![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 24, 2020, 10:52 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ. 5, 6 ಮತ್ತು 7ರಂದು ನಡೆಯುತ್ತಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ನಗರವನ್ನು
ಸಿಂಗರಿಸಲಾಗುತ್ತಿದೆ ಮತ್ತು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ
ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯಿಂದ ಹಮ್ಮಿಕೊಂಡಿದ್ದ ನಗರ
ಸೌಂದಯೀìಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ಹಾಗೂ ಅನ್ನಪೂರ್ಣ ಕ್ರಾಸ್‌ನಿಂದ ಗುಲಬರ್ಗಾ ವಿಶ್ವವಿದ್ಯಾಲಯ, ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸರ್ಕಾರಿ ಕಟ್ಟಡಗಳ ಆವರಣ ಗೋಡೆಗಳ ಮೇಲೆ ಸಮ್ಮೇಳನದ ಲಾಂಛನ ಹಾಗೂ ವಿವಿಧ
ಆಕರ್ಷಕ ಚಿತ್ರಗಳನ್ನು ಬಿಡಿಸಲಾಗುತ್ತದೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಮುನಾಫ್ ಪಟೇಲ್ ಮಾತನಾಡಿ, ನಗರ ಸೌಂದರ್ಯೀಕರಣಕ್ಕೆ ಖಾಸಗಿ ಸಂಸ್ಥೆಯವರಾದ ಶಿರಶಿಮೆ ಅವರು ಗೋಡೆ ಬರಹ ಬರೆಯುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಅಲಂಕಾರ ಸಮಿತಿಯ ಸದಸ್ಯರು, ಮಹಾನಗರ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.