Kalaburagi; ಎರಡು ವರ್ಷಗಳ ಬಳಿಕ ದಿಶಾ ಸಭೆ; ಗೈರಾದ ಕಾಂಗ್ರೆಸ್ ಶಾಸಕರು
Team Udayavani, Feb 11, 2024, 12:53 PM IST
ಕಲಬುರಗಿ: ಕಳೆದ 2022ರ ಜೂನ್ 13 ರಂದು ನಡೆದಿದ್ದ ಕೇಂದ್ರ ಸರ್ಕಾರದ ಪುರಸ್ಕೃತ ಯೋಜೆನಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆ ಎರಡು ವರ್ಷಗಳ ನಂತರ ಇಂದು (ಫೆ. 11) ನಡೆಯಿತು.
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಯು ಸಹ ಅಧ್ಯಕ್ಷರಾದ ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆಯಿತು.
ಎರಡು ವರ್ಷಗಳ ಅವಧಿಯಲ್ಲಿ ಕನಿಷ್ಠ ಐದು ದಿಶಾ ಸಭೆ ನಡೆಯಬೇಕಿತ್ತು. ಆದರೆ ಸಭೆ ನಡೆಯದ ಹಿನ್ನೆಲೆಯಲ್ಲಿ ಜತೆಗೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಮನಗಂಡು ಭಾನುವಾರ ರಜೆ ಇದ್ದರೂ ಈಗ ಸಭೆ ನಡೆಸಲಾಗುತ್ತಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಸಭೆ ಆರಂಭದಲ್ಲಿ ತಿಳಿಸಿದರು.
ಸಭೆಗೆ ಶಿಷ್ಟಾಚಾರ ಪ್ರಕಾರ ಸ್ವಾಗತ ಕೋರಲಿಲ್ಲವೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಉಪನಾಯಕ ಸುನೀಲ್ ವಲ್ಲಾಪುರೆ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದ ಸಭೆ ಸಹ ಅಧ್ಯಕ್ಷ ವಹಿಸಿದ್ದ ಡಾ. ಉಮೇಶ ಜಾಧವ್, ದಿಶಾ ಸಭೆ ನಡೆಯುವ ಕುರಿತಾದ ಬ್ಯಾನರ್ ಸಹ ಹಾಕಿಲ್ಲವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಪಕ್ಷದ ವಿಧಾನಸಭಾ ಸದಸ್ಯರು ಸಭೆಯಿಂದ ದೂರ ಉಳಿದರು. ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ತಿಪ್ಪಣ್ಣಪ್ಪ ಕಮಕನೂರ ಮಾತ್ರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಗೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿಲ್ಲವೆಂದು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಕಾಟಾಚಾರಕ್ಕೆ ಸಭೆ ನಡೆಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಜಿಲ್ಲಾಡಳಿತ ವಿಫಲವಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಅಂಬೇಡ್ಕರ್ ಪುತ್ಥಳಿ ಅವಮಾನ ನಂತರ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೀಡಾದ ಸಂಬಂಧ ಪ್ರಕರಣ ದಾಖಲಾಗಿದೆಯೇ ಎಂದು ಪ್ರಶ್ನಿಸಿದರಲ್ಲದೇ ತಮ್ಮ ಕ್ಷೇತ್ರದಲ್ಲಿ ರಾತ್ರಿ ಸಾರ್ವಜನಿಕ ಸಭೆಗೆ ಹೋದರೆ ಪಿಎಸ್ಐ ಕರೆದರೂ ಬರುವುದಿಲ್ಲ. ಆದರೆ ಮಾಜಿ ಶಾಸಕ ಕರೆಯದಿದ್ದರೂ ಆ ಕಾರ್ಯಕ್ರಮಕ್ಕೆ ಹತ್ತು ನಿಮಿಷ ಮೊದಲೇ ಹೋಗಿ ನಿಲ್ತಾರೆ. ಇದೇನಾ ಶಿಷ್ಟಾಚಾರ? ನಮ್ಮ ಮಾತು ಪಿಡಿಓ ಕೇಳುತ್ತಿಲ್ಲ. ಒಟ್ಟಾರೆ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.