Kalaburagi; ಸಾಲ ಮನ್ನಾ ಮಾಡಿ ರೈತರಿಗೆ ಆತ್ಮವಿಶ್ವಾಸ ತುಂಬಿಸಲಿ: ಆರ್.ಅಶೋಕ್
Team Udayavani, Nov 21, 2023, 12:45 PM IST
ಕಲಬುರಗಿ: ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದ್ದರಿಂದ ರೈತರಿಗೆ ನಯಾ ಪೈಸೆ ಪರಿಹಾರ ಕೊಡಲಿಕ್ಕಾಗುತ್ತಿಲ್ಲ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
ವಿಪಕ್ಷ ನಾಯಕರಾದ ನಂತರ ಕಲ್ಯಾಣ ಕರ್ನಾಟಕದ ಕಲಬುರಗಿಯಿಂದ ಬರ ಅಧ್ಯಯನ ಆರಂಭಿಸಿ, ವಾಸ್ತವ ಸ್ಥಿತಿಗತಿ ಅವಲೋಕಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾವು ಹಿಂದೆ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಡಳಿತದ ಅವಧಿಯಲ್ಲಿ ಬರ ಮತ್ತು ಪ್ರವಾಹದಿಂದ ಆದ ಹಾನಿಗೆ ತಿಂಗಳೊಳಗೆ ರಾಜ್ಯ ಸರ್ಕಾರದಿಂದ ಮೊದಲು ಪರಿಹಾರ ನೀಡಿ ತದನಂತರ ಕೇಂದ್ರಕ್ಕೆ ಸಹಾಯದ ಪರಿಹಾರ ಕೇಳಲಾಗಿದೆ. ಬೇಕಿದ್ದರೆ ಸಿಎಂ- ಡಿಸಿಎಂ ದಾಖಲೆಗಳನ್ನು ನೋಡಲಿ ಎಂದು ಅಶೋಕ ಸವಾಲು ಹಾಕಿದರು.
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡುವಾಗ ಕೇಂದ್ರದತ್ತ ಮುಖವೇ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಹಿಂದೆ ಮುಂದೆ ನೋಡದೇ ರೈತರ ಸಾಲ ಮನ್ನಾ ಮಾಡಬೇಕೆಂದರು.
ಭೀಕರ ಬರದಿಂದ ತತ್ತರಿಸಿರುವ ರೈತರಿಗೆ ಸಾಲ ಮನ್ನಾ, ಸೂಕ್ತ ಪರಿಹಾರ ನೀಡುವ ಮುಖಾಂತರ ಆತ್ಮವಿಶ್ವಾಸ ಮೂಡಿಸಬೇಕೆಂದರು.
ಕಾಟಾಚಾರದ ಸಮೀಕ್ಷೆ: ಹಿಂಗಾರು- ಮುಂಗಾರು ಎರಡು ಮಳೆ ಕೈ ಕೊಟ್ಟ ಪರಿಣಾಮ ಎಲ್ಲ ಬೆಳೆಗಳು ಹಾನಿಯಾಗಿವೆ. ಆದರೆ ರೈತರ ಹೊಲಕ್ಕೆ ಹೋದ ಸಂದರ್ಭದಲ್ಲಿ ಬೆಳೆ ಹಾನಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ರೈತರು ಅಳಲು ನೋಡಿಕೊಳ್ಳುತ್ತಿದ್ದಾರೆ. ತಾವು ಈ ಹಿಂದೆ ಕಂದಾಯ ಸಚಿವರಾಗಿದ್ದಾಗ ಆ್ಯಪ್ ರಚಿಸಲಾಗಿ, ಅದರಲ್ಲೇ ಎಲ್ಲಹಾನಿ ದಾಖಲಿಸಬೇಕು. ಆದರೆ ಸುಮ್ಮನೆ ಫೋಟೊ ತೆಗೆದು ದಾಖಲಿಸಲಾಗಿದೆ. ಪ್ರಮುಖವಾಗಿ ಮೊಬೈಲ್ ನಂಬರ್ ದಾಖಲಿಸಿಲ್ಲ. ಪ್ರಮುಖವಾಗಿ ಉಸ್ತುವಾರಿ ಸಚಿವರುಗಳೇ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿಲ್ಲ. ಬದಲಾಗಿ ಪಂಚರಾಜ್ಯ ಚುನಾವಣೆಗೆ ತೆರಳಿದ್ದಾರೆ. ಅವರಿಗೆ ರಾಜ್ಯದ ರೈತರ ಹಿತಾಸಕ್ತಿಯಿಂದ ಬೇರೆಯದ್ದೆ ಒಲವಿದೆ ಎಂದು ವಿಪಕ್ಷ ನಾಯಕ ವಾಗ್ದಾಳಿ ನಡೆಸಿದರು.
ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪ: ರಾಜ್ಯದ ಬರಗಾಲ ಪರಿಸ್ಥಿತಿ, ರೈತರಿಗೆ ಸಮರ್ಪಕ ಪರಿಹಾರ ದೊರಕುವ ಮತ್ತು ಸಾಲ ಮನ್ನಾ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಗಳನ್ನು ಬೆಳಗಾವಿ ಅಧಿವೇಶನದಲ್ಲಿ ನಿಲುವಳಿ ಮಂಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಮರ್ಪಕ ಪರಿಹಾರ ದೊರಕುವವರೆಗೂ ಹಾಗೂ ಸರ್ಕಾರದ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸುವವರೆಗೂ ತಾವು ಹೋರಾಟದಿಂದ ವಿಶ್ರಮಿಸುವುದಿಲ್ಲ ಎಂದು ತಿಳಿಸಿದರು.
ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.