ಕಾಳಗಿ ಕಲಬುರಗಿ ಉಪವಿಭಾಗದಲಿ ಸೇರಿಸಿ


Team Udayavani, Oct 5, 2017, 10:58 AM IST

gul-1.jpg

ಕಾಳಗಿ: ನಾಲ್ಕು ದಶಕಗಳ ಹೊರಾಟದ ಫಲವಾಗಿ ಕಾಳಗಿ ನೂತನ ತಾಲೂಕು ಕೇಂದ್ರವಾಗಿದೆ. ಆದರೆ ಈ ಭಾಗದ ಜನರ ಸಮಸ್ಯೆಗಳು ಶಾಶ್ವತವಾಗಿ ನಿವಾರಣೆ ಆಗಬೇಕಾದರೆ ಕಾಳಗಿ ತಾಲೂಕನ್ನು ಕಲಬುರಗಿ ಉಪವಿಭಾಗಕ್ಕೆ ಸೇರಿಸಲೇಬೇಕು ಎಂದು ಮಾಜಿ ಶಾಸಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ ಪಾಟೀಲ ಹೆಬ್ಟಾಳ ಹೇಳಿದರು.

ಕಾಳಗಿ ತಾಲೂಕು ಸಂರ್ವಾಂಗೀಣ ಪಕ್ಷಾತೀತ ಹೋರಾಟ ಸಮಿತಿ ಬುಧವಾರ ಹಮ್ಮಿಕೊಂಡ ಬೃಹತ್‌ ಪ್ರತಿಭಟನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಳಗಿ-ಗುಂಡಗುರ್ತಿ-ಕೋಡ್ಲಿ ಹೋಬಳಿ ಸೇರಿಸಿ ನೂತನ ತಾಲೂಕು ರಚಿಸಿದ್ದನ್ನು ಸ್ವಾಗತಿಸುತ್ತೇವೆ. ಆದರೆ ಈ ಭಾಗದ ಜನರು ಸೇಡಂ ಉಪವಿಭಾಗಕ್ಕೆ ಸೇರಿಸಿದ್ದಕ್ಕೆ ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಈ ಎಲ್ಲ ಗ್ರಾಮಗಳು ಕಲಬುರಗಿ ಜಿಲ್ಲೆಗೆ ಕೇವಲ 10 ಕಿ.ಮೀ ಅಂತರದಲ್ಲಿವೆ. ಜನರ ಹಿತದೃಷ್ಟಿಯಿಂದ ಕಲಬುರಗಿ ಉಪವಿಭಾಗಕ್ಕೆ ಸೇರಿಸಿದರೆ ಅನುಕೂಲವಾಗುತ್ತದೆ ಎಂದು ಅಗ್ರಹಿಸಿದರು.

ಕಾಳಗಿ ತಾಲೂಕಿನ ರೈತರು, ಜನಸಾಮಾನ್ಯರು ಸಮೀಪದ ಕಲಬುರಗಿ ಜಿಲ್ಲೆ ಮಾರುಕಟ್ಟೆಯಲ್ಲಿ ಕೃಷಿ ಸಾಮಗ್ರಿ ಖರೀದಿ, ಮಾರಾಟ ಮಾಡುತ್ತಾರೆ. ಶಿಕ್ಷಣ, ವೈದ್ಯಕೀಯ ಸೌಲಭ್ಯಗಳಿಗೆ ಕಲಬುರಗಿಯನ್ನೇ ಅವಲಂಬಿತರಾಗಿದ್ದಾರೆ. ಆದ್ದರಿಂದ ಕಾಳಗಿ ತಾಲೂಕನ್ನು ಸೇಡಂ ಉಪವಿಭಾಗದಿಂದ ರದ್ದುಪಡಿಸಿ
ಕಲಬುರಗಿ ಉಪವಿಭಾಗಕ್ಕೆ ಸೇರಿಸಬೇಕು. ಶೀಘ್ರವೇ ಕಿರಿಯ ನ್ಯಾಯಲಯ ಪ್ರಾರಂಭಿಸಬೇಕು ಎಂದರು. 

ಈ ಮೇಲಿನ ಎಲ್ಲ ವಿಷಯಗಳನ್ನು 23 ಗ್ರಾಪಂಗಳಲ್ಲಿ ಚರ್ಚಿಸಿ ಒಮ್ಮತದಿಂದ ಕಾಳಗಿಯನ್ನು ಕಲಬುರಗಿ ಉಪವಿಭಾಗಕ್ಕೆ ಸೇರಿಸಬೇಕೆಂಬ ನಿರ್ಣಯದ ಮನವಿ ಪತ್ರವನ್ನು ಮುಖ್ಯಮಂತ್ರಿ, ಕಂದಾಯ ಸಚಿವ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಹಾಗೂ ಯಾದಗಿರಿ ಉಸ್ತುವಾರಿ ಸಚಿವರಿಗೆ ಸಲ್ಲಿಸಿದ್ದರೂ ಸಕರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಕೊನೆಯದಾಗಿ ತಹಶೀಲ್ದಾರ ಮೂಲಕ ಮನವಿ ಮಾಡಲಾಗುತ್ತಿದೆ. ಇದಕ್ಕೂ ಯಾವುದೇ ಪ್ರತಿಕ್ರಿಯೆ ಬರದಿದ್ದರೆ ಜನಾಭಿಪ್ರಾಯ ಸಂಗ್ರಹಿಸಿ, ಉಗ್ರಸ್ವರೂಪದ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನೀಲಕಂಠ ಕಾಳೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಸುಮಾರು ಐದು ಸಾವಿರ ಜನರಿದ್ದ ಬೃಹತ್‌ ಪ್ರತಿಭಟನಾ ರ್ಯಾಲಿ ಮುಖ್ಯ ಬಜಾರ್‌ ಮೂಲಕ ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು. ಕಿರಾಣಾ ಬಜಾರ್‌ ಯೂನಿಯನ್‌ ಎಲ್ಲ ಅಂಗಡಿಗಳನ್ನು ಸ್ವಯಂ ಘೋಷಿತವಾಗಿ ಬಂದ್‌ ಮಾಡಿ ಬೆಂಬಲ ನೀಡಿತು.

ಮಾಜಿ ಸಚಿವ ಸುನೀಲ ವಲ್ಯ್ಲಾಪುರೆ, ಜಿಪಂ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ, ದಶರಥ ನಾಮದಾರ ಮಾತನಾಡಿದರು. ಬಸವರಾಜ ಪಾಟೀಲ ಹೇರೂರ, ಭೀಮಶೆಟ್ಟಿ ಮುರುಡಾ, ಶಿವಶರಣಪ್ಪ ಕಮಲಾಪುರ, ಚಂದ್ರಕಾಂತ ವನಮಾಲಿ, ರಾಮಲಿಂಗರೆಡ್ಡಿ ದೇಶಮುಖ, ರಾಜಕುಮಾರ ರಾಜಾಪುರ, ಬಸವರಾಜ ಶಿವಗೋಳ, ರೇವಣಸಿದ್ದಪ್ಪ ಮಾಸ್ಟರ್‌, ಮಲ್ಲಿನಾಥ ಕೊಲಕುಂದಿ, ಸಂತೋಷ ಪಾಟೀಲ, ಪ್ರಶಾಂತ ಕದಂ, ಶೇಖರ ಪಾಟೀಲ, ಸಂತೋಷ ಗಡತಿ, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಸಲಗೂರ, ರವಿ ಹೊಸಬಾವಿ, ಕಾಶಿನಾಥ ಪಾಟೀಲ, ರಾಮಶೆಟ್ಟಿ ಪಾಟೀಲ, ಸುಧಾಕರ ಪಾಟೀಲ, ಜಗ ದೀಶ ಪಾಟೀಲ, ಮಲ್ಲಿಕಾರ್ಜುನ ಹುಳಗೇರಿ, ಮುಕುಂದ ಕೊಡದೂರ ಹಾಗೂ ಕಾಳಗಿ ತಾಲೂಕಿನ ಸಾವಿರಾರು ಜನರು ಇದ್ದರು.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.