ಕಳಪೆ ಊಟ: ಕೋವಿಡ್ ಸೋಂಕಿತರ ಆರೋಪ
Team Udayavani, Jul 4, 2020, 4:31 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಕೋವಿಡ್-19 ಕೇರ್ ಸೆಂಟರ್‌ನಲ್ಲಿ ಕಳಪೆ ಊಟ ನೀಡಲಾಗುತ್ತಿದ್ದು, ಮನುಷ್ಯರನ್ನು ಪ್ರಾಣಿಗಳಿಗಿಂತ ಕೀಳಾಗಿ ನೋಡಲಾಗುತ್ತಿದೆ ಎಂದು ಕೋವಿಡ್ ಸೋಂಕಿತರು ಆರೋಪಿಸಿದ್ದಾರೆ.
ನಗರ ಹೊರವಲಯದಲ್ಲಿರುವ ಕೆಸರಟಗಿ ಗ್ರಾಮದ ಕೇರ್ ಸೆಂಟರ್‌ನಲ್ಲಿ 38ಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಇದ್ದೇವೆ. ಮಹಿಳೆಯರು, ಮಕ್ಕಳು, ವೃದ್ಧರು ಇದ್ದಾರೆ. ಯಾರಿಗೂ ಸರಿಯಾದ ಊಟ ಕೊಡುತ್ತಿಲ್ಲ. ಬೆಳಗ್ಗೆ ಮಾಡಿಟ್ಟ ಊಟವನ್ನೇ ಮಧ್ಯಾಹ್ನ ಹಾಗೂ ರಾತ್ರಿ ಕೊಡಲಾಗುತ್ತಿದೆ. ಅನ್ನ ಅರ್ಧ ಕುದ್ದಿರುತ್ತೆ, ಇನ್ನರ್ಧ ಕುದ್ದಿರುವುದಿಲ್ಲ. ಸಾರು ಕಪಳೆಯಾಗಿರುತ್ತದೆ ಎಂದು ಸೋಂಕಿತರು ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ.
ಗುರುವಾರ ರಾತ್ರಿ ನೀಡಿದ ಅನ್ನದಲ್ಲಿ ದಪ್ಪ ಕಲ್ಲುಗಳು ಪತ್ತೆಯಾಗಿವೆ. ಈ ಹಿಂದೆಯೂ ಊಟದಲ್ಲಿ ಹುಳು, ಸಣ್ಣ ಕಲ್ಲುಗಳು ಪತ್ತೆಯಾಗಿದ್ದವು. ಈ ಬಗ್ಗೆ ಅಂದೇ ಮೊಬೈಲ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಉಪಹಾರ ಕೊಟ್ಟ ಮೇಲೆ ಮಧ್ಯಾಹ್ನದ ಊಟ 3:30 ಆದರೂ ಕೊಡುವುದಿಲ್ಲ. ನಮಗೆ ಪಾಸಿಟಿವ್ ಇದ್ದರೂ ಊಟ ಕಳಪೆ ನೀಡುತ್ತಿರುವುದರಿಂದ ಆರೋಗ್ಯ ಮತ್ತಷ್ಟು ಹದಗೆಡುತ್ತಿದೆ. ಆದ್ದರಿಂದ ಉತ್ತಮ ಆಹಾರ ಸರಬರಾಜು ಮಾಡಿ ಎಂದು ಡಿಎಚ್‌ಒ ಅವರಿಗೆ ಸೋಂಕಿತರು ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.