ಕಲಬುರಗಿ: ಬೆಳ್ಳಂಬೆಳಗ್ಗೆ ಎಣ್ಣೆ ಪಾರ್ಟಿ, ನಂತರ ರೌಡಿ ಶೀಟರ್ ನ ಬರ್ಬರ ಕೊಲೆ
Team Udayavani, Jun 12, 2021, 2:21 PM IST
ಕಲಬುರಗಿ: ಬೆಳ್ಳಂಬೆಳಗ್ಗೆಯೇ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದವರೇ ರೌಡಿ ಶೀಟರ್ ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ನಗರದಲ್ಲಿ ನಡೆದಿದೆ.
ಶ್ರೀಕಾಂತ್ ( 28) ಎಂಬುವವನೇ ಕೊಲೆಯಾದ ರೌಡಿ ಶೀಟರ್. ಇಲ್ಲಿನ ನಗರದ ರಾಮ ನಗರದ ನಿವಾಸಿಯಾಗಿದ್ದು, ಬಡಾವಣೆಯ ಹಿಂದಿನ ಖಾಲಿ ಜಾಗದಲ್ಲೇ ಹತ್ಯೆ ಮಾಡಲಾಗಿದೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಇದಕ್ಕೂ ಮುನ್ನ ಶ್ರೀಕಾಂತ್ ಮತ್ತು ಕೊಲೆಗಾರರು ಒಟ್ಟಿಗೆ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದರು. ಶ್ರೀಕಾಂತನಿಗೆ ಮದ್ಯ ಕುಡಿಸಿ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸಂಜು ಗುತ್ತೇದಾರ, ಅಂಬರೀಶ್ ಗುತ್ತೇದಾರ ಎಂಬುವವರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.
ಇನ್ನು, ರೌಡಿ ಶೀಟರ್ ಶ್ರೀಕಾಂತ್ ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಆರು ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿದ್ದ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.