ಸ್ವಚ್ಛ ಕಲಬುರಗಿಗೆ ಬೃಹತ್‌ ಕಾಲ್ನಡಿಗೆ ಜಾಥಾ

ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

Team Udayavani, Feb 11, 2021, 4:18 PM IST

ಸ್ವಚ್ಛ ಕಲಬುರಗಿಗೆ ಬೃಹತ್‌ ಕಾಲ್ನಡಿಗೆ ಜಾಥಾ

ಕಲಬುರಗಿ: ಮಹಾ ನಗರದ ಸ್ವತ್ಛತೆಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಹಾನಗರ ಪಾಲಿಕೆಗೆ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸಾಥ್‌ ನೀಡಿದ್ದು, ಬುಧವಾರ ಅಧಿಕಾರಿಗಳು, ಎನ್‌ಎಸ್‌ ಎಸ್‌ ವಿದ್ಯಾರ್ಥಿಗಳು, ಪೌರ ಕಾರ್ಮಿಕರು ಸೇರಿ ಎರಡು ಸಾವಿರಕ್ಕೂ ಹೆಚ್ಚು ಜನರು ಬೃಹತ್‌ ಜಾಥಾ ನಡೆಸಿದರು.

ಇಲ್ಲಿನ ಜಗತ್‌ ವೃತ್ತದಲ್ಲಿ ಬೆಳಗ್ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಕೋಶದ ವಿವಿಧ ಕಾಲೇಜುಗಳ 1,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 500ಕ್ಕೂ ಅಧಿಕ ಪೌರ ಕಾರ್ಮಿಕರು ಸಮಾವೇಶಗೊಂಡು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ಮಾಡಿದರು.

“ನನ್ನ ಕಸ, ನನ್ನ ಹೊಣೆ’, “ಸ್ವತ್ಛ ಕಲಬುರಗಿ, ಸ್ವಸ್ಥ ಕಲಬುರಗಿ’, “ಕಲಬುರಗಿ ಮಹಾಜನತೆ ಸ್ವಚ್ಛ ಕಲಬುರಗಿಗೆ ಬೃಹತ್‌ ಕಾಲ್ನಡಿಗೆ ಜಾಥಾತೆಗೆ ಆದ್ಯತೆ ಕೊಡಿ’, “ಬಯಲು ಶೌಚ ನಿಲ್ಲಿಸಿ’, “ಸ್ವಚ್ಛ ಕಲಬುರಗಿಗೆ ಬೃಹತ್‌ ಕಾಲ್ನಡಿಗೆ ಜಾಥಾತೆ ನಮ್ಮೆಲ್ಲರ ಹೊಣೆ’… ಹೀಗೆ ವಿವಿಧ ಘೋಷಣೆಗಳನ್ನು ಕೂಗುತ್ತಾ ಹಾಗೂ ಭಿತ್ತಿ ಫಲಕಗಳನ್ನು ಪ್ರದರ್ಶಿಸುತ್ತಾ ಹಸಿ ಕಸ, ಒಣ ಕಸ ವಿಂಗಡಣೆ, ಪ್ಲಾಸ್ಟಿಕ್‌ ಬಳಕೆ ಕಡಿವಾಣ ಮತ್ತು ಸ್ವತ್ಛ ಕಲಬುರಗಿ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ, ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ| ದಯಾನಂದ ಅಗಸರ, ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ, ಪೊಲೀಸ್‌ ತರಬೇತಿ ಮಹಾ ವಿದ್ಯಾಲಯದ ಪ್ರಾಂಶುಪಾಲ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜಕ ಪ್ರೊ| ರಮೇಶ ಲಂಡನಕರ್‌ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.

ಜಾಥಾ ಉದ್ದೇಶಿಸಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ ಮಾತನಾಡಿ, ಇತ್ತೀಚೆಯ ದಿನಗಳಲ್ಲಿ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಜತೆಗೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕಸದ ಸಮಸ್ಯೆ ಬಗೆಹರಿಸಲು ನಿರಂತರ ಪ್ರಯತ್ನ ಮಾಡುತ್ತಿದೆ. ನಗರದ ಸೌಂದರೀಕರಣ ಕೆಲಸವೂ ಸಾಗಿದೆ. ಜಿಲ್ಲೆ ಸ್ವತ್ಛವಾಗಿ ಇರಬೇಕಾದರೆ ಮತ್ತು ಸ್ವತ್ಛತೆಯ ರ್‍ಯಾಂಕಿಂಗ್‌ನಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ದೊರೆಯಬೇಕಾದರೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಎನ್‌ ಎಸ್‌ಎಸ್‌ ಸ್ವಯಂ ಸೇವಕರ ಸಹಕಾರ ಅಗತ್ಯ ಎಂದು ಹೇಳಿದರು.

ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ ಮಾತನಾಡಿ, ಜನಜಾಗೃತಿ ಅಭಿಯಾನಕ್ಕೆ ವಿಶ್ವವಿದ್ಯಾಲಯ ಸಹಕಾರ ನೀಡಲಿದೆ. ವಿವಿ ವಿದ್ಯಾರ್ಥಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಪಾಲಿಕೆ ಆಯುಕ್ತ ಸ್ನೇಹಲ್‌ ಲೋಖಂಡೆ, ಕಳೆದ ವರ್ಷ ಸ್ವತ್ಛತಾ ರ್‍ಯಾಂಕಿಂಗ್‌ನಲ್ಲಿ ಮಹಾನಗರ ಪಾಲಿಕೆ 321ನೇ ಸ್ಥಾನ ಪಡೆದಿದೆ. ಮತ್ತಷ್ಟು ಉನ್ನತ ಸ್ಥಾನಕ್ಕೇರಬೇಕಾದರೆ ಸ್ವತ್ಛತೆ ಕಾಪಾಡುವುದು ಅವಶ್ಯವಾಗಿದ್ದು, ಇದಕ್ಕಾಗಿ ಸಾರ್ವಜನಿಕರು, ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಕರೆ ನೀಡಿದರು.

ಉತ್ತರ ಮತ ಕ್ಷೇತ್ರದ ಶಾಸಕಿ ಖನೀಜ್‌ ಫಾತಿಮಾ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ| ರಮೇಶ ಲಂಡನಕರ್‌ ಮಾತನಾಡಿ, ಎನ್‌ ಎಸ್‌ಎಸ್‌ ಸ್ವಯಂ ಸೇವಕರು ಹಲವು ತಂಡಗಳಾಗಿ ಮನೆ-ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ನಗರ ಉಪ ಪೊಲೀಸ್‌ ಆಯುಕ್ತ ಡಿ. ಕಿಶೋರ್‌ ಬಾಬು, ನಾಲ್ಕು ಚಕ್ರ ಸಂಘಟನೆಯ ಮಾಲಾ ಕಣ್ಣಿ, ಮಾಲಾ ದಣ್ಣೂರ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಸೋಮವಾರದಿಂದ ಮನೆ-ಮನೆಗೆ 800 ಎನ್‌ಎಸ್‌ಎಸ್‌ ಸ್ವಯಂ ಸೇವಕರು ತೆರಳಲಿದ್ದಾರೆ. ಒಂದು ತಂಡದಲ್ಲಿ ನಾಲ್ವರು ಇರಲಿದ್ದಾರೆ. ಹಸಿ ಕಸ, ಒಣ ಕಸ, ಪ್ಲಾಸ್ಟಿಕ್‌, ಬಯಲು ಶೌಚಾಲಯದ ಬಗ್ಗೆ ಒಬ್ಬೊಬ್ಬರು ಒಂದೊಂದರ ಅರಿವು ಮೂಡಿಸಲಿದ್ದಾರೆ.
ಪ್ರೊ| ರಮೇಶ ಲಂಡನಕರ್‌
ಎನ್‌ಎಸ್‌ಎಸ್‌ ಸಂಯೋಜಕ, ಗುವಿವಿ

ಟಾಪ್ ನ್ಯೂಸ್

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-iip

Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.