ಆರೋಗ್ಯ ಸಿಬ್ಬಂದಿ ಸೇವೆ ದೇಶಕ್ಕೆ ಹೆಮ್ಮೆ

ಕೋವಿಡ್‌ ಸೊಂಕಿನಿಂದ ರೋಗಿ ಗುಣಮುಖವಾಗಿ ಹೊರಹೋಗುವ ಕ್ಷಣವೇ ಶುಶ್ರೂಷಕರಿಗೆ ಸಂತಸ

Team Udayavani, May 13, 2020, 10:38 AM IST

12-May-01

ಕಲಬುರಗಿ: ಇಎಸ್‌ಐಸಿ ಆಸ್ಪತ್ರೆಯಲ್ಲಿ ಫ್ಲಾರೆನ್ಸ್‌ ನೈಟಿಂಗೇಲ್‌ ಜನ್ಮದಿನದ ಅಂಗವಾಗಿ ನಡೆದ ವಿಶ್ವ ಶುಶ್ರೂಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ. ಶರತ್‌ ಹಾಗೂ ಇತರರು ಭಾಗವಹಿಸಿದ್ದರು.

ಕಲಬುರಗಿ: ಮಹಾಮಾರಿ ಕೋವಿಡ್ ವಿರುದ್ಧ ಹೋರಾಟದಲ್ಲಿರುವ ಶುಶ್ರೂಷಾಧಿಕಾರಿಗಳು ಸೇರಿದಂತೆ ವೈದ್ಯ ಮತ್ತು ಆರೋಗ್ಯ ಸಿಬ್ಬಂದಿ ನಿಸ್ವಾರ್ಥ ಸೇವೆ ಕಂಡು ದೇಶ ಹೆಮ್ಮೆಪಡುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಶ್ಲಾಘಿ ಸಿದರು.

ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ಮಹಾಮಾತೆ ಫ್ಲಾರೆನ್ಸ್‌ ನೈಟಿಂಗೇಲ್‌ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಶುಶ್ರೂಷಕರ ದಿನಾಚರಣೆಯಲ್ಲಿ ಮಹಾಮಾತೆ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.

ಆರೋಗ್ಯ ಸಿಬ್ಬಂದಿಯಿಂದಲೇ ಮಹಾಮಾರಿ ಕೋವಿಡ್‌-19 ವಿರುದ್ಧದ ನಮ್ಮ ಹೋರಾಟ ನಿರಂತರ ಸಾಗಿದೆ. ಶುಶ್ರೂಷಾಧಿಕಾರಿಗಳು ನಮ್ಮನ್ನು ಬದುಕಿಸುವವರಾಗಿದ್ದಾರೆ ಎಂಬುದನ್ನು ಯಾರು ಮರೆಯುವಂತಿಲ್ಲ. ಇಂದಿನ ಪರಿಸ್ಥಿತಿ ಅವಲೋಕಿಸಿ ಹೇಳುವುದಾದರೆ ಕೋವಿಡ್‌ ಸೊಂಕಿನಿಂದ ಗುಣಮುಖರಾಗಿ ರೋಗಿ ಆಸ್ಪತ್ರೆಯಿಂದ ಹೊರಗಡೆ ಹೆಜ್ಜೆ ಇಡುವ ಕ್ಷಣವಿದೆಯಲ್ಲ ಅದುವೇ ಶುಶ್ರೂಷಕರಿಗೆ ಹೆಚ್ಚಿನ ಸಂತಸದ ಕ್ಷಣವಾಗಿದೆ ಎಂದು ನರ್ಸಿಂಗ್‌ ಸಿಬ್ಬಂದಿ ಸೇವೆ ಕೊಂಡಾಡಿದರು.

ಇಎಸ್‌ಐಸಿ ಮೆಡಿಕಲ್‌ ಕಾಲೇಜಿನ ಡೀನ್‌ ಡಾ| ಎ.ಎಲ್‌. ನಾಗರಾಜು ಮಾತನಾಡಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವ ಕಳೆದಕೊಂಡ ವೈದ್ಯ ಸಿಬ್ಬಂದಿ ಸೇವೆ ನೆನೆದರು. ಸಾಂಕ್ರಾಮಿಕ ಸೊಂಕಿನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ನಿರ್ದೆಶನ ಪಾಲಿಸುತ್ತ ಇಎಸ್‌ಐಸಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ ಎಂದು ಹೇಳಿದರು.

ವೈದ್ಯರಿಗೆ ಹೂವಿನ ಸುರಿಮಳೆ: ಇದೇ ಸಂದರ್ಭದಲ್ಲಿ ಕೋವಿಡ್‌-19 ವಿರುದ್ಧ ಹೋರಾಟದಲ್ಲಿರುವ ಇಎಸ್‌ಐಸಿ ಮೆಡಿಕಲ್‌ ಕಾಲೇಜಿನ ಡೀನ್‌ ಡಾ| ಎ.ಎಲ್‌. ನಾಗರಾಜು, ವೈದ್ಯಕೀಯ ಅಧೀಕ್ಷಕ ಡಾ| ಎಸ್‌.ಕೆ. ಚೌಧರಿ, ಕೋವಿಡ್‌-19 ವಾರ್ಡ್‌ನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿರುವ ಡಾ| ಲೋಬೊ, ಸಮುದಾಯ ಮೆಡಿಸಿನ್‌ ವಿಭಾಗದ ಡಾ| ಸ್ವಾತಿ, ಡಿವೈನ್‌ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ಕಿರಣ, ಡಾ| ಎಲಿಜಾಬೆತ್‌ ಸೇರಿದಂತೆ ಇಎಸ್‌ಐಸಿ ಆಸ್ಪತ್ರೆ ವಿವಿಧ ವಿಭಾಗದ ವೈದ್ಯರನ್ನು ಡಿಸಿ ಶರತ್‌ ಬಿ. ಸನ್ಮಾನಿಸಿದರು. ಮೇಲಿಂದ ವಿದ್ಯಾರ್ಥಿಗಳು ವೈದ್ಯರಿಗೆ ಹೂವಿನ ಸುರಿಮಳೆಗೈದರು.

ಕೈಯಲ್ಲಿ ದೀಪ ಹಿಡಿದು ಮಾತೆಗೆ ಗೌರವ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನರ್ಸಿಂಗ್‌ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಗಳು ಕೈಯಲ್ಲಿ ದೀಪ ಹಿಡಿದುಕೊಂಡು ಮಾತೆಗೆ ಗೌರವ ಸಲ್ಲಿಸಿದರು. ಗಮನ ಸೆಳೆದ ರಂಗೋಲಿ: ವಿಶ್ವ ಶುಶ್ರೂಷಕರ ದಿನದ ಅಂಗವಾಗಿ ಕಾರ್ಯಕ್ರಮ ಸ್ಥಳದಲ್ಲಿ ವಿವಿಧ ಬಣ್ಣಗಳಿಂದ ಬಿಡಿಸಲಾದ ಬೃಹತ್‌ ಆಕಾರದ ರಂಗೋಲಿ ಸಭಿಕರ ಗಮನ ಸೆಳೆಯಲ್ಲಿ ಯಶಸ್ವಿಯಾಯಿತು.

ಜಿಪಂ ಸಿಇಒ ಡಾ| ಪಿ. ರಾಜಾ, ಪ್ರೊಬೇಷನರ್‌ ಐಎಎಸ್‌ ಅಧಿಕಾರಿ ಡಾ| ಗೋಪಾಲಕೃಷ್ಣ ಬಿ., ಇಎಸ್‌ಐಸಿಯ ಡಾ| ಥಾಮಸನ್‌, ಡಾ| ಸುಧಾಕರ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ನರ್ಸಿಂಗ್‌ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.