Kalaburagi; ಅಪರಿಚಿತ ಬೈಕ್ ಢಿಕ್ಕಿ:MLC ಅರವಿಂದ ಅರಳಿ ತಾಯಿ ವಿಧಿವಶ
Team Udayavani, Dec 13, 2023, 10:28 PM IST
ಕಲಬುರಗಿ: ನಗರದ ಸೇಡಂ ರಿಂಗ್ ರಸ್ತೆಯ ಟೊಯೊಟಾ ಶೋರೂಂ ಬಳಿ ಬುಧವಾರ ಸಂಜೆ ಬೈಕ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸುಮಿತ್ರಾಬಾಯಿ ಶಾಮರಾವ ಅರಳಿ(75) ಮೃತಪಟ್ಟಿದ್ದಾರೆ. ಇವರು ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ ಅರಳಿ ಅವರ ತಾಯಿ.
ಬಡೇಪುರ ಕಾಲೊನಿಯಲ್ಲಿರುವ ಪುತ್ರಿ ಶೀಲಾದೇವಿ ಲಿಂಗರಾಜ ಅರಸ ಅವರ ಮನೆಯಲ್ಲಿ ವಾವಾಗಿದ್ದರು. ಸಂಜೆ ಕೆಲಸದ ನಿಮಿತ್ತ ರಸ್ತೆ ದಾಟುವಾಗ ಅಪರಿಚಿತ ಬೈಕ್ ಢಿಕ್ಕಿ ಹೊಡೆದಿದ್ದು, ಸುಮಿತ್ರಾಬಾಯಿ ಅವರ ತಲೆಗೆ ತೀವ್ರ ಪೆಟ್ಟಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್, ಇನ್‌ಸ್ಪೆಕ್ಟರ್ ಖಾಜಾ ಹುಸೇನಿ ಮತ್ತು ಸಿಬಂದಿ ಭೇಟಿ ನೀಡಿದಿದ್ಸಾರೆ. ಸಂಚಾರ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ. ಪುತ್ರರಾದ ಎಂಎಲ್ ಸಿ ಅರಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಡಾ.ಗೌತಮ ಅರಳಿ, ಸೂರ್ಯಕಾಂತ ಅರಳಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗುರುವಾರ ಮಧ್ಯಾಹ್ನ 3 ಕ್ಕೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್(ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಎಂಎಲ್‌ಸಿ ಅರಳಿ ಸುದ್ದಿ ತಿಳಿಯುತ್ತಲೇ ಕಲಬುರಗಿಗೆ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.