ಜಿಡಗಾ ಮಠ ಕೊಡುಗೆ ಅನನ್ಯ
Team Udayavani, Dec 3, 2018, 10:47 AM IST
ಕಲಬುರಗಿ: ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬರುತ್ತಿರುವ ಮುಗುಳಖೋಡ-ಜಿಡಗಾ ಮಠವು ಉತ್ತರ ಕರ್ನಾಟಕ ಭಾಗಕ್ಕೆ ಅನನ್ಯ ಕೊಡುಗೆ ನೀಡಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.
ನಗರದ ಕೋಟನೂರ ಡಿ ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದಲ್ಲಿ ರವಿವಾರ ನಡೆದ ಮುಗಳಖೋಡ-ಜಿಡಗಾ ಮಠದ ಡಾ| ಮುರುಘರಾಜೇಂದ್ರ ಮಹಾಸ್ವಾಮಿಗಳ 34ನೇ ಗುರುವಂದನಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜಿಡಗಾ ಮತ್ತು ಮುಗುಳಖೋಡ ಮಠದ ಹಿಂದಿನ ಪೂಜ್ಯರು ನಾಡಿನಾದ್ಯಂತ ಅಸಂಖ್ಯಾತ ಭಕ್ತರನ್ನು ಸೃಷ್ಟಿಮಾಡಿದ್ದಾರೆ. ಇದು ಈ ಪೀಠದಲ್ಲಿ ಶಕ್ತಿಯಿದೆ ಎನ್ನುವುದನ್ನು ನಿರೂಪಿಸುತ್ತದೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಧ್ಯಾಕ್ಷ ಈಶ್ವರ ಖಂಡ್ರೆ ಮಾತನಾಡಿ, ಜಿಡಗಾ-ಮುಗಳಖೋಡ ಮಠವು ಈ ಭಾಗದಲ್ಲಿ ಧಾರ್ಮಿಕ ಕ್ಷೇತ್ರವನ್ನು ಶ್ರೀಮಂತಗೊಳಿಸಿದೆ. ಮಠದ ಈಗಿನ ಪೂಜ್ಯರು ಮಠದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದು ಹೇಳಿದರು.
ಕೋಟನೂರ ಡಿ ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ರವಿವಾರ ನಡೆದ ಮುಗಳಖೋಡ-ಜಿಡಗಾ ಮಠದ ಡಾ| ಮುರುಘರಾಜೇಂದ್ರ ಮಹಾಸ್ವಾಮಿಗಳ 34ನೇ ಗುರುವಂದನಾ ಮಹೋತ್ಸವವನ್ನು ಪ್ರಭಾವತಿ ಧರ್ಮಸಿಂಗ್ ಉದ್ಘಾಟಿಸಿದರು. ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಬಿ.ಜಿ. ಪಾಟೀಲ, ಆನಂದ ನ್ಯಾಮಗೌಡ, ಪಿ.ರಾಜು, ಆನಂದ ಮಾಮನಿ ಹಾಗೂ ಮುಖಂಡರಾದ ಅಲ್ಲಂಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಶರಣುಕುಮಾರ ಮೋದಿ, ಪವನಕುಮಾರ ವಳಕೇರಿ ಹಾಗೂ ಮುಂತಾದವರಿದ್ದರು. ಈ ಸಂದರ್ಭದಲ್ಲಿ ಡಾ| ಮುರುಘರಾಜೇಂದ್ರ ಮಹಾ ಸ್ವಾಮೀಜಿಗಳನ್ನು ಭಕ್ತವೃಂದದಿಂದ ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು.
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಸಕ್ತ ಬರಗಾಲ ಕಾಲದಲ್ಲೂ ತೊಗರಿ ಬೆಳೆದಿದ್ದು ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸಲು ಮುಂದಾಗಿದೆ. ಬೆಂಬಲ ಬೆಲೆಯಲ್ಲಿ ಖರೀದಿಸುವ ಸಂಬಂಧ ಈಗಾಗಲೇ ಸರ್ಕಾರ ಕೇಂದ್ರದ ಗಮನಕ್ಕೆ ತಂದಿದೆ. ಒಟ್ಟಾರೆ ಹಿಂದಿನ ವರ್ಷದಂತೆ ಸರ್ಕಾರ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಮೂಲಕ ರೈತರ ನೆರವಿಗೆ ಧಾವಿಸಲಿದೆ. ಹೀಗಾಗಿ ರೈತರು ಆತಂಕಕ್ಕೆ ಒಳಗಾಗಬಾರದು.
ಬಂಡೆಪ್ಪ ಖಾಶೆಂಪೂರ, ಸಹಕಾರ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.