ನಿಷೇಧಾಜ್ಞೆ ಮಧ್ಯೆ ವೇಬ್ರಿಡ್ಜ್ ಟೆಂಡರ್: ರೈತರ ಆಕ್ರೋಶ
Team Udayavani, May 2, 2020, 12:30 PM IST
ಜೇವರ್ಗಿ: ಎಪಿಎಂಸಿ ಆವರಣದಲ್ಲಿ ನಡೆದ ವೇಬ್ರಿಡ್ಜ್ (ತೂಕದ ಯಂತ್ರ) ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ಹೊರಗೆ ಬರುತ್ತಿರುವ ಗುತ್ತಿಗೆದಾರರು.
ಜೇವರ್ಗಿ: ಕೋವಿಡ್ ಸೋಂಕು ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ 144ನೇ ಕಲಂ ಕೂಡ ಜಾರಿಯಲ್ಲಿದೆ. ಇದರ ಮಧ್ಯದಲ್ಲಿ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ವೇಬ್ರಿಡ್ಜ್ (ತೂಕ ಯಂತ್ರದ) ಟೆಂಡರ್ ಪ್ರಕ್ರಿಯೆ ನಡೆಸಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು ಬೆಳೆ ಬೆಳೆದು ಮಾರುಕಟ್ಟೆಗೆ ಮಾರಾಟಕ್ಕೆ ತಂದಾಗ ವೇಬ್ರಿಡ್ಜ್ (ತೂಕದ ಯಂತ್ರ)ಅವಶ್ಯಕತೆ ಇರುತ್ತದೆ. ಆದರೆ ಬಹುತೇಕ ರೈತರು ತಾವು ಬೆಳೆದ ಬೆಳೆಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಅದರಲ್ಲೂ ಇಡೀ ಪ್ರಪಂಚಕ್ಕೆ ಕಾಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮಿಸುತ್ತಿವೆ. ಇಂತಹ ಸಮಯದಲ್ಲಿ ವೇಬ್ರಿಡ್ಜ್ ಟೆಂಡರ್ ಪ್ರಕ್ರಿಯೆ ನಡೆಸಿದ ಅಧಿಕಾರಿಗಳ ಒಳಮರ್ಮ ಅರ್ಥವಾಗುತ್ತಿಲ್ಲ. ರೈತರಿಗೆ ಅನುಕೂಲ ಕಲ್ಪಿಸಬೇಕಾದ ಸಮಯದಲ್ಲಿ ಮಾಡದ ಟೆಂಡರ್ ಪ್ರಕ್ರಿಯೆ ಈ ಸಮಯದಲ್ಲಿ ಮಾಡಿದರೆ ಯಾರಿಗೂ ಪ್ರಯೋಜನವಿಲ್ಲ. ಅಲ್ಲದೇ ಎಪಿಎಂಸಿಗೆ ಸಂಬಂಧಪಟ್ಟ ಬೀದರ-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ 16 ಮಳಿಗೆಗಳ ಬಾಡಿಗೆ ಅವಧಿ ಕಳೆದ 2017ರಲ್ಲಿ ಪೂರ್ಣಗೊಂಡಿದ್ದರೂ, ಇಲ್ಲಿಯ ವರೆಗೂ ಅವುಗಳ ಹರಾಜು ಪ್ರಕ್ರಿಯೆ ನಡೆಸದಿರುವ ಎಪಿಎಂಸಿ ಕಾರ್ಯದರ್ಶಿ ನಡೆಗೆ ಸಾರ್ವಜನಿಕರಲ್ಲಿ ಹಾಗೂ ರೈತರಲ್ಲಿ ತೀವ್ರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಬಗ್ಗೆ ಎಪಿಎಂಸಿ ಆಡಳಿತಾಧಿಕಾರಿ ಎಂ.ವಿ. ಶೈಲಜಾ, ಕಾರ್ಯದರ್ಶಿ ಸವಿತಾ ನಾಯಕ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಅನೇಕ ರೈತರ ಒತ್ತಾಯದ ಮೇರೆಗೆ ವೇಬ್ರಿಡ್ಜ್ ಟೆಂಡರ್
ಪ್ರಕ್ರಿಯೆ ನಡೆಸಲಾಗಿದೆ ಎಂದು ನಾಲ್ವರು ರೈತರ ಯಾವುದೇ ದಾಖಲಾತಿ ಇಲ್ಲದ ಹೆಬ್ಬೆಟ್ಟು ಸಹಿ ಮಾಡಿದ ಮನವಿ ಪತ್ರ ತೋರಿಸಿದರು. ಪ್ರತಿ ಐದು ವರ್ಷಕ್ಕೊಮ್ಮೆ ವೇಬ್ರಿಡ್ಜ್ ಹರಾಜು ನಡೆಸಲಾಗುತ್ತದೆ. ಇದಕ್ಕೂ ಮೊದಲು ಎರಡ್ಮೂರು ಬಾರಿ ಕೊರೊನಾ ಹಾಗೂ ವಿವಿಧ ಕಾರಣಕ್ಕೆ ಹರಾಜು ಮುಂದೂಡಲಾಗಿತ್ತು. ಆದರೆ ಲಾಕ್ ಡೌನ್ ಪೂರ್ಣಗೊಳ್ಳುವ ಮೊದಲೇ ನಿಷೇಧಾಜ್ಞೆ ಮಧ್ಯೆ ಹರಾಜು ಪ್ರಕ್ರಿಯೆ ನಡೆಸಲಾಗಿದೆ. ಅಲ್ಲದೇ ಟೆಂಡರ್‌ನಲ್ಲಿ ಅರ್ಜಿ ಹಾಕಿದವರು ಹೊರತುಪಡಿಸಿ ಬೇರೆಯವರು ಭಾಗವಹಿಸಿದ್ದು ಕಂಡು ಬಂತು.
ಒಟ್ಟಾರೆ ರೈತರು ಹಾಗೂ ವರ್ತಕರಿಗೆ ಅನುಕೂಲವಾಗುವಂತಹ ನಿರ್ಧಾರವನ್ನು ಕೈಗೊಳ್ಳಬೇಕಾದ ಎಪಿಎಂಸಿ ಅಧಿಕಾರಿಗಳು ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಸುಭಾಷ ಹೊಸಮನಿ, ರೈತ ಮುಖಂಡ ವೆಂಕೋಬರಾವ ವಾಗಣಗೇರಿ, ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸಿದ್ಧರಾಮ ಹರವಾಳ, ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿಶ್ವಾರಾಧ್ಯ ಬಡಿಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶದಂತೆ ಹಾಗೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೇಬ್ರಿಡ್ಜ್ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಶೀಘ್ರವೇ ಟೆಂಡರ್ ಅವಧಿ ಪೂರ್ಣಗೊಂಡ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಲಾಗುವುದು.
ಎಂ.ವಿ. ಶೈಲಜಾ,
ಆಡಳಿತಾಧಿಕಾರಿ, ಎಪಿಎಂಸಿ, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.