34 ಎಕ್ರೆ ಭೂಮಿಯಲ್ಲಿ ನುಡಿ ಹಬ್ಬಕ್ಕೆ ಸಿದ್ಧತೆ
ದಾಖಲೆಯತ್ತ ಪ್ರತಿನಿಧಿಗಳ ನೋಂದಣಿನಾಳೆ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Jan 26, 2020, 10:40 AM IST
ಕಲಬುರಗಿ: ಸುದೀರ್ಘ 32 ವರ್ಷಗಳ ನಂತರ ನಡೆಯುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ನಡೆದಿದ್ದು, ಗುಲ್ವರ್ಗ ವಿವಿಯ ಆವರಣ ವಿಶಾಲದ 34 ಎಕರೆ ಭೂಮಿಯಲ್ಲಿ ಭವ್ಯವಾದ ವೇದಿಕೆ, ಮಳಿಗೆ ಸೇರಿದಂತೆ ಇತರ ಎಲ್ಲ ಕಾರ್ಯಗಳು ಭರದಿಂದ ಸಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಸಮ್ಮೇಳನದ
ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ತಿಳಿಸಿದರು.
ಸಾಂಸ್ಕೃತಿಕ ಸಿರಿವಂತ ಹಾಗೂ ಸಾಮರಸ್ಯದ ನೆಲವಾಗಿರುವ ಕಲಬುರಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ದಾಖಲೆಯ ಪ್ರಮಾಣದಲ್ಲಿ 21,030 ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಶನಿವಾರ ಇಲ್ಲಿನ ಸಾಹಿತ್ಯ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ನಡೆದ ರಾಯಚೂರಿನಲ್ಲಿ 12,500, ಮೈಸೂರಿನಲ್ಲಿ 13,000 ಹಾಗೂ ಧಾರವಾಡದಲ್ಲಿ 13,500 ಜನ ನೋಂದಣಿ ಮಾಡಿಕೊಂಡಿದ್ದರು. ಆದರೆ ಕಲಬುರಗಿಯಲ್ಲಿ ದಾಖಲೆಯಾಗಿ 21,000 ಜನ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 15,178 ಪುರುಷರು ಮತ್ತು 5,852 ಮಹಿಳೆಯರು ಸೇರಿದ್ದಾರೆ. ಇದರಲ್ಲಿ ಕಲಬುರಗಿ ಜಿಲ್ಲೆಯಿಂದ 3,500ಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಸಮ್ಮೇಳನಕ್ಕಾಗಿ 379 ಪುಸ್ತಕ ಮತ್ತು 177 ವಾಣಿಜ್ಯ ಮಳಿಗೆಗಳು ಸೇರಿದಂತೆ ಇದೂವರೆಗೆ
566 ಮಳಿಗೆಗಳ ನೋಂದಣಿಯಾಗಿದ್ದು, ಎಲ್ಲವೂ ಗುಣಮಟ್ಟದಿಂದ ಕೂಡಿರಲಿವೆ. ಇನ್ನೂ ಮಳಿಗೆಗಳ ಸ್ಥಾಪನೆಗೆ ಹೆಸರು ನೋಂದಾಯಿಸಬಹುದು. ಅಕ್ಷರ ಜಾತ್ರೆ ಐತಿಹಾಸಿಕ ಯಶಸ್ವಿಯಾಗಲಿದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಸಿಂಪಿ ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ದೌಲತರಾವ ಪಾಟೀಲ, ವಿಜಯಕುಮಾರ್ ಪೊರತೆ, ಮಡಿವಾಳಪ್ಪ
ನಾಗರಹಳ್ಳಿ, ಅಂಬಾಜಿ ಕವಲಗಾ, ಲಿಂಗರಾಜ, ಆನಂದ ನಂದೂರಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.