ಕಲಬುರಗಿ: ಕೆಕೆಆರ್ ಡಿಬಿ ಅಧ್ಯಕ್ಷರಾದವರಿಗೆ ಸೋಲಿನ ಕಳಂಕ ಮುಂದುವರಿಕೆ
Team Udayavani, May 13, 2023, 1:38 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಅಧ್ಯಕ್ಷರಾದವರು ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ಕಳಂಕ ಮತ್ತೆ ಸಾಬೀತಾಗಿದೆ.
ಪ್ರಸಕ್ತ 2018-23 ರ ಅವಧಿಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಹುಮನಾಬಾದ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಪಾಟೀಲ್ ಹುಮನಾಬಾದ್ ಸೋಲುವ ಮೂಲಕ ಸೋಲಿನ ನಂಟು ನಿರೂಪಿಸಿದೆ.
2018 ರಲ್ಲಿ ಜೆಡಿಎಸ್- ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎಚ್. ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜತೆಗೆ ಕೆಕೆಆರ್ ಡಿಬಿ ಅಧ್ಯಕ್ಷರಾಗಿದ್ದರು. ಒಂದು ಸಭೆ ನಡೆಸಿದ ನಂತರ ಜೆಡಿಎಸ್- ಕಾಂಗ್ರೆಸ್ ಸರ್ಕಾರ ಪತನಗೊಂಡಿತು. ಈಗ ಹುಮನಾಬಾದ್ ಕ್ಷೇತ್ರದಲ್ಲಿ ರಾಜಶೇಖರ ಪಾಟೀಲ್ ಹುಮನಾಬಾದ್ ಸೋಲು ಅನುಭವಿಸಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಿದ್ದು ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ:ಕಾರ್ಕಳ: ಮುನಿಯಾಲು- ಮುತಾಲಿಕ್ ಹೋರಾಟದ ನಡುವೆ ಮತ್ತೆ ಕಮಲ ಅರಳಿಸಿದ ಸುನಿಲ್ ಕುಮಾರ್
ಜೆಡಿಎಸ್- ಕಾಂಗ್ರೆಸ್ ಸರ್ಕಾರ ಪತನ ನಂತರ ಬಿಜೆಪಿ ಸರ್ಕಾರ ರಚನೆಯಾದ ಮೇಲೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ದತ್ತಾತ್ರೇಯ ಪಾಟೀಲ್ ರೇವೂರ ಅವರನ್ನು ಕೆಕೆಆರ್ ಡಿಬಿ ಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ಇಂದಿನ ದಿನದವರೆಗೂ ಇವರೇ ಅಧ್ಯಕ್ಷರಾಗಿದ್ದರು. ಆದರೆ ಈಗ ಸೋತಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಲ್ಲಮಪ್ರಭು ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಅದಲ್ಲದೇ ಈ ಮುಂಚಿನ ಅಂದರೆ 2008-13ರ ಅವಧಿಯಲ್ಲಿ ಪ್ರಥಮ ಅವಧಿಗೆ ಆಗ ಪೌರಾಡಳಿತ ಸಚಿವರಾಗಿದ್ದ ಖಮರುಲ್ ಇಸ್ಲಾಂ ಕೆಕೆಆರ್ ಡಿಬಿ ಅಧ್ಯಕ್ಷರಾಗಿ, ತದನಂತರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹಾಗೂ ಕೊನೆ ಅವಧಿಯಲ್ಲಿ ಉನ್ನತ ಶಿಕ್ಷಣ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಖಮರುಲ್ 2018ರ ಚುನಾವಣೆ ಹೊತ್ತಿಗೆ ಕೊನೆಯುಸಿರೆಳೆದರೆ ಡಾ. ಶರಣಪ್ರಕಾಶ ಪಾಟೀಲ್ 2018ರ ಚುನಾವಣೆಯಲ್ಲಿ ಸೇಡಂ ಕ್ಷೇತ್ರದಲ್ಲಿ ಹಾಗೂ ಬಸವರಾಜ ರಾಯರೆಡ್ಡಿ ಯಲಬುರ್ಗಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಈಗ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಗೆಲುವು ಸಾಧಿಸಿದ್ದಾರೆ.
ಕೆಕೆಆರ್ ಡಿಬಿ ಅಧ್ಯಕ್ಷರಾದವರಿಗೆ ನಂಟು ಎಂಬುದಾಗಿ ಉದಯವಾಣಿಯಲ್ಲಿ ಕಳೆದ ಮೇ 1ರಂದು ವಿಶೇಷ ವರದಿ ಪ್ರಕಟಿಸಲಾಗಿತ್ತು.ಈ ವಿಶೇಷ ವರದಿ ಭಾರಿ ಸದ್ದು ಮಾಡಿತ್ತು. ಹೀಗಾಗಿ ಕಳಂಕ ಮುಂದುವರೆಯುತ್ತದೆಯೋ ಇಲ್ಲವೇ ಮುರಿಯುತ್ತದೆ ಎಂಬುದರ ಕುರಿತು ತೀವ್ರ ಕುತೂಹಲ ಮೂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.