ಶಿವರಾಜ ರದ್ದೇವಾಡಗಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ
ದೊಡ್ಡಪ್ಪಗೌಡರಿಂದ ಅಧಿಕಾರ ಹಸ್ತಾಂತರ: ಗಣ್ಯರಿಂದ ಶುಭಾಶಯ
Team Udayavani, Jan 13, 2020, 10:43 AM IST
ಕಲಬುರಗಿ: ಒಂಭತ್ತು ವರ್ಷಗಳ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಸ್ಥಾನದಿಂದ ವಂಚಿತರಾದ ನಂತರ ಮುನಿಸಿಕೊಂಡು ಬಿಜೆಪಿ ಸೇರಿದ್ದ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಅಪ್ಪಾಸಾಬ ಪಾಟೀಲ ರದ್ದೇವಾಡಗಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರವಿವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಖಂಡರ ಅಭಿಪ್ರಾಯ ಆಲಿಸಿದ ಬಳಿಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರ ಉತ್ತರಾಧಿಕಾರಿಯಾಗಿ ಶಿವರಾಜ ರದ್ದೇವಾಡಗಿ ಅವರನ್ನು ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷರನ್ನಾಗಿ ವೀಕ್ಷಕರಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಘೋಷಣೆ ಮಾಡಿದರು.
ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಜಿ.ಪಂ ಸದಸ್ಯರಾಗಿರುವ ಯುವ ನಾಯಕ ಶಿವರಾಜ ಪಾಟೀಲ ರದ್ದೇವಾಡಗಿ ಮತ್ತು ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಡಾ| ಶರಣ ಭೂಪಾಲರಡ್ಡಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯನ್ನು ವಿಭಾಗೀಯ ಪ್ರಭಾರಿ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಜಿಲ್ಲೆಯ ಶಾಸಕರು, ಮುಖಂಡರ ಸಮ್ಮುಖದಲ್ಲಿ
ಪ್ರಕಟಿಸುತ್ತಿದ್ದಂತೆ ಎಲ್ಲರೂ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಇದರಿಂದಾಗಿ ಮತ್ತೂಂದು ಸಲ ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನ ಜೇವರ್ಗಿ ತಾಲೂಕಿಗೆ ಮುಂದುವರಿದಂತಾಗಿದೆ. ಅಧ್ಯಕ್ಷ ಸ್ಥಾನವನ್ನು 50 ವರ್ಷದೊಳಗಿನವರಿಗೆ ನೀಡಬೇಕು ಎಂಬ ವರಿಷ್ಠರ ನಿರ್ಧಾರದಂತೆ
ಶಿವರಾಜರನ್ನು ಆಯ್ಕೆ ಮಾಡಲಾಯಿತು.
ದೊಡ್ಡಪ್ಪಗೌಡ ಪಾಟೀಲ, ಬಿಜೆಪಿ ನಗರ ಜಿಲ್ಲಾಧ್ಯಕ್ಷರಾಗಿರುವ ಶಾಸಕ ಬಿ.ಜಿ.ಪಾಟೀಲ,
ಸಂಸದ ಡಾ| ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ಗುತ್ತೇದಾರ, ಡಾ| ಅವಿನಾಶ ಜಾಧವ, ವೆಂಕಟರೆಡ್ಡಿ ಮುದ್ನಾಳ, ಮುಖಂಡರಾದ ರವಿ ಬಿರಾದಾರ, ವಿದ್ಯಾಸಾಗರ ಕುಲಕರ್ಣಿ, ಬಿಜೆಪಿ ಯುವ ನಾಯಕ ಚಂದ್ರಕಾಂತ ಪಾಟೀಲ ಮತ್ತಿತರರು ಹಾಜರಿದ್ದರು.
ದೊಡ್ಡಪ್ಪಗೌಡ ಪಾಟೀಲರು ಪಕ್ಷದ ಧ್ವಜವನ್ನು ಶಿವರಾಜ ಪಾಟೀಲರಿಗೆ ಹಸ್ತಾಂತರಿಸುವ ಮೂಲಕ ಅಧಿಕಾರ ವಹಿಸಿ, ಶುಭ ಕೋರಿದರು. ಪಕ್ಷದ ಎಲ್ಲ ಚಟುವಟಿಕೆಗಳಿಗೆ ಪೂರಕವಾಗಿರುವ ಸಲಹೆ ಮತ್ತು ಮಾರ್ಗದರ್ಶನ ನೀಡುವಂತೆ ದೊಡ್ಡಪ್ಪಗೌಡರನ್ನು ಶಿವರಾಜ ಕೋರಿದರು. ನೂತನ ಅಧ್ಯಕ್ಷರಾಗಿ ಶಿವರಾಜ ಪಾಟೀಲ ಆಯ್ಕೆಯಾಗುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು, ಪಕ್ಷದ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಆಗಮಿಸಿ, ಆವರಣದಲ್ಲಿ ಪಟಾಕಿ ಸಿಡಿ ಸಂಭ್ರಮಿಸಿದರು. ಜೇವರ್ಗಿ ತಾಲೂಕಿನ ಮಲ್ಲಿನಾಥ ಪಾಟೀಲ ಯಲಗೋಡ, ರೇವಣಸಿದ್ದ ಸಂಕಾಲಿ, ಬಸನಗೌಡ ಪಾಟೀಲ, ಬಾಪುಗೌಡ ಪಾಟೀಲ ಮತ್ತಿತರರು ಇದ್ದರು.
ಮುಖಂಡರಾದ ಹರ್ಷಾನಂದ ಗುತ್ತೇದಾರ, ರವಿ ಬಿರಾದಾರ, ಮಹಿಳಾ
ಅಭಿವೃದ್ಧಿ ನಿಗಮ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಉಪಾಧ್ಯಕ್ಷ
ರಾಜಕುಮಾರ ಕೋಟೆ, ಪ್ರಮುಖರಾದ ದಯಾಘನ್ ಧಾರವಾಡಕರ್, ಉಮೇಶ ಪಾಟೀಲ, ವಿಜಯಕುಮಾರ ಹಳಕಟ್ಟಿ, ಶರಣಬಸಪ್ಪ ಅಂಬೆಸಿಂಗೆ, ಸಂಗಣ್ಣ ಇಜೇರಿ, ರೇಣುಕಾಚಾರ್ಯ, ನಾಮದೇವ ರಾಠೊಡ, ರಾಜುಗೌಡ ನಾಗನಹಳ್ಳಿ, ವಿಠ್ಠಲ ಜಾಧವ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.