Kalaburagi; ಯಾವುದೇ ಕಾರ್ಖಾನೆಗೂ ಕಬ್ಬು ಕಳುಹಿಸಲು ರೈತರಿಗೆ ಸ್ವಾತಂತ್ರ್ಯ ನೀಡಿ: ಆಕ್ರೋಶ

Team Udayavani, Dec 4, 2023, 2:03 PM IST

Kalaburagi; ಯಾವುದೇ ಕಾರ್ಖಾನೆಗೂ ಕಬ್ಬು ಕಳುಹಿಸಲು ರೈತರಿಗೆ ಸ್ವಾತಂತ್ರ್ಯ ನೀಡಿ: ಆಕ್ರೋಶ

ಕಲಬುರಗಿ:” ಕಳೆದ ವರ್ಷ ಕಬ್ಬು ಜಾಸ್ತಿ ಇದ್ದ ಸಮಯದಲ್ಲಿ ಕಾರ್ಖಾನೆಗೆ ಹೋಗಿ ಕಾಲಿಗೆ ಬಿದ್ದರೂ ಕಬ್ಬು ತೆಗದುಕೊಂಡು ಹೋಗಲಿಲ್ಲ. ಆದರೆ ಈ ವರ್ಷ ಕಬ್ಬು ಕಡಿಮೆ ಪ್ರದೇಶದಲ್ಲಿರುವುದರಿಂದ ಕಾರ್ಖಾನೆಯವರು ಆ ಕಾರ್ಖಾನೆಗೆ ಹಾಕಬೇಡಿ, ನಮ್ಮಲ್ಲಿಯೇ ಹಾಕಿ ಎನ್ನುವುದು ರೈತರನ್ನು ಶೋಷಣೆ ಮಾಡುವಂತಾಗಿದೆ. ಪ್ರಮುಖವಾಗಿ ಕಾರ್ಖಾನೆ ಕಾರ್ಯವ್ಯಾಪ್ತಿ ತೆಗದು ಹಾಕಿ” – ಇದು ಜಿಲ್ಲೆಯ ಅಫಜಲಪುರ ತಾಲೂಕಿನ ಹಾವಳಗಾ ಬಳಿಯ ರೇಣುಕಾ ಸಕ್ಕರೆ ಕಾರ್ಖಾನೆ ವಿರುದ್ದ ರೈತರ ಆಕ್ರೋಶದ ಧ್ವನಿ.

ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾಡಳಿತ ಹಾಗೂ ರೈತರ ಸಭೆಯಲ್ಲಿ ರೇಣುಕಾ ಸಕ್ಕರೆ ಕಾರ್ಖಾನೆ ಅಡಳಿತ ವಿರುದ್ದ ಅದರಲ್ಲೂ ಕಾರ್ಯಕ್ಷೇತ್ರದ ವ್ಯಾಪ್ತಿಯೊಳಗೆ ರೈತರು ಕಡ್ಡಾಯವಾಗಿ ರೇಣುಕಾ ಕಾರ್ಖಾನೆಗೆ ಹಾಕಬೇಕೆಂದು ನ್ಯಾಯಾಲಯ ಮೋರೆ ಹೋಗಿದ್ದು ಸರಿಯಲ್ಲ.‌ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ರೈತರ ನೆರವಿಗೆ ಬರಬೇಕೆಂದು ವಿನಂತಿಸಿದರು.

ಕಳೆದ ವರ್ಷ ಕಬ್ಬು ಜಾಸ್ತಿ ಇದ್ದ ಸಮಯದಲ್ಲಿ ರೇಣುಕಾ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ಪಡೆಯಲು ಮುಂದಾಗಲಿಲ್ಲ. ಆ ಸಮಯದಲ್ಲಿ ಅಫಜಲಪುರ ತಾಲೂಕಿನ ಚಿಣಮಗೇರಾ ಬಳಿಯ ಕೆಪಿಆರ್ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕಲಾಗಿದೆ. ಆದರೆ ಈ ವರ್ಷ ಕಬ್ಬು ಕಡಿಮೆ ಇರುವ ಹಿನ್ನೆಲೆಯಲ್ಲಿ ಕಬ್ಬು ತಮ್ಮ ಕಾರ್ಖಾನೆ ಹಾಕಬೇಕೆಂದು ರೇಣುಕಾ ಸಕ್ಕರೆ ಕಾರ್ಖಾನೆಯವರು ನ್ಯಾಯಾಲಯದ ಮೋರೆ ಹೋಗಿದ್ದಾರೆ.‌ ಕಾರ್ಖಾನೆಯವರು ತಮ್ಮ ಅನುಕೂಲಸಿಂಧುದಂತೆ ನಡೆದುಕೊಳ್ಳುತ್ತಿದ್ದಾರೆ.‌ ಇದಕ್ಕೆಲ್ಲ ಬ್ರೇಕ್ ಹಾಕಬೇಕೆಂದು ರೈತರು‌ ಮನವಿ ಮಾಡಿದರು. ‌ರೈತರು ಸ್ವತಂತ್ರವಾಗಿ ಯಾವುದೇ ಕಾರ್ಖಾನೆಗೆ ಕಬ್ಬು ಹಾಕಲು ಅನುಮತಿ ನೀಡಬೇಕು.‌ ಕಾರ್ಯವ್ಯಾಪ್ತಿ ಎಂಬ ನಿಯಮ ತೆಗೆದು ಹಾಕಿ ಎಂದು ರೈತರೆಲ್ಲ ಒಕ್ಕೊರಲಿನಿಂದ ಮನವಿ ಮಾಡಿದರು.

ಕಷ್ಟಪಟ್ಟು ಕಬ್ಬು ಬೆಳೆಯಲಾಗುತ್ತದೆ.‌ ಆದರೆ ಕಾರ್ಖಾನೆಯವರ ಕಾನೂನು ಸಂಘರ್ಷದಿಂದ ರೈತ ಶೋಷಣೆಗೆ ಒಳಗಾಗುವಂತಾಗಿದೆ. ಕಾರ್ಯವ್ಯಾಪ್ತಿ ಬೇಡ. ನಾವು ಬೆಂಗಳೂರಿಗೂ ಹಾಕ್ತೇವೆ.‌ ನಮಗ್ ಕಾರ್ಯವ್ಯಾಪ್ತಿ ತೆಗೆದು ಹಾಕಿ.‌ ದ್ವಿಪಕ್ಷೀಯ ಒಪ್ಪಂದ ಪ್ರಕಾರ ಕಬ್ಬು ಕಟಾವು ನಿಗದಿತ ದಿನಾಂಕದೊಳಗೆ ಒಂದು ರೂ ಪಡೆಯದೆ(ಟೋಲಿಗೆ ಹಣ) ಕಬ್ಬು ಪಡೆಯಬೇಕು. ಆದರೆ ಇದನ್ನೆಲ್ಲ ಗಾಳಿಗೆ ತೂರಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ.‌ ಟ್ರಾನ್ಸ್ ಫೋರ್ಟ ಖರ್ಚನ್ನು ಯಥೇಚ್ಚವಾಗಿ ರೈತರ ಮೇಲೆ ಹಾಕಲಾಗುತ್ತಿದೆ. 10 ಸಾವಿರ ರೂ ನೀಡಿ ಒಪ್ಪಂದ ಮಾಡಿಕೊಳ್ಳುವುದು ಯಾವ ನ್ಯಾಯ? ಒಟ್ಟಾರೆ ಸಕ್ಕರೆ ಕಾರ್ಖಾನೆಗಳ ಶೋಷಣೆ ತಪ್ಪಿಸಬೇಕೆಂದರು.‌

ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ರೈತರ ಅಭಿಪ್ರಾಯವನ್ನೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ಪ್ರಕಟಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಆಹಾರ, ನಾಗರಿಕ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.