Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Team Udayavani, May 16, 2024, 6:26 PM IST
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಸಿದರು.
ಜೂನ್ 3 ರಂದು ನಡೆಯುವ ಕ್ಷೇತ್ರದ ಚುನಾವಣೆಗೆ ಸಜ್ಜನ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನ್ನು ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದಲ್ಲದೇ ನಾಮಪತ್ರ ಸಲ್ಲಿಕೆ ಕೊನೆ ದಿನವಾದ ಗುರುವಾರ ನಾಮಪತ್ರ ಸಲ್ಲಿಸಿದ್ದರಿಂದ ಸಜ್ಜನ್ ಕೊನೆಗೂ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ನಿರ್ಧಾರದಿಂದ ಹಿಂದೆ ಸರಿಯುವಂತೆ ಗುರುವಾರ ಬೆಳಿಗ್ಗೆ ಸಜ್ಜನ್ ಅವರ ಮನೆಗೆ ಬಿಜೆಪಿ ಮುಖಂಡರು ಹೋಗಿ ಮನವೊಲಿಸಲು ಮುಂದಾದರೂ ಮಾತು ಕತೆ ಫಲಪ್ರಧವಾಗಲಿಲ್ಲ. ಹೀಗಾಗಿ ಸುರೇಶ ಸಜ್ಜನ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಎನ್. ರವಿಕುಮಾರ್, ವಿಧಾನಸಭೆ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಹಾಗೂ ಇತರ ನಾಯಕರು ಸಜ್ಜನ್ ಅವರ ಮನವೋಲಿಸಲು ಮುಂದಾದರು. ಆದರೆ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದು, ಹೀಗಾಗಿ ಹಿಂದೆ ಸರಿಯುವುದಿಲ್ಲ ಎಂದು ಸುರೇಶ ಸಜ್ಜನ್ ಸಂಧಾನಕ್ಕೆ ಬಂದ ಬಿಜೆಪಿ ಮುಖಂಡರಿಗೆ ತಿಳಿ ಹೇಳಿ ತದನಂತರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.