ಕರ್ನಾಟಕ ಕೇಂದ್ರೀಯ ವಿವಿ ಅಂತಾರಾಷ್ಟ್ರೀಯ ವಿವಿಯಾಗಲಿ
Team Udayavani, Sep 14, 2017, 10:38 AM IST
ಕಲಬುರಗಿ: ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯವು ಸ್ವಲ್ಪ ಕಾಲಾವಧಿಯಲ್ಲಿಯೆ ಅಪ್ರತಿಮ ಸಾಧನೆಮಾಡಿರುವುದು ಸಂತೋಷದಾಯಕವಾಗಿದೆ. ಆದರೆ ಸಾಧಿಸಬೇಕಾದದ್ದು ಇನ್ನು ಸಾಕಷ್ಟಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ|ಎಸ್.ಎನ್ ಹೆಗಡೆ ಹೇಳಿದರು.
ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯದ ಶಿಕ್ಷಕ ಮತ್ತು ಸಂಶೋಧನಾವಿದ್ಯಾರ್ಥಿಗಳೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಅಂತಾರಾಷ್ಟ್ರೀಯಮಟ್ಟದ ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಆಕರ್ಷಿಸುವುದು ಅತ್ಯವಶ್ಯಕವಾಗಿದೆ. ಯಾವುದೇ ವಿಶ್ವವಿದ್ಯಾಲಯ ಅದು ಹೊಂದಿರುವ ಗುಣಾತ್ಮಕ ಶಿಕ್ಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಹೆಸರುವಾಸಿಯಾಗಿರುತ್ತದೆಯೇ ವಿನಃ ಆಡಳಿತಗಾರರಿಂದಲ್ಲ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವನ್ನು ನಿರ್ಮಿಸುವಲ್ಲಿ ಪ್ರೊ| ಡಿ.ಸಿ. ಪಾವಟೆ ಹೇಗೆ ತಮ್ಮ ಪಾತ್ರ ನಿರ್ವಹಿಸಿದರೋ ಅದೆ ರೀತಿ ಪ್ರೊ| ಎಚ್.ಎಂ ಮಹೇಶ್ವರಯ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಏಳಿಗೆಗೆ ಪಾತ್ರ ಅತಿಮುಖ್ಯವಾಗಿದೆ ಎಂದರು.
ಶಿಕ್ಷಕರು ಯು.ಜಿ.ಸಿಯ ಎ.ಪಿ.ಐ ಅಂಕಗಳಿಗೆ ತಲೆಕೆಡಿಸಿಕೊಳ್ಳದೆ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಮತ್ತು ತಮ್ಮನ್ನುತಾವು ಸಾಮಾಜಿಕವಾಗಿ ಉಪಯುಕ್ತವಾದಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರೊ| ಎಸ್.ಎನ್. ಹೆಗಡೆ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್.ಆರ್. ನಿರಂಜನ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿಹಾಗೂ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಈಭಾಗದ ಎಲ್ಲಾ ವಿಶ್ವವಿದ್ಯಾಲಯಗಳು ಒಟ್ಟಾಗಿಕಾರ್ಯನಿರ್ವಹಿಸಬೇಕಾದ ಅವಶ್ಯತಕೆಯಿದೆ ಎಂದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಪ್ರಾಸ್ತಾವಿಕ ಮಾತನಾಡಿದರು. ಡಾ| ರಾಜೀವ್ ಜೋಶಿ ಸ್ವಾಗತಿಸಿದರು, ಕುಲಸಚಿವ ಪ್ರೊ|ಚಂದ್ರಕಾಂತ ಯಾತನೂರ ವಂದಿಸಿದರು. ಪ್ರೊ| ಎನ್. ನಾಗರಾಜು, ವಿವಿಧ ನಿಕಾಯಗಳ ಡೀನ್‌ಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.