ಕಲಬುರಗಿ: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Team Udayavani, Sep 5, 2020, 10:07 PM IST
ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವರ ಗುಡಿಯಲ್ಲಿನ ಹಣದ ಹುಂಡಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಇಬ್ಬರು ಕಳ್ಳರು ಸೇರಿಕೊಂಡು ಹುಂಡಿಯನ್ನು ಹೊತ್ತುಕೊಂಡು ಹೋಗಿರುವ ದೃಶ್ಯ ದೇವಾಲಯದಲ್ಲಿ ಅಳಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಹುಂಡಿಯನ್ನು ದೇವಸ್ಥಾನದ ಹೊರ ಭಾಗದಲ್ಲಿ ಇಡಲಾಗಿತ್ತು. ಕಳ್ಳರು ಹುಂಡಿಯನ್ನು ದೇವಾಲಯ ಹಿಂಭಾಗದಲ್ಲಿ ತೆಗೆದುಕೊಂಡು ಹೋಗಿ ಒಡೆದು ಅದರಲ್ಲಿ ನಗ-ನಾಣ್ಯ ಕಳವು ಮಾಡಿಕೊಂಡು ಹೋಗಿದ್ದಾರೆ. ಹುಂಡಿಯಲ್ಲಿ ಸುಮಾರು ಮೂರ್ನಾಲ್ಕು ಲಕ್ಷ ರೂ.ಗಳು ಸಂಗ್ರಹವಾಗಿರುವ ಅಂದಾಜು ಮಾಡಲಾಗಿದೆ.
ಹುಂಡಿ ಕಳವು ಬಗ್ಗೆ ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಬಸವರಾಜ ಪೊಲೀಸರಿಗೆ ದೂರು ನೀಡಿದ್ದಾರೆ. ಪಿಎಸ್‍ಐ ಶ್ರೀಶೈಲ ಅಂಬಟ್ಟಿ, ಪೊಲೀಸ್ ಸಿಬ್ಬಂದಿ, ಶ್ವಾನದಳ ತಂಡ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.