ರೈತರ ಬೆಳೆಗೆ ಬೆಂಬಲ ಬೆಲೆ ನೀಡಲು ಕರವೇ ಆಗ್ರಹ
Team Udayavani, Sep 24, 2019, 10:16 AM IST
ಚಿತ್ತಾಪುರ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ಪ್ರತಿ ಗ್ರಾಪಂ ಒಂದರಂತೆ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರವೇ (ನಾರಾಯಣಗೌಡ) ಬಣದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ತಾಲೂಕಿನ ರೈತರು ಬೆಳೆದ ತೊಗರಿ, ಹೆಸರು, ಉದ್ದು ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು. ಗ್ರಾಪಂ ಮಟ್ಟದಲ್ಲಿ ಪಹಾಣಿ ವಿತರಿಸಬೇಕು. ಗ್ರಾಪಂ ಕೇಂದ್ರ ಸ್ಥಾನಗಳಿಗೆ ಒಂದರಂತೆ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು. ದಿಗ್ಗಾಂವ ಜಿಪಂ ಮಟ್ಟದಲ್ಲಿ ನಾಡ ಕಚೇರಿ ಆರಂಭಿಸಬೇಕು. ರೈತರಿಗೆ ಸಂಬಂಧಪಟ್ಟ ಸಮಸ್ಯೆ 10 ದಿನಗಳಲ್ಲಿ ಪರಿಹರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಸಲಾಗಿದೆ.
ಕರವೇ ಕಾರ್ಯಕರ್ತರಾದ ಮಹಾದೇವ ತೆಲಗರ್, ಪರಮೇಶ್ವರ ಝಳಕಿ, ಸಂತೋಷ ಕೊಂಕನಳ್ಳಿ, ಶಿವಕುಮಾರ ಸುಣಗಾರ್, ಈರಣ್ಣ ಕೊಳ್ಳಿ, ವೀರೇಂದ್ರ ವಿಶ್ವಕರ್ಮ, ಮೌನೇಶ ನಾಲವಾರ, ಶಂಕರ ನಾಲವಾರ, ಲಿಂಗಬಸವ ತೆಂಗಳಿ, ರಾಯಪ್ಪ ಪೂಜಾರಿ, ದೇವದಾಸ ಔರಸಂಗ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.