ಕಲ್ಯಾಣ ಕರ್ನಾಟಕಕ್ಕೆ ಸರ್ಕಾರದಿಂದ ಮುಂದುವರಿದ ನಿರ್ಲಕ್ಷ್ಯ: ಕಾಂಗ್ರೆಸ್ ವಾಗ್ದಾಳಿ


Team Udayavani, Dec 15, 2020, 4:03 PM IST

ಕಲ್ಯಾಣ ಕರ್ನಾಟಕಕ್ಕೆ ಸರ್ಕಾರದಿಂದ ಮುಂದುವರಿದ ನಿರ್ಲಕ್ಷ್ಯ: ಕಾಂಗ್ರೆಸ್ ವಾಗ್ದಾಳಿ

ಕಲಬುರಗಿ: ಅತಿವೃಷ್ಟಿ ಹಾನಿಗೆ ಸೂಕ್ತ ಪರಿಹಾರ ನೀಡದಿರುವುದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ಕಡಿತ ಮಾಡಿರುವುದು, ಪ್ರಮುಖವಾಗಿ ಈ ಭಾಗದ ವಾಣಿಜ್ಯ ಬೆಳೆ ತೊಗರಿ ಖರೀದಿಗೆ ಪ್ರೋತ್ಸಾಹ ಧನ ನಿಗದಿ ಮಾಡದಿರುವುದು ಸೇರಿದಂತೆ ಇತರ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ತೊಗರಿಯನ್ನು ಕೇಂದ್ರದ ಬೆಂಬಲ ಬೆಲೆಯೊಂದಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದೊಂದಿಗೆ ಖರೀದಿ ಮಾಡಲಾಗುತ್ತಾ ಬರಲಾಗಿದೆ. ಆದರೆ ಪ್ರಸಕ್ತವಾಗಿ ನಯಾಪೈಸೆ ಪ್ರೋತ್ಸಾಹ ನಿಗದಿ ಮಾಡದೇ ಖರೀದಿಗೆ ಮುಂದಾಗಿದ್ದು, ಅತಿವೃಷ್ಟಿ ಯಿಂದ ಶೇ.  50ರಷ್ಟು ಬೆಳೆಹಾನಿಯಾಗಿರುವಾಗ ಪ್ರೋತ್ಸಾಹ ಧನ ಕೊಡದಿರುವುದು ರೈತರಿಗೆ ಪಾತಾಳಕ್ಕೆ ತಳ್ಳುವುದಾಗಿದೆ. ಹೀಗಾಗಿ ಈ ಕೂಡಲೇ ಪ್ರೋತ್ಸಾಹ ಧನ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಹಾಗೂ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5. 92 ಲಕ್ಷ ಹೆಕ್ಟೇರ್ ನಲ್ಲಿ ತೊಗರಿ ಬಿತ್ತನೆಯಾದರೆ ಇದರಲ್ಲಿ ಅತಿವೃಷ್ಟಿಯಿಂದ ಮೂರು ಲಕ್ಷ ಹೆಕ್ಟೇರ್ ನಷ್ಟವಾಗಿದೆ. ಪ್ರತಿವರ್ಷ ಸರಾಸರಿ 40 ರಿಂದ 45 ಲಕ್ಷ ಕ್ವಿಂಟಾಲ್ ಇಳುವರಿ ಬರುವಲ್ಲಿ ಈ ಬಾರಿ 15 ರಿಂದ 20 ಲಕ್ಷ ಕ್ವಿಂಟಾಲ್ ಮಾತ್ರ ಇಳುವರಿ ಬರುತ್ತಿದೆ. ಆದ್ದರಿಂದ ರಾಜ್ಯ ಸರಕಾರ ಕೇಂದ್ರದ 6000 ರು ಬೆಂಬಲ ಜತೆಗೆ ರಾಜ್ಯದಿಂದ 1500 ರೂ ಪ್ರೋತ್ಸಾಹ ಧನ ನಿಗದಿ‌ಮಾಡಿ 7500 ರೂ ಪ್ರತಿ ಕ್ವಿಂಟಾಲ್ ನಂತೆ ಖರೀದಿ ಮಾಡಬೇಕು. ಒಂದು ವೇಳೆ ವಿಳಂಬ ಧೋರಣೆ ತಳೆದರೆ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಎಂದರು.

ರೈತರ ಸರಕಾರವೆಂದು ಬರೀ ಬಾಯಲ್ಲಿ ಹೇಳಿದರೆ ಹಾಗೂ ಹೆಗಲ ಮೇಲೆ ಹಸಿರು ಹೊದಿಸಿಕೊಂಡರೆ ಸಾಲದು.‌ ಅದಕ್ಕೆ ತಕ್ಕಂತೆ ನಡೆಯಬೇಕು. ಕೇಂದ್ರ ಸರಕಾರವೂ ರೈತರ ಕಡೆ ನೋಡದೇ ಹಿಟ್ಲರ್ ನಂತೆ ನಡೆದುಕೊಳ್ಳುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿ ಉಂಟಾಗಿ ಎರಡು ತಿಂಗಳು ಮೇಲಾಗಿದೆ. ಈಗ ಕೇಂದ್ರ ಅಧ್ಯಯನ ತಂಡ ಆಗಮಿಸಿದೆ. ರಾಜ್ಯ ಸರ್ಕಾರ ಕೇಳಿದ ಪರಿಹಾರ ನೀಡದೇ ಕೇಂದ್ರ ತಾರತಮ್ಯ ವಹಿಸಿದೆ. ಒಟ್ಟಾರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಸಮನ್ವಯತೆ ಇಲ್ಲ ಎನ್ನುವಂತಾಗಿದೆ. ರಾಜ್ಯದಿಂದ 25 ಸಂಸದರಿದ್ದರೂ ಉಪಯೋಗ ಬಾರದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊನ್ನೆ ನಡೆದ ಅಧಿವೇಶನದಲ್ಲಿ ತೊಗರಿ ಖರೀದಿ ಹಾಗೂ ಬೆಂಬಲ ಬೆಲೆ ಬಗ್ಗೆ ಕೇಳಿದರೆ ಮುಖ್ಯ ಮಂತ್ರಿಗಳು ಉತ್ತರವೇ ನೀಡಲಿಲ್ಲ. ಕಳೆದ ವರ್ಷ ಕಲ್ಯಾಣ ಕರ್ನಾಟಕ ವೆಂದು ಘೋಷಣೆ ಮಾಡಿದ್ದನ್ನು ಬಿಟ್ಟರೆ ಬಿಜೆಪಿ ಸರ್ಕಾರ ಈ ಭಾಗಕ್ಕೆ ಏನು ಮಾಡ್ತಾ ಇಲ್ಲ. ಕೆಕೆಆರ್ ಡಿಬಿ ಗೆ ನಿಗದಿ ಇರುವ 1500 ಕೋ. ರೂ ಕಡಿತ ಮಾಡಿದೆ. ಇಂತಹುದರಲ್ಲಿ‌ ಮಂಡಳಿ ಅಧ್ಯಕ್ಷರು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಗ್ರಾ.ಪಂಗೆ ಒಂದು ಕೋ.ರೂ ಕೊಡುವುದಾಗಿ ಹೇಳಿದ್ದಾರೆ. ಮಂಡಳಿಗೆ ಹಣವೇ ಬಿಡುಗಡೆಯಾಗಿಲ್ಲ. ಗ್ರಾಮಗಳ ಅಭಿವೃದ್ಧಿ ಎಂಬುದೇ ಗೊತ್ತಿಲ್ಲದ ಬಿಜೆಪಿ ಸರ್ಕಾರ ಗ್ರಾಮ ಸ್ವರಾಜ್ ಜಪಿಸುತ್ತಿದೆ. ಗ್ರಾಮ ಸ್ವರಾಜ್ ಕ್ಕೆ ಅಡಿಪಾಯ ಹಾಕಿದ್ದೇ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎಂದರು.

ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅಧಿಕಾರಿಗಳ ಸಂಬಂಧಿಕರು ಚುನಾವಣೆಗೆ ನಿಂತರೆ ಅಧಿಕಾರಿಗಳ ಮೂಲಕ ಒತ್ತಡ ಹಾಕಿ ನಾಮಪತ್ರ ವಾಪಸ್ಸು ಮಾಡಿಸಲಾಗುತ್ತಿದೆ. ಪೊಲೀಸರಂತು ಬಿಜೆಪಿ ಶಾಸಕರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರ್ಬಳಿಕೆ ಬಿಜೆಪಿಯವರಿಂದ ಕಲಿಯಬೇಕೆಂದರು.

ಹಿಂಬಾಗಿನಿಂದ ಬಂದು ಸರ್ಕಾರ ರಚಿಸಿದ್ದರಿಂದ ಎಲ್ಲ ಕೆಲಸ ಕಾರ್ಯಗಳು ಹಿಂದಿನ ಬಾಗಿಲಿನಿಂದಲೇ ನಡೆದಿವೆ ಎಂದು ಡಾ.ಅಜಯಸಿಂಗ್, ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಾದ ಎಂ.ವೈ. ಪಾಟೀಲ್, ಖನೀಜ್ ಫಾತೀಮಾ, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ನೀಲಕಂಠ ರಾವ ಮೂಲಗೆ, ಶರಣಕುಮಾರ ಮೋದಿ, ಸುಭಾಷ್ ರಾಠೋಡ, ವಿಜಯಕುಮಾರ ರಾಮಕೃಷ್ಣ, ಶರಣು ಭೂಸನೂರ, ಈರಣ್ಣ ಝಳಕಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.