ಕಲಬುರಗಿ ಪಾಲಿಕೆ ಅತಂತ್ರ: ಬಿಜೆಪಿ ನಿರೀಕ್ಷೆಮೀರಿ ಸಾಧನೆ,ಕಿಂಗ್ ಮೇಕರ್ ಸ್ಥಾನದಲ್ಲಿ ಜೆಡಿಎಸ್
Team Udayavani, Sep 6, 2021, 4:07 PM IST
ಕಲಬುರಗಿ: ತೀವ್ರ ಬಿರುಸಿನಿಂದ ಕೂಡಿದ್ದ ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬಾರದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಅತಿ ಹೆಚ್ಚಿನ ಸ್ಥಾನ ಪಡೆದು ಹೊರ ಹೊಮ್ಮಿದರೂ ಬಿಜೆಪಿ ನಿರೀಕ್ಷೆ ಮೀರಿ ಸಾಧನೆ ಮಾಡಿದೆ.
55 ಸ್ಥಾನಗಳಲ್ಲಿ ಅಂತಿಮವಾಗಿ ಕಾಂಗ್ರೆಸ್ 27 ಹಾಗೂ ಬಿಜೆಪಿ 23 ಹಾಗೂ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಜಯಗಳಿಸಿದೆ. ಒಂದು ಸ್ಥಾನದಲ್ಲಿ ಮಾತ್ರ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 28 ಸ್ಥಾನಗಳು ಬೇಕಾಗಿದ್ದು, ಯಾರಿಗೂ ಈ ಸ್ಥಾನಗಳು ಬಂದಿಲ್ಲ.
ಬಿಜೆಪಿ ನಿರೀಕ್ಷೆ ಮೀರಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದೆ. ಕಳೆದ ಸಲ ಬಿಜೆಪಿ ಕೇವಲ ಏಳು ಸ್ಥಾನ ಗಳಿಸಿತ್ತು. ಅದರಕ್ಕಿಂತ ಹಿಂದಿನ ಸಲ ಬಿಜೆಪಿ 17 ಸ್ಥಾನ ಹೊಂದಿತ್ತು. ಈಗ 23 ಸ್ಥಾನ ಪಡೆದಿದ್ದು, ಉತ್ತಮ ಸಾಧನೆ ಎನ್ನಬಹುದಾಗಿದೆ.
ಇದನ್ನೂ ಓದಿ:ಬೊಮ್ಮಾಯಿ ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ: ಮುರುಗೇಶ್ ನಿರಾಣಿ
ಬಿಜೆಪಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸೇರಿ ಸದಸ್ಯರ ಬೆಂಬಲ ಪಾಲಿಕೆಯಲ್ಲಿ ಹೊಂದಿದೆ. ಹೀಗಾಗಿ ಈ ಸದಸ್ಯರ ಸಂಖ್ಯೆ ಸೇರಿದರೆ ಬಿಜೆಪಿ ಸಂಖ್ಯೆ 29 ಆಗುತ್ತದೆ. ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಸರಳವಾಗಿ ಅಧಿಕಾರಕ್ಕೆ ಬರಬಹುದಾಗಿದೆ.
ಪಾಲಿಕೆಯಲ್ಲಿ 55 ಸ್ಥಾನಗಳೊಂದಿಗೆ ಸಂಸದರು ಹಾಗೂ ಶಾಸಕರು ಸೇರಿ 63 ಸ್ಥಾನಗಳಾಗಲಿವೆ ಹೀಗಾಗಿ ಬಹುಮತಕ್ಕೆ 32 ಸದಸ್ಯರ ಬಹುಮತ ಅಗತ್ಯವಿದೆ.
ಕಿಂಗ್ ಮೇಕರ್ ಜೆಡಿಎಸ್: ಪಾಲಿಕೆ ಆಡಳಿತ ಚುಕ್ಕಾಣಿಯಲ್ಲಿ ಜೆಡಿಎಸ್ ಕಿಂಗ್ ಮೇಕರ ಸ್ಥಾನ ವಹಿಸಿದೆ. ಅವರು ಯಾರಿಗೆ ಬೆಂಬಲಿಸುತ್ತಾರೆಯೋ ಅವರು ಆಡಳಿತ ಚುಕ್ಕಾಣಿ ಹಿಡಿಯಲಿದೆ.
ಬಿಜೆಪಿ ತಂತ್ರಗಾರಿಕೆ: ಪಾಲಿಕೆಯಲ್ಲಿ ಈ ಸಲ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದಲ್ಲದೇ ಈಗ ಆಡಳಿತದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ರೂಪಿಸುತ್ತಿದ್ದು, ಬಿಜೆಪಿ ವರಿಷ್ಠರು ಹಾಗೂ ಚುನಾವಣಾ ಉಸ್ತುವಾರಿಗಳು ಖಾಸಗಿ ಹೊಟೇಲ್ ದಲ್ಲಿ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಹ ತಂತ್ರಗಾರಿಕೆಯಲ್ಲಿ ತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.