ರೈಲ್ವೇ ನಿಲ್ದಾಣ ಸೌಂದರ್ಯೀಕರಣಕ್ಕೆ
100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ ಸ್ಥಾಪನೆಪ್ರಯಾಣಿಕರಿಗೆ ಹವಾ ನಿಯಂತ್ರಿತ ಕೊಠಡಿ
Team Udayavani, Jan 29, 2020, 10:41 AM IST
ಕಲಬುರಗಿ: ನಗರದ ರೈಲ್ವೆ ನಿಲ್ದಾಣದ ಸೌಂದರ್ಯೀಕರಣ ಹಾಗೂ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ, ವರ್ಟಿಕಲ್ ಗಾರ್ಡನ್ (ಲಂಬ ಉದ್ಯಾನ್) ಮತ್ತು ಹವಾನಿಯಂತ್ರಿತ ಕೋಣೆಗೆ ಸಂಸದ ಡಾ| ಉಮೇಶ ಜಾಧವ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಲಬುರಗಿ ರೈಲ್ವೆ ನಿಲ್ದಾಣ ಮುಂದುಗಡೆ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ, ಸಾಮಾನ್ಯ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಿತ ಕೊಠಡಿ ಉದ್ಘಾಟನೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು. ಕಲಬುರಗಿ ಮಾತ್ರವಲ್ಲದೆ ಲಾತೂರ್, ಅಹಮದಾಬಾದ್ ನಗರಗಳ ರೈಲ್ವೆ ನಿಲ್ದಾಣಗಳಲ್ಲಿಯೂ ಈಗಾಗಲೇ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ ಉದ್ಘಾಟನೆಯಾಗಿದೆ. ಮುಂಬರುವ ದಿನಗಳಲ್ಲಿ ದೇಶದ ಎಲ್ಲ ರೈಲು ನಿಲ್ದಾಣಗಳ ಎದುರು 100 ಅಡಿ ಉದ್ದದ ಧ್ವಜಸ್ತಂಭ ಉದ್ಘಾಟಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದರು.
ಇದೇ ವೇಳೆ ವಿಮಾನ ನಿಲ್ದಾಣ ಜಾಗದಲ್ಲಿದ್ದ ಸಂತ ಸೇವಾಲಾಲ ಮಂದಿರ ಧ್ವಂಸದ ಕುರಿತು
ಸಂಪೂರ್ಣ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕೆಂದು ಒತ್ತಾಯಿಸಿದರು.ಸಂತ ಸೇವಾಲಾಲ ಮಂದಿರ ಧ್ವಂಸದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಈ ವಿಷಯದಲ್ಲಿ ರಾಜಕೀಯ ಮಾಡದೇ ತನಿಖೆ ನಡೆಸಬೇಕು. ಸಮಾಜ ಬಾಂಧವರನ್ನು ಸಮಾಧಾನಗೊಳಿಸಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡಿದ್ದೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಜಿ.ಪಂ. ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ, ಐಜಿಪಿ ಮನೀಷ ಖರ್ಬೇಕರ್, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಶೈಲೇಶ ಗುಪ್ತಾ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.