ಜಿಮ್ಸ್ ನಲ್ಲಿ 3 ದಿನದಲ್ಲಿ ಲ್ಯಾಬ್ ಆರಂಭ: ಶ್ರೀರಾಮುಲು
ವಿದೇಶದಿಂದ ಬಂದ 16 ಜನರ ಮೇಲೆ ನಿಗಾ
Team Udayavani, Mar 15, 2020, 12:04 PM IST
ಕಲಬುರಗಿ: ಕೊರೊನಾ ಸೋಂಕಿನೊಂದಿಗೆ ಕಲಬುರಗಿಯ ಒಬ್ಬ ಮನುಷ್ಯನನ್ನು ಕಳೆದುಕೊಂಡ ನೋವು ನನಗಿದೆ. ಸೋಂಕು ಪತ್ತೆಗೆ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮೂರು ದಿನದೊಳಗೆ ಲ್ಯಾಬ್ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲ್ಯಾಬ್ ಆರಂಭಿಸಲು ಪ್ರಯತ್ನಗಳು ನಡೆಯುತ್ತಿವೆ. ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಹ ಮನವಿ ಮಾಡಿದ್ದಾರೆ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಲ್ಯಾಬ್ ಆರಂಭಿಸಿ ತಕ್ಷಣವೇ ವರದಿ ಬರುವಂತೆ ಮಾಡಿ, ಜನರ ಆತಂಕ ಕಡಿಮೆ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಿಲ್ಲಾಧಿಕಾರಿ, ಶಾಸಕರು ಸೇರಿದಂತೆ ಅನೇಕ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಸೋಂಕಿನಿಂದ ಮೃತಪಟ್ಟ 76 ವರ್ಷದ ವೃದ್ಧನ ಜೊತೆ ಸಂಪರ್ಕದಲ್ಲಿದ 71 ಜನರ ಮೇಲೆ ನಿಗಾ ಇಡಲಾಗಿದೆ. ಕಲಬುರಗಿಯಿಂದ ಸೋಂಕು ಬೇರೆಡೆ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ವಿದೇಶದಿಂದ 16 ಜನ: ಕಲಬುರಗಿ ಜಿಲ್ಲೆಗೆ ಬೇರೆ-ಬೇರೆ ದೇಶಗಳಲ್ಲಿ ಇದುವರೆಗೆ 16 ಜನರು ಬಂದಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. ಸೌದಿ ಅರೇಬಿಯಾ, ಶ್ರೀಲಂಕಾ, ಸಿಂಗಾಪುರ, ನೆದರಲ್ಯಾಂಡ್ ಹಾಗೂ ಅಮೆರಿಕದಿಂದ ಬಂದಿದ್ದಾರೆ. ಇವರೆಲ್ಲರ ಮೇಲೆ 14 ದಿನ ನಿಗಾ ಇರಿಸಲಾಗಿದೆ ಎಂದು ತಿಳಿಸಿದರು.
ಸೋಂಕಿತ ತಪಾಸಣೆ ನಡೆಸುವ ವೈದ್ಯರಿಗೆ ವಿಶೇಷ ಕಿಟ್ ನೀಡಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ 80 ಸುರಕ್ಷಾ ಕಿಟ್ ಗಳು ಲಭ್ಯ ಇದ್ದವು. ಈಗ 500 ಕಿಟ್‌ಗಳನ್ನು ಕಲಬುರಗಿ ಜಿಲ್ಲೆಗೆ ಒದಗಿಸಲಾಗಿದೆ. ಇವುಗಳನ್ನು ಒಮ್ಮೆ ಮಾತ್ರ ಬಳಸುವಂತವು. ರಾಜ್ಯ ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಸಚಿವರು ಹೇಳಿದರು.
1.10 ಲಕ್ಷ ಜನರ ತಪಾಸಣೆ: ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ 1.10 ಲಕ್ಷ ಜನರ ತಪಾಸಣೆ ಮಾಡಲಾಗಿದೆ. 731 ಜನರಿಗೆ ಇಲ್ಲಿವರೆಗೆ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. 32 ಜನರನ್ನು ಐಸೋಲೇಟೆಡ್ ವಾರ್ಡ್‌ನಲ್ಲಿ ಇರಿಸಲಾಗಿದೆ. ಅವರಲ್ಲಿ 12 ಜನ ಡಿಸ್ಚಾರ್ಜ್ ಆಗುವ ಹಂತದಲ್ಲಿದ್ದಾರೆ. ಕೊರೊನಾ ಬಗ್ಗೆ ಯಾರೂ ಭಯ ಪಡಬಾರದು ಎಂದು ಮನವಿ ಮಾಡಿದರು.
ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಡಾ| ಅವಿನಾಶ ಜಾಧವ, ಜಿಲ್ಲಾ ಧಿಕಾರಿ ಶರತ್ ಬಿ., ಸಿಇಒ ಡಾ| ರಾಜಾ ಪಿ., ಡಿಎಚ್‌ಒ ಡಾ| ಅಬ್ಟಾಸ್ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.