ಕಲಬುರ್ಗಿ ವಿಮಾನ ನಿಲ್ದಾಣ ಲೋಕಾರ್ಪಣೆ

Team Udayavani, Nov 22, 2019, 5:22 PM IST

airport

ಕಲಬುರಗಿ: ನಾಲ್ಕು ದಶಕಗಳ ಕನಸು ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆ ಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿ ನಾಡಿಗೆ ಸಮರ್ಪಿಸಿದರು.

ಬೆಂಗಳೂರಿನ‌ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ OG-117 ಸಂಖ್ಯೆಯ 50 ಸೀಟರ್ ವಾಣಿಜ್ಯ ವಿಮಾನದಿಂದ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಕರ್ನಾಟಕದ ಮೊದಲ ನಾಗರಿಕ ವಿಮಾನಯಾನ ಸೇವೆಗೆ ಚಾಲನೆ ನೀಡಿದರು.

ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಪ್ರಥಮ ವಾಣಿಜ್ಯ ಸಂಚಾರವಾಗಿ ವಿಮಾನ ಭೂಸ್ಪರ್ಶ ಮಾಡುತ್ತಿದಂತೆ ನೀರು‌ ಚಿಮ್ಮುವ ಮೂಲಕ ಪ್ರಯಾಣಿಕರಿಗೆ ವಾಟರ್ ಸಲ್ಯೂಟ್ ನೀಡಿದ್ದು ವಿಶೇಷವಾಗಿತ್ತು.

ಇದೇ ಸಂದರ್ಭದಲ್ಲಿ ಪೋಲೀಸರಿಂದ ಮುಖ್ಯಮಂತ್ರಿಗಳಿಗೆ ಗೌರವ ರಕ್ಷೆ ಸಲ್ಲಿಸಲಾಯಿತು.

ವಾಣಿಜ್ಯ ವಿಮಾನದ ಪ್ರಥಮ ಸಂಚಾರದಲ್ಲಿಯೆ ಮುಖ್ಯಮಂತ್ರಿಗಳ ಪ್ರಯಾಣ. ಸ್ಟಾರ್ ಎರ್ ಸಂಸ್ಥೆಯ OG-118 ವಿಮಾನದ‌ ಮೂಲಕವೆ ಬೆಂಗಳೂರಿಗೆ ಹಿಂದಿರುಗಲಿರುವ ಮುಖ್ಯಮಂತ್ರಿ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಸುಸಂಗೋಪನಾ ಸಚಿವ ಪ್ರಬು ಚವ್ಹಾಣ, ಸಂಸದ ಡಾ.ಉಮೇಶ ಜಾಧವ,ಬೀದರ ಸಂಸದ ಭಗವಂತ ಖೂಬಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಎಂ.ವೈ.ಪಾಟೀಲ, ಸುಭಾಷ ಗುತ್ತೆದಾರ, ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನುರ, ಮಾಜಿ ಶಾಸಕರಾದ ಮಾಲಿಕಯ್ಯ ಗುತ್ತೆದಾರ, ಬಾಬುರಾವ ಚಿಂಚನಸೂರು, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂ.ಎಲ್.ಸಿ. ಶಶೀಲ ಜಿ.ನಮೋಶಿ, ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್ ಖರೀಲಾ, ಏಎಐ ಪ್ರಾಧಿಕಾರ ಅಧ್ಯಕ್ಷ ಅರವಿಂದ ಸಿಂಗ್, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ ಮೋಹನ, ಕೆ.ಎಸ್.ಎಸ್.ಐ.ಡಿ.ಸಿ ವ್ಯವಸ್ಥಾಪಕ‌ ನಿರ್ದೇಶಕ ಗಂಗಾರಮ ಬಡೇರಿಯಾ, ಆರ್.ಸಿ. ಸುಬೋಧ ಯಾದವ, ಐಜಿಪಿ ಮನೀಷ್ ಖರ್ಬಿಕರ್, ಡಿಸಿ ಬಿ.ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಬಿ.ಎನ್.ನಾಗರಾಜ, ಎಸ್.ಪಿ. ವಿನಾಯಕ ಪಾಟೀಲ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ನಂತರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಕಲಬುರಗಿ ವಿನಾನ ನಿಲ್ದಾಣ ಹೊಸ ಅಯಾಮ ನೀಡಲಿದೆ ಎಂದರು.

ರಾಜ್ಯದ ಈಶಾನ್ಯ ಭಾಗಕ್ಕೆ ವಿಮಾನಯಾನ ಸಂಪರ್ಕ ಹೊಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ.

2008 ರಲ್ಲಿ ನನ್ನಿಂದಲೆ ಅಡಿಗಲ್ಲು ಹಾಕಿದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆ ಮಾಡುತ್ತಿದ್ದು, ಯಾವುದೋ ಜನ್ಮದ ಪುಣ್ಯದ ಫಲ ಎಂದು ಭಾವಿಸುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ಘೋಷಣೆ ನಂತರ ಇಂದು ಸಿಮೆಂಟ್ ನಗರಿಯಲ್ಲಿ ವಿಮಾನ ನಿಲ್ದಾಣ ಸೇವೆ ಲಭ್ಯವಾಗುತ್ತಿದ್ದು, ಇಲ್ಲಿನ ಜನರ ಹರ್ಷಕ್ಕೆ ಪಾರವೆ ಇಲ್ಲದಂತಾಗಿದೆ. ಈ ಭಾಗಕ್ಕೆ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಲ್ಬುರ್ಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಮಗ್ರ ಅಭಿವೃದ್ದಿಗೊಳಿಸಿ ಕಲ್ಯಾಣ ಪದದ ನಿಜ ಅರ್ಥದಲ್ಲಿ ಅಭಿವೃದ್ಧಿ ಮಾಡಲಾಗುವುದು.

3.175 ಕಿ.ಮಿ. ಉದ್ದದ ರನ್ವೆ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ವೆ ಇದಾಗಿದೆ. ದೇಶಕ್ಕೆ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರ್ಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಕಲಬುರಗಿ ಜನರ ಪ್ರೀತಿ ನನ್ನ ಮೇಲೆ ತುಸು ಹೆಚ್ಚಿದೆ. ನಿಮ್ಮ ಪ್ರೀತಿಗೆ ಚಿರರುಣಿಯಾಗಿದ್ದು, ನೀವಿಟ್ಟ ಭರವಸೆಗೆ ಯಾವುದೇ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವೆ ಎಂದು ಸಿಎಂ ಹೇಳಿದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.