164 ಪೊಲೀಸರ ಗಂಟಲು ಮಾದರಿ ಸಂಗ್ರಹ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 190ಕ್ಕೇರಿಕೆ ಇಲ್ಲಿಯವರೆಗೆ 75 ಜನರು ಗುಣಮುಖ
Team Udayavani, May 29, 2020, 10:51 AM IST
ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಗುರುವಾರದಿಂದ ಕೋವಿಡ್ ಪತ್ತೆ ಪರೀಕ್ಷೆ ಆರಂಭಿಸಲಾಗಿದ್ದು, 164 ಪೊಲೀಸರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಲಾಯಿತು.
ಮಹಾರಾಷ್ಟ್ರ, ತೆಲಂಗಾಣದ ಗಡಿಗಳಿಗೆ ಹೊಂದಿಕೊಂಡಿರುವ ಆಳಂದ ತಾಲೂಕಿನ ಖಜೂರಿ, ಹಿರೊಳ್ಳಿ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್, ಅಫಜಲಪುರ ತಾಲೂಕಿನ ಬಳೂರಗಿ, ಸೇಡಂ ತಾಲೂಕಿನ ರಿಬ್ಬನ್ ಪಲ್ಲಿ ಹಾಗೂ ಚಿಂಚೋಳಿ ತಾಲೂಕಿನ ಮಿರಿಯಾಣ ಬಳಿ ಆರು ಅಂತಾರಾಜ್ಯ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಹೊರ ಭಾಗಗಳಿಂದ ಜಿಲ್ಲೆಗೆ ಬರುವವರ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು, ಆರೋಗ್ಯ ತಪಾಸಣೆಗೆ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಗಡಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ವಾರಿಯರ್ಸ್ ಆಗಿ ಶ್ರಮಿಸುತ್ತಿ ದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ವಾರಿಯರ್ಸ್‌ಗೆ ಕೋವಿಡ್ ಪತ್ತೆ ಪರೀಕ್ಷೆ ಕೈಗೆತ್ತಿಕೊಳ್ಳಲಾಗಿದೆ.
ಚೆಕ್‌ಪೋಸ್ಟ್‌ಗಳಲ್ಲಿ ಕಮಲಾ ಪುರ, ಮುಧೋಳ, ಮಿರಿಯಾಣ, ಮಾದನಹಿಪ್ಪರಗಾ, ಆಳಂದ ಹಾಗೂ ಅಫಜಲಪುರ ಠಾಣೆಗಳ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಗುರುವಾರ ಮಿರಿಯಾಣ ಹೊರತುಪಡಿಸಿ ಐದು ಪೊಲೀಸ್ ಠಾಣೆಗಳ ಸಿಬ್ಬಂದಿಯ ಮಾದರಿ ಸಂಗ್ರಹಿಸಿ ಪ್ರಾಯೋಗಾಲಯಕ್ಕೆ ರವಾನಿಸಲಾಯಿತು. ಪೊಲೀಸ್ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲು ಉನ್ನತ ಅಧಿಕಾರಿಗಳ ನಿರ್ದೇಶನ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.