೂಡಿಸಿ ಮನವರಿಕೆ ಮಾಡಿಕೊಡಬೇಕು. ನಾಸೀರ್ಹುಸೇನ್ಉಸ್ತಾದ್‌, ಕೋರ್ಕಮೀಟಿ ಸದಸ್ಯ

ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸ್ವತ್ಛ ಮತ್ತು ಜನಪರ ಆಡಳಿತ ನೀಡಿದ ದೂರದೃಷ್ಟಿವತ್ವ ನಾಯಕರು. ಅವರು ಜು.30ರಂದು ಕಲಬುರಗಿಗೆ ಬರುತ್ತಿದ್ದಾರೆ. ವೀರಶೈವ ಕಲ್ಯಾಣ ಮಂಟಪದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಸಹಸ್ರಾರು ಜನರು ಭಾಗವಹಿಸಲಿದ್ದಾರೆ. ಇದು 2013ರ ಚುನಾವಣೆಯ ಮುನ್ನ ದಕ್ಷಿಣ ಮತ ಕ್ಷೇತ್ರದಲ್ಲಿ ಉಂಟಾಗಲಿರುವ ಪಕ್ಷದ ಹವಾ. ಶಿವಕುಮಾರ ನಾಟೀಕಾರ್‌, ಅಫಜಲಪುರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ

ಟಾಪ್ ನ್ಯೂಸ್

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.