ಜೇವರ್ಗಿ ಮಾದರಿ ಕ್ಷೇತ್ರವಾಗಿಸುವೆ: ಅಜಯಸಿಂಗ್
Team Udayavani, Sep 7, 2017, 10:47 AM IST
ಜೇವರ್ಗಿ: ಹೆಚ್ಚಿನ ಅನುದಾನ ತಂದು ಬರುವ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ತಾಲೂಕಿನ ನರಿಬೋಳ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ, ವಸತಿ ಗೃಹ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಆಂದೋಲಾ, ಬಿರಾಳ, ಅಂಕಲಗಾ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರದ ಕಟ್ಟಡ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು,
ಶೀಘ್ರವೇ ಉದ್ಘಾಟನೆಗೊಳ್ಳಲಿವೆ. ನರಿಬೋಳ ಆಸ್ಪತ್ರೆ ಕಟ್ಟಡಕ್ಕೆ 2.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಈ ಭಾಗದ ಜನರ ಬಹುದಿನಗಳ ಬೇಡಿಕೆ ಆಗಿರುವ ನರಿಬೋಳ-ಚಾಮನೂರ ಸೇತುವೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕಳೆದ 4 ವರ್ಷಗಳ ಅವಧಿಯಲ್ಲಿ ತಾಲೂಕಿನಲ್ಲಿ ಮೂರು ಸೇತುವೆಗಳು, ಒಂದು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಲ್ಲಿ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಬೀದಿ ದೀಪ ಅಳವಡಿಸಲಾಗುತ್ತಿದೆ. ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಶರಣಪ್ಪ ಹರನೂರ ಅಧ್ಯಕ್ಷತೆ ವಹಿಸಿದ್ದರು, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ ಇಟಗಾ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕೆಮ್ಮ ಚನ್ನಮಲ್ಲಯ್ಯ ಹಿರೇಮಠ, ಜಿಪಂ ಸದಸ್ಯ ಶಿವರಾಜ
ಪಾಟೀಲ ರದ್ದೇವಾಡಗಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಮುಖಂಡರಾದ ರಾಜಶೇಖರ ಸೀರಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಆಂದೋಲಾ, ಶಾಂತಗೌಡ ಪಾಟೀಲ, ಹಣಮಂತ್ರಾಯ ಕುಲಕರ್ಣಿ, ವಸಂತ ನರಿಬೋಳ, ಗುರುರಾಜ ಸುಬೇದಾರ, ನಾಗಣ್ಣ ಗಡ್ಡದ್, ಶಿವಶರಣಪ್ಪ ಕೋಬಾಳ ಮತ್ತಿತರರು ಭಾಗವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ದು ಪಾಟೀಲ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.