ಕಲಬುರಗಿ ಪಾಲಿಕೆಯಲ್ಲಿ ವಾಮಮಾರ್ಗದಿಂದ ಆಡಳಿತ ಹಿಡಿಯಲು ಬಿಜೆಪಿ ತಂತ್ರ: ಕಾಂಗ್ರೆಸ್
ಈಗ ದಿಢೀರನೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದರೆ ಅಧಿಕಾರಿಗಳನ್ನು ಸುಮ್ಮನೇ ಬಿಡಲ್ಲ
Team Udayavani, Nov 13, 2021, 2:39 PM IST
ಕಲಬುರಗಿ: ಪಾಲಿಕೆಯಲ್ಲಿ ಈ ಸಲ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂಬ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ವಾಗ್ದಾಳಿ ನಡೆಸಿದೆ.
ಕಲಬುರಗಿ ನಗರದಲ್ಲಿ ಸಂಬಂಧವಿರದ ಏಳು ವಿಧಾನ ಪರಿಷತ್ ಸದಸ್ಯರ ಹೆಸರನ್ನು ಕಲಬುರಗಿ ಮಹಾನಗರದ ಮತದಾರರ ಪಟ್ಟಿಯಲ್ಲಿ ಸೇರಿಸಿ ವಾಮಮಾರ್ಗದಿಂದ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಇನ್ನಿಲ್ಲದ ಹುನ್ನಾರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಟೀಕಿಸಿದರು.
ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಭಾರತೀ ಶೆಟ್ಟಿ, ಸಾಯಬಣ್ಣ ತಳವಾರ, ಲೇಹರಸಿಂಗ್, ಪ್ರತಾಪ ನಾಯಕ, ರಘುನಾಥ ಮಲ್ಕಾಪುರೆ, ಮುನಿರತ್ನ ಅವರ ಹೆಸರನ್ನು ಈಗಾಗಲೇ ಅಧಿಸೂಚನೆಗೊಂಡು ಅಂತಿಮಗೊಂಡಿರುವ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಿ ಕುತಂತ್ರದಿಂದ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರ ಬರಲು ಹವಣಿಸುತ್ತಿದೆ ಎಂದು ಡಾ.ಶರಣ ಪ್ರಕಾಶ ತಿಳಿಸಿದರು.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ
ಕಳೆದ ನ. 9ರಂದು ಈ ಎಲ್ಲ ಏಳು ವಿಧಾನ ಪರಿಷತ್ ಸದಸ್ಯರು ಕಲಬುರಗಿಯಲ್ಲೇ ಇದ್ದಿರುವುದಾಗಿ ಪಾಲಿಕೆ ಸದಸ್ಯರ ಮನೆಯಲ್ಲೇ ಬಾಡಿಗೆ ಇರಲಾಗಿದೆ ಎಂದು ಹೇಳಿ ಆನ್ಲೈನ್ ಮುಖಾಂತರ ಮತದಾರರ ಒಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆಯೊಂದಿಗೆ ಅಧಿಕಾರ ಬರಲಿದೆ ಎಂಬುದನ್ನು ಅರಿತು ಬಿಜೆಪಿ ಇಂತಹ ಮಾನಗೇಡಿ ಕಾರ್ಯಕ್ಕೆ ಮುಂದಾಗಿದೆ ಎಂದು ಟೀಕಿಸಿದರು.
ಏಳು ಜನ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಸ್ವತ: ಮುಖ್ಯಮಂತ್ರಿಗಳೇ ಕರೆ ಮಾಡಿ, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಆಯುಕ್ತರ ಮೇಲೆ ಇನ್ನಿಲ್ಲದ ಒತ್ತಡ ಹಾಗೂ ಬೆದರಿಕೆ ಸಹ ಹಾಕಿದ್ದು, ಒಂದೆಡೆ ಬಿಜೆಪಿ ಮುಖಂಡರು ಮತ್ತೊಂದೆಡೆ ಹಣ ಆಮಿಷ ಒಡ್ಡುತ್ತಿದ್ದಾರೆ ಎಂದು ಮಾಜಿ ಸಚಿವರು ಗಂಭೀರ ಆರೋಪ ಮಾಡಿದರು.
ಅಧಿಕಾರಿಗಳು ಮುಖ್ಯಮಂತ್ರಿಗಳ ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು, ಆಮಿಷಕ್ಕೆ ಒಳಗಾಗಿ ಯಾವುದೇ ವಿಚಾರಣೆ ನಡೆಸದೆ ಪೂರ್ವಾಪರ ಅವಲೋಕಿಸದೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದಲ್ಲಿ ಕಾಂಗ್ರೆಸ್ ಪಕ್ಷ ಸುಮ್ಮನೇ ಕೂಡುವುದಿಲ್ಲ. ಕಾನೂನು ಹೋರಾಟದ ಜತೆಗೆ ಮುಂದೆ ಸರಕಾರ ಬಂದ ನಂತರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದಲೇ ವಜಾಗೊಳಿಸಲಾಗುವುದಲ್ಲದೇ ಸಾಧ್ಯವಾದರೆ ಜೈಲಿಗೆ ಕಳುಹಿಸಲಾಗುವುದು. ಅಧಿಕಾರಿಗಳು ಐಎಎಸ್ ಆಗಿರಲಿ ಇನ್ನ್ಯಾರೇ ಆಗಿರಲಿ ಅವರನ್ನು ಬಿಡುವುದಿಲ್ಲ ಎಂದು ಡಾ. ಶರಣಪ್ರಕಾಶ ಪಾಟೀಲ್ ಗುಡುಗಿದರು.
ಈಗಾಗಲೇ ಏಳು ವಿಧಾನ ಪರಿಷತ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸದಿರುವಂತೆ ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿದೆಯಲ್ಲದೇ ಕಾನೂನು ಹೋರಾಟದ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಮೇಯರ್ ಶರಣು ಮೋದಿ ಸೇರಿದಂತೆ ಮುಂತಾದವರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.