ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Team Udayavani, Dec 22, 2024, 4:04 PM IST
ಕಲಬುರಗಿ : ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿ ಹಾಗೂ ಸ್ವ ಜಿಲ್ಲೆ ಮೈಸೂರದಲ್ಲಿ ನಿಮ್ಹಾನ್ಸ್ ( ಮಾನಸಿಕ ರೋಗ) ಶಾಖೆ ತೆರೆಯಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಮನವಿಗೆ ಸ್ಪಂದಿಸಿ ಈ ನಿರ್ಧಾರವನ್ನು ಪ್ರಕಟಿಸಿದರು.
ನಿಮ್ಹಾನ್ಸ್ ಶಾಖೆ ಜತೆಗೆ ಡಯಾಬಿಟಾಲಾಜಿ ಘಟಕ ಸಹ ಸ್ಥಾಪಿಸಲಾಗುವುದು ಎಂದು ಸಿಎಂ ಪ್ರಕಟಿಸಿದರು.
ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳಿಗೆ ಸಿಎಂ ಓಕೆ ಎಂದರು.
ಪ್ರಮುಖವಾಗಿ ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದರು.
371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದರು.
ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಹಾನಿ ಕುರಿತಾದ ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅನುಭವ ಮಂಟಪ ಪೂರ್ವಕ್ಕೆ ಹಣ:
ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.