ಮಳೆ ಹಾನಿ ಪ್ರದೇಶಕ್ಕೆ ದೌಡಾಯಿಸಿ
Team Udayavani, Jul 16, 2021, 9:18 PM IST
ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಜು.19ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಸಂಭಾವ್ಯ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ ಸ್ಥಿತಿಯಲ್ಲಿ ಇರಬೇಕೆಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.
ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ತುರ್ತುಸಭೆ ನಡೆಸಿದ ಅವರು, ಪ್ರವಾಹ ಎದುರಿಸಲು ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದರು. ಮಳೆಯಿಂದ ಕೇವಲ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಬಂದು ಸಮಸ್ಯೆ ಎದುರಾಗಲ್ಲ
. ಕಲಬುರಗಿ ಮಹಾನಗರದ ವಿವಿಧ ಪ್ರದೇಶಗಳಲ್ಲಿಯೂ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಇಂತಹ ಸಂದರ್ಭದಲ್ಲಿ ನಗರದ ವಿವಿಧ ಕೊಳಚೆ ಪ್ರದೇಶ ಹಾಗೂ ಗುಡಿಸಲಲ್ಲಿ ವಾಸಿಸುವ ಜನರ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಸೂಚಿಸಿದರು. ಸ್ಲಂ ನಿವಾಸಿಗಳ ಆರೋಗ್ಯ ಸ್ಥಿತಿಗತಿ ಕುರಿತು ಶೀಘ್ರವೇ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ವರದಿ ನೀಡಬೇಕು. ಮಳೆ ಬಂದಾಗ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಒಳಚರಂಡಿ ಸಮಸ್ಯೆ ಆಗದಂತೆ, ಮಳೆ ನೀರು ಸುಗಮವಾಗಿ ಹರಿದು ಹೋಗುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಭಾರೀ ಮಳೆಯಿಂದ ಮನೆಗಳು ಬಿದ್ದರೆ ತಕ್ಷಣವೇ ಅಧಿ ಕಾರಿಗಳು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರ ನೆರವಿಗೆ ಸ್ಪಂದಿಸಬೇಕು. ಜತೆಗೆ ಬೆಳೆ ಹಾನಿ ಬಗ್ಗೆ ರೈತರು ಸಮಸ್ಯೆ ಹೇಳುವ ಮುನ್ನವೇ ಅ ಧಿಕಾರಿಗಳು ರೈತರ ಬಳಿಗೆ ತೆರಳಿ, ಪರಿಸ್ಥಿತಿ ಅವಲೋಕಿಸಬೇಕು. ಬೆಳೆ ವಿಮೆ ಮುಂತಾದ ರೈತರ ಅಹವಾಲುಗಳಿಗೆ ತೊಡಕಾಗದಂತೆ ಅಧಿ ಕಾರಿಗಳು ನೋಡಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ಮಾಡಿದರು. ಪ್ರವಾಹ ಸಂದರ್ಭದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆದು ನೆರವಿಗೆ ಧಾವಿಸಲು ಜಿಲ್ಲಾಡಳಿತದಿಂದ ಈಗಾಗಲೇ ಸ್ಥಾಪಿಸಿರುವ ಸಹಾಯವಾಣಿ ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದರು. ಡಿಸಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾ° ಮಾತನಾಡಿ, ಪ್ರವಾಹ ಎದುರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ನದಿ ಪಾತ್ರದ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು. ಕಾಲುವೆಗಳಿಂದ ಸುಗಮವಾಗಿ ನೀರು ಹರಿದು ಹೋಗುವಂತೆ ಸ್ವತ್ಛಗೊಳಿಸಲಾಗಿದೆ. ಪ್ರವಾಹ ಎದುರಾದರೆ ರಕ್ಷಣೆಗೆಂದು ಪ್ರತಿ ತಾಲೂಕಿನಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರು ಇರಲಿದ್ದು, ಅವರಿಗೆ ಈಗಾಗಲೇ ತರಬೇತಿ ನೀಡಿ, ರಕ್ಷಣಾ ಉಪಕರಣಗಳನ್ನು ಒದಗಿಸಲಾಗಿದೆ ಎಂದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ| ವೈ.ಎಸ್.ರವಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ| ಸಿಮಿ ಮರಿಯಂ ಜಾರ್ಜ್, ಅಪರ ಜಿಲ್ಲಾ ಧಿಕಾರಿ ಡಾ| ಶಂಕರ ವಣಿಕ್ಯಾಳ ಹಾಗೂ ಕೃಷಿ, ನೀರಾವರಿ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳದ ಅಧಿ ಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅ ಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.