ಅಕ್ಷರ ಜಾತ್ರೆ: ಬಸ್, ರೈಲ್ವೆ ನಿಲ್ದಾಣದಲ್ಲಿ ಸಹಾಯ ಕೇಂದ್ರ
Team Udayavani, Feb 5, 2020, 8:26 AM IST
ಕಲಬುರಗಿ: ನೃಪತುಂಗನ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದ್ದು, ರಾಜ್ಯದ ವಿಭಾಗಗಳಿಂದ ಕನ್ನಡಾಭಿಮಾನಿಗಳು ಆಗಮಿಸತೊಡಗಿದ್ದಾರೆ.
ಅಕ್ಷರ ಜಾತ್ರೆಗೆ ದೂರದ ಊರುಗಳಿಂದ ಬರುತ್ತಿರುವ ಜನರು ಮತ್ತು ನೋಂದಾಯಿತ ಪ್ರತಿನಿಧಿಗಳ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನೋಂದಣಿ ಮಾಡಿಸಿಕೊಂಡ ಪ್ರತಿನಿಧಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಸಹಾಯಕ ಕೇಂದ್ರಗಳನ್ನು ಸಂಪರ್ಕಿಸುವವರಿಗೆ ಯಾವ ಸ್ಥಳದಲ್ಲಿ ವಾಸ್ತವ್ಯ ಮಾಡಲಾಗಿದೆ ಎಂಬ ಮಾಹಿತಿ ನೀಡಲಾಗುತ್ತಿದೆ.
ಸಾರಿಗೆ ವ್ಯವಸ್ಥೆ: ನೋಂದಾಯಿತ ಪ್ರತಿನಿಧಿಗಳಿಗೆ ಲಾಡ್ಜ್, ಸರ್ಕಾರಿ, ಖಾಸಗಿ ವಸತಿ ನಿಲಯ, ಕಲ್ಯಾಣ ಮಂಟಪಗಳು ಸೇರಿ 113 ಕಡೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಬಂದಿಳಿಯುವವರಿಗೆ ಸಹಾಯ ಕೇಂದ್ರದ ಮೂಲಕ ವಸತಿ ಸ್ಥಳಕ್ಕೆ ಹೋಗಲು ಉಚಿತ ಸಾರಿಗೆ ವ್ಯವಸ್ಥೆ ಸಹ ಮಾಡಲಾಗಿದೆ.
ಸಹಾಯ ಕೇಂದ್ರಗಳ ಜೊತೆಗೆ ಸಹಾಯವಾಣಿಯನ್ನೂ ತೆರೆಯಲಾಗಿದೆ.
ಮೊಬೈಲ್ ಸಂಖ್ಯೆ: 90085 42950, 81055 42950, 72595 42950 ಮತ್ತು 96195 42950ಗೆ ಸಂಪರ್ಕಿಸಬಹುದಾಗಿದೆ.
ವಿಶೇಷ ಸಾರಿಗೆ ಸೌಲಭ್ಯ: ಕಲಬುರಗಿ ನಗರದ ಎಲ್ಲಾ ಬಡಾವಣೆಗಳಿಂದ ಸಮ್ಮೇಳನ ನಡೆಯುವ ಸ್ಥಳವಾದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶೇಷ ಮತ್ತು ಹೆಚ್ಚುವರಿ ನಗರ ಸಾರಿಗೆ ಬಸ್ ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ನಗರದಲ್ಲಿ ಸಂಚರಿಸುವ ಎಲ್ಲ ನಗರ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯಾವುದೇ ಸ್ಥಳದಲ್ಲಿ ಹತ್ತಿ ಇಳಿದರೂ 5. ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಅಲ್ಲದೇ, ನಗರದಲ್ಲಿನ ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಕನಿಷ್ಠ 30 ಜನ ಪ್ರಯಾಣಿಕರಿದ್ದಲ್ಲಿ ಪ್ರತಿ ಪ್ರಯಾಣಿಕರಿಂದ 125 ರೂ. ಪಡೆದು ಸಾರಿಗೆ ಸಂಸ್ಥೆಯಿಂದ ವಾಹನಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Mangaluru: ಕೈಕೊಡುವ ವೆಟ್‌ವೆಲ್; ನಂದಿನಿ, ಬಾವಿ ನೀರು ಕಲುಷಿತ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.