ಬಂದೂಕು ಪರವಾನಗಿ ನೀಡದಿರುವಂತೆ ಸೂಚನೆ
Team Udayavani, Feb 29, 2020, 3:23 PM IST
ಕಲಬುರಗಿ: ಮಹಾನಗರದಲ್ಲಿ ಈಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದೂಕಿನ ಪರವಾನಗಿ ನೀಡಿರುವುದು ಸರಿಯಾದುದ್ದಲ್ಲ. ಇನ್ಮುಂದೆ ಯಾವುದೇ ಕಾರಣಕ್ಕೂ ಬಂದೂಕಿನ ಪರವಾನಗಿ ನೀಡದಿರುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಿದರು.
ಇಲ್ಲಿನ ಈಶಾನ್ಯ ವಲಯ ಐಜಿಪಿ ಕಚೇರಿಯಲ್ಲಿ ವಲಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತರು ಸರಿಯಾಗಿ ಅವಲೋಕಿಸಿದರೆ ಬಂದೂಕಿನ ಪರವಾನಗಿ ನೀಡಿದ್ದಾರೆಂಬ ಹಿನ್ನೆಲೆಯಲ್ಲಿ ಸೂಚನೆ ನೀಡಿರುವುದಾಗಿ ತಿಳಿಸಿದರು.
ಇನ್ಮುಂದೆ ಯಾರಿಗೂ ಬಂದೂಕಿನ ಪರವಾನಗಿ ನೀಡದಿರುವಂತೆ ತಾಕೀತು ಮಾಡಿದ್ದಲ್ಲದೇ ರೌಡಿಶೀಟರ್‌ದಿಂದ ಹೆಸರು ಸಹ ತೆಗೆದು ಹಾಕದಿರುವಂತೆ ಸೂಚಿಸುವುದರ ಜತೆಗೆ ನಾಗರಿಕರಿಗೆ ಬಂದೂಕಿನ ತರಬೇತಿ ನೀಡುವುದನ್ನು ಸಹ ಪರಿಶೀಲಿಸುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.
ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಸೂಚನೆ: ಕಲಬುರಗಿ ಮಹಾನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಅದರಲ್ಲೂ ಜೂಜಾಟ್, ಗ್ಯಾಂಬ್ಲಿಂಗ್, ಮಟಕಾ ಹಾಗೂ ಜಿಲ್ಲೆ ಮತ್ತು ಗಡಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಮತ್ತು ಜೂಜಾಟ್‌ಕ್ಕೆ ಕಡಿವಾಣ ಹಾಕುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಆಯುಕ್ತಾಲಯಕ್ಕೆ 6 ಕೋಟಿ ರೂ ಬಿಡುಗಡೆ: ಕಲಬುರಗಿ ಮಹಾನಗರದಲ್ಲಿ ಪೊಲೀಸ್ ಆಯುಕ್ತರ ಕಚೇರಿ ಕಟ್ಟಡವನ್ನು ಹಳೆ ಎಸ್ಪಿ ಕಚೇರಿ ಕಟ್ಟಡ ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಲಾಗುವುದು. ಕಟ್ಟಡವನ್ನು 18.50 ಕೋಟಿ ರೂ. ಎಂಬುದಾಗಿ ಅಂದಾಜಿಸಿ ಈಗ 6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಹಂತ-ಹಂತವಾಗಿ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಫರಹತಾಬಾದ್ ಪೊಲೀಸ್ ಠಾಣೆಗೆ ಹೊಸ ಕಟ್ಟಡಕ್ಕಾಗಿ 1.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪೊಲೀಸ್ ಈಶಾನ್ಯ ವಲಯದಲ್ಲಿ ಖಾಲಿ ಇರುವ 300 ಪೊಲೀಸ್ ಪೇದೆ, ಅದೇ ರೀತಿ ಕಲಬುರಗಿ ಪೊಲೀಸ್ ಆಯುಕ್ತಾಲಯದ 250 ಹಾಗೂ 250 ನಗರ ಶಸಸ್ತ್ರ ಪಡೆ ನೇಮಕಾತಿಗೆ ಮುಂದಾಗಲಾಗುವುದು ಎಂದು ವಿವರಣೆ ನೀಡಿದರು.
ವಾಹನಗಳ ಖರೀದಿಗೆ 3ಕೋಟಿ ರೂ.ಗಳನ್ನು ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತಾಲಯಕ್ಕೆ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ದ್ವಿಚಕ್ರವಾಹನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ಪೊಲೀಸ್ ಇಲಾಖೆ ಸುಧಾರಣೆಗೆ ಮುಂದಾಗಲಾಗಿದೆ. ಮುಂಬೈನ ಮಾಜಿ ಶಾಸಕ ಎಐಎಂಐಎಂನ ವಕ್ತಾರ ವಾರೀಶ ಪಠಾಣ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ವಿಳಂಬ ನೀತಿ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.